ಆಯತಪ್ಪಿ ಚರಂಡಿಗೆ ಬಿದ್ದ ಹಸು: ಸುರಕ್ಷಿತವಾಗಿ ಮೇಲೆ ತೆಗೆದ ಅಗ್ನಿಶಾಮಕ‌ ಸಿಬ್ಬಂದಿ

ಮನೆಯ‌ ಮುಂದೆ‌ ನೀರು ಕುಡಿಯಲು ಹೋದ ಹಸುವೊಂದು ಆಯತಪ್ಪಿ ಚರಂಡಿಗೆ ಬಿದ್ದ ಘಟನೆ ನಗರದ ರೈಲ್ವೆ ನಿಲ್ದಾಣದ ಎಂ.ಎ.ಪ್ರಕಾಶ್ ಲೇಔಟ್ 1ನೇ ಮುಖ್ಯರಸ್ತೆಯಲ್ಲಿ‌ ನಡೆದಿದೆ.

ಇಲ್ಲಿನ‌ ವೆಂಕಟೇಶ್ ಎಂಬುವರ ಹಸು ಚರಂಡಿಗೆ ಬಿದ್ದು ಸಿಕ್ಕಿಹಾಕಿಕೊಂಡಿತ್ತು. ಚರಂಡಿ‌ ಕಿರಿದಾಗಿದ್ದ ಕಾರಣ ಹಸು‌ ಮೇಲೆಳಲು ಸಾಧ್ಯವಾಗಲಿಲ್ಲ. ಕೂಡಲೇ ಸ್ಥಳೀಯರು ಅಗ್ನಿಶಾಮಕ‌ ದಳದ ಸಿಬ್ಬಂದಿಗೆ ಕರೆ‌ಮಾಡಿ‌ ಮಾಹಿತಿ‌ ನೀಡಿದರು.

ಸ್ಥಳಕ್ಕೆ ಬಂದ ಅಗ್ನಿಶಾಮಕ‌ ಸಿಬ್ಬಂದಿ ಹಗ್ಗ ಹಾಗೂ ಓಸ್ ಪೈಪ್ ಗಳ ಮೂಲಕ ಹಸುವನ್ನು ಸುರಕ್ಷಿತವಾಗಿ ಮೇಲೆ ತೆಗೆದರು. ರಕ್ಷಣಾ ಕಾರ್ಯಾಚರಣೆ ವೇಳೆ ಹಸುವಿಗೆ ಸಣ್ಣಪುಟ್ಟ ಗಾಯಗಳಾದವು. ಪಶುವೈದ್ಯರನ್ನು ಕರೆಸಿ‌ ಚಿಕಿತ್ಸೆ ಕೊಡಿಸಲಾಯಿತು.

ಚರಂಡಿಗಳ ಮೇಲೆ‌ ಸ್ಲ್ಯಾಬ್ ಅಳವಡಿಸಿದ ಕಾರಣ ಈ ರೀತಿಯ ಘಟನೆಗಳು ಸಂಭವಿಸುತ್ತಿವೆ. ಕೂಡಲೇ ನಗರಸಭೆಯವರು ಚರಂಡಿಗಳಿಗೆ ಸ್ಲ್ಯಾಬ್ ಅಳವಡಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದರು.

Ramesh Babu

Journalist

Recent Posts

ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ಬೈಕ್‌ಗಳ ಮುಖಾಮುಖಿ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: ತಾಲ್ಲೂಕಿನ ಮಾಕಳಿ ರೈಲ್ವೆ ನಿಲ್ದಾಣದ ಸಮೀಪ ಹಿಂದೂಪುರ–ಯಲಹಂಕ ಹೆದ್ದಾರಿಯಲ್ಲಿ ಶನಿವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್…

