ಆಮ್ ಆದ್ಮಿ ಪಾರ್ಟಿಗೆ ರಾಷ್ಟ್ರೀಯ ಪಕ್ಷ ಮಾನ್ಯತೆ: ಭಾರತೀಯ ಚುನಾವಣಾ ಆಯೋಗದಿಂದ ಮಾನ್ಯತೆ

ಭಾರತೀಯ ಚುನಾವಣಾ ಆಯೋಗದಿಂದ ಆಮ್ ಆದ್ಮಿ ಪಕ್ಷವನ್ನು (ಎಎಪಿ) ರಾಷ್ಟ್ರೀಯ ಪಕ್ಷವೆಂದು ಸೋಮವಾರ ಘೋಷಣೆ ಆಗಿದೆ.

ಆದರೆ, ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್‌ (ಟಿಎಂಸಿ), ಶರದ್‌ ಪವಾರ್‌ ನೇತೃತ್ವದ ನ್ಯಾಷನಲಿಸ್ಟ್‌ ಕಾಂಗ್ರೆಸ್ (ಎನ್‌ಸಿಪಿ) ಹಾಗೂ ಸಿಪಿಐ ಪಕ್ಷಗಳಿಗೆ ರಾಷ್ಟ್ರೀಯ ಸ್ಥಾನಮಾನ ಘೋಷಣೆ ಮಾಡದ ಭಾರತೀಯ ಚುನಾವಣಾ ಆಯೋಗ.

ರಾಷ್ಟ್ರೀಯ ಪಕ್ಷದ ಸ್ಥಾನಮಾನ ಪಡೆಯಲು, ಕನಿಷ್ಠ ನಾಲ್ಕು ರಾಜ್ಯಗಳಲ್ಲಿ ರಾಜ್ಯ ಪಕ್ಷವಾಗಿ ಗುರುತಿಸಿಕೊಂಡಿರಬೇಕು. ಮತ್ತು ಆ ರಾಜ್ಯಗಳ ವಿಧಾನಸಭೆಯಲ್ಲಿ ಕನಿಷ್ಠ ಇಬ್ಬರು ಸದಸ್ಯರನ್ನು ಹೊಂದಿರಬೇಕು.

ಎಎಪಿ ದೆಹಲಿ, ಪಂಜಾಬ್ ರಾಜ್ಯಗಳಲ್ಲಿ ಅಧಿಕಾರದಲ್ಲಿದೆ. ಗೋವಾ ಮತ್ತು ಗುಜರಾತ್ ರಾಜ್ಯಗಳಲ್ಲಿ ಇಬ್ಬರಿಗಿಂತ ಹೆಚ್ಚಿನ ಶಾಸಕರನ್ನು ಹೊಂದಿದೆ. ಈ ಆಧಾರದ ಮೇಲೆ ಎಎಪಿಗೆ ರಾಷ್ಟ್ರೀಯ ಸ್ಥಾನಮಾನ ದೊರಕಿದೆ.

Leave a Reply

Your email address will not be published. Required fields are marked *