2023ರ ರಾಜ್ಯ ವಿಧಾನಸಭಾ ಚುನಾವಣೆಗೆ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಪುರುಷೋತ್ತಮ್ ಅವರು ನಾಮಪತ್ರ ಸಲ್ಲಿಸಿದರು.
ನಗರದ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ಪುರುಷೋತ್ತಮ್ ಅವರು ಚುನಾವಣಾಧಿಕಾರಿ ತೇಜಸ್ ಕುಮಾರ್ ಅವರಿಗೆ ತಮ್ಮ ಉಮೇದುವಾರಿಕೆನ್ನು ಸಲ್ಲಿಸಿದರು. ಈ ವೇಳೆ ಪತ್ನಿ ಪುಷ್ಪಲತಾ, ಆಮ್ ಆದ್ಮಿ ಪಾರ್ಟಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಸಮೀರ್ ಅಸದ್ ಉಪಸ್ಥಿತರಿದ್ದರು.
ನಾಮಪತ್ರ ಸಲ್ಲಿಸುವುದಕ್ಕೂ ಮುನ್ನಾ ಎಎಪಿ ಅಭ್ಯರ್ಥಿ ಪುರುಷೋತ್ತಮ್ ಅವರು ನಗರದ ನೆಲದಾಂಜನೇಯ ಸ್ವಾಮಿ ದೇವಾಲಯದಿಂದ 500ಕ್ಕೂ ಹೆಚ್ಚು ಕಾರ್ಯಕರ್ತರೊಂದಿಗೆ ಪಾದಯಾತ್ರೆ ನಡೆಸಿ ಶಕ್ತಿ ಪ್ರದರ್ಶನ ಮಾಡಿದರು.
ದೆಹಲಿ ಹಾಗೂ ಪಂಜಾಬ್ ಮಾದರಿ ಸರ್ಕಾರವನ್ನು ರಾಜ್ಯದಲ್ಲೂ ಜಾರಿಗೆ ತರಬೇಕು ಎಂಬ ಧ್ಯೇಯದೊಂದಿಗೆ ಚುನಾವಣಾ ಪ್ರಚಾರ ನಡೆಸುತ್ತಿರುವ ಎಎಪಿ ಅಭ್ಯರ್ಥಿ ಪುರುಷೋತ್ತಮ್.