8 hours ago

ಸೆ.28ರಿಂದ 30ರವರೆಗೆ ಬ್ಯಾಂಕ್ ನೌಕರರ ಮುಷ್ಕರ: ಭಾನುವಾರ ಬ್ಯಾಂಕ್‌ ಸೇವೆ ಲಭ್ಯ

ಬ್ಯಾಂಕ್ ನೌಕರರ ಒಕ್ಕೂಟವು ಸೆ.28ರಿಂದ 30ರವರೆಗೆ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರು ಹಾಗೂ ಗ್ರಾಹಕರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ…

22 hours ago

ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ- ಸಚಿವ ಎನ್. ಚಲುವರಾಯಸ್ವಾಮಿ ಭರವಸೆ*

ಜನರು ನೀಡಿದ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕು‌ ಎಂಬ ಉದ್ದೇಶದಿಂದ ನನಗಿರುವ ಅಧಿಕಾರವನ್ನು ಬಳಸಿಕೊಂಡು ನಿಮ್ಮ ಸೇವೆ ಮಾಡುತ್ತಿದ್ದೆನೆ ಎಂದು ಮಂಡ್ಯ…

22 hours ago

ಹೈನುಗಾರಿಕೆಗೆ ಅಜೋಲಾ ಆಸರೆ: ಹಸಿರು ಮೇವಿನ ಕೊರತೆಗೆ ಪರ್ಯಾಯ: ಹಾಲು ನೀಡುವ ರಾಸುಗಳಿಗೆ ಪೌಷ್ಟಿಕ ಪೂರಕ ಆಹಾರ

ಬೆಂಗಳೂರು ಗ್ರಾಮಾಂತರ: ಮಳೆಯ ಕೊರತೆ ಹಾಗೂ ಹಸಿರು ಮೇವಿನ ಅಭಾವದಿಂದ ಜಾನುವಾರು ಸಾಕಾಣಿಕೆದಾರರು ಎದುರಿಸುತ್ತಿರುವ ಸಂಕಷ್ಟಕ್ಕೆ ಪರ್ಯಾಯವಾಗಿ, ಜಾನುವಾರುಗಳಿಗೆ ಸ್ಥಳೀಯವಾಗಿಯೇ…

1 day ago

ಸೆ. 28ಕ್ಕೆ ಅವತಿ ಬೆಟ್ಟದಲ್ಲಿ “ವಿಶ್ವ ಪ್ರವಾಸೋದ್ಯಮ ದಿನಾಚರಣೆ-2026″

ವಿಶ್ವ ಪ್ರವಾಸೋದ್ಯಮ ದಿನಾಚರಣೆಯನ್ನು ದೇವನಹಳ್ಳಿ ತಾಲ್ಲೂಕಿನ ಅವತಿಯ ತಿಮ್ಮರಾಯಸ್ವಾಮಿ ಬೆಟ್ಟದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ…

2 days ago

ಮಾದಕ ವಸ್ತುಗಳ (ಡ್ರಗ್ಸ್) ಸಂಪೂರ್ಣ ನಿಯಂತ್ರಣಕ್ಕೆ ಎಲ್ಲಾ ಇಲಾಖೆಗಳು ಒಟ್ಟಾಗಿ ಕರ್ತವ್ಯ ನಿರ್ವಹಿಸಿ – ಜಿಲ್ಲಾಧಿಕಾರಿ ಡಾ.ಕೆ.ಎನ್.ಅನುರಾಧ

ಜಿಲ್ಲೆಯಲ್ಲಿ ಮಾದಕ ವಸ್ತುಗಳ (ಡ್ರಗ್ಸ್) ಹಾವಳಿಯನ್ನು ಸಂಪೂರ್ಣವಾಗಿ ತೊಡೆದುಹಾಕಲು ಎಲ್ಲಾ ಇಲಾಖೆಗಳು ಒಟ್ಟಾಗಿ ಕೈಜೋಡಿಸಿ ಕರ್ತವ್ಯ ನಿರ್ವಹಿಸಿ ಎಂದು ಜಿಲ್ಲಾಧಿಕಾರಿ…

2 days ago