ಚಾಮರಾಜನಗರದ ಕೊಳ್ಳೇಗಾಲದಲ್ಲಿ ಕಲ್ಯಾಣ ಮಂಟಪಕ್ಕೆ ತೆರಳುತ್ತಿದ್ದ ವರ ರವೀಶ್ ಗೆ ಚಾಕು ಇರಿದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ.
ರವೀಶ್ನ ಮದ್ವೆಯಾಗಬೇಕಿದ್ದ ವಧು ನಯನಾ, ಪ್ರಿಯಕರ ದರ್ಶನ್, ಓರ್ವ ಅಪ್ರಾಪ್ತನನ್ನು ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದಾಗ ಅಸಲಿಯತ್ತು ಬಯಲಾಗಿದೆ. ಮದುವೆ ನಿಲ್ಲಿಸಲು ಪ್ರಿಯಕರನ ಜೊತೆ ಸೇರಿ ನಯನಾ (ರವೀಶ್ನ ಮದ್ವೆಯಾಗಬೇಕಿದ್ದ ಯುವತಿ) ಈ ರೀತಿ ಪ್ಲ್ಯಾನ್ ಮಾಡಿದ್ದಾಳೆ ಎನ್ನುವುದು ಕೊಳ್ಳೇಗಾಲ ಪೊಲೀಸ್ ತನಿಖೆಯಲ್ಲಿ ಬಟಾಬಯಲಾಗಿದೆ.
ತಮಟೆ ಹೊಡೆಯುವ ಕೆಲಸ ