ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರ ದಾಳಿಯ ನಂತರ ಭಾರತವು ಪಾಕಿಸ್ತಾನದ ಮೇಲೆ ತೀವ್ರ ಪ್ರತಿಕಾರದ ಕ್ರಮ ಕೈಗೊಂಡಿದ್ದು, ಇದೀಗ ಭಾರತೀಯ ಸೇನೆ ‘ಆಪರೇಷನ್ ಸಿಂಧೂರ’ ಎಂಬ ಸೇನಾ ಕಾರ್ಯಾಚರಣೆಯನ್ನು ಪಾಕಿಸ್ತಾನದ ವಿರುದ್ಧ ಇಂದು ಅಧಿಕೃತವಾಗಿ ಪ್ರಾರಂಭಿಸಿದೆ.
ಪಹಲ್ಲಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದನಾ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆಯು ಮಂಗಳವಾರ ತಡರಾತ್ರಿ ಪಾಕ್ ಆಕ್ರಮಿತ ಕಾಶ್ಮೀರ ಮತ್ತು ಪಾಕಿಸ್ತಾನದಲ್ಲಿರುವ ಉಗ್ರರ ನೆಲೆಗಳನ್ನು ಗುರಿಯಾಗಿಸಿಕೊಂಡು ನಿರ್ದಿಷ್ಟ ದಾಳಿ ನಡೆಸಲಾಗುತ್ತಿದೆ.
ಒಂಬತ್ತು ಸ್ಥಳಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ ಎಂದು ಭಾರತೀಯ ಸೇನೆ ಹೇಳಿದೆ. ಈ ಕಾರ್ಯಾಚರಣೆಗೆ ‘ಆಪರೇಷನ್ ಸಿಂಧೂರ” ಎಂದು ಹೆಸರಿಡಲಾಗಿದೆ. ಭಾರತದ ವಿವಿಧ ಸ್ಥಳಗಳ ಮೇಲೆ ಆಂತರಿಕ ಭದ್ರತಾ ಪಡೆಗಳಿಗೆ ಹೈ ಅಲರ್ಟ್ ಘೋಷಿಸಲಾಗಿದೆ.
ಲಷ್ಕರ್ ಎ ತಯಬಾ ಮತ್ತು ಜೈಷ್ ಎ ಮೊಹಮ್ಮದ್ ಉಗ್ರ ಸಂಘಟನೆಗಳ ನೆಲೆಗಳನ್ನು ಗುರಿಯಾಗಿಸಿಕೊಂಡು ಭಾರತದಿಂದ ದಾಳಿ ನಡೆಸಲಾಗಿದೆ. ದಾಳಿಗಳಲ್ಲಿ ಮೂವತ್ತಕ್ಕೂ ಹೆಚ್ಚು ಉಗ್ರರು ಸತ್ತಿದ್ದಾರೆ ಎಂಬುದಾಗಿ ಕೆಲ ವರದಿಗಳು ಹೇಳಿವೆ.
ಮಾಕ್ ಡ್ರಿಲ್ ಗೆ ಸೂಚನೆ ಬಂದ ಬೆನ್ನಲ್ಲೇ ಪಾಕಿಸ್ತಾನದ ವಿರುದ್ಧ ಭಾರತ ಸೇನೆಗಳು ಅಧೀಕೃತವಾಗಿ ಕಾರ್ಯಾಚರಣೆಗೆ ಇಳಿದಿವೆ. ಅತ್ತ ಪಾಕಿಸ್ತಾನದ ಗಡಿಯಲ್ಲೂ ತೀವ್ರ ಕಟ್ಟೆಚ್ಚರ ವಹಿಸಲಾಗಿದ್ದು, ಸೇನಾ ಚಟುವಟಿಕೆಗಳು ಬಿರುಸುಪಡೆದುಕೊಂಡಿವೆ.
ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…
ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…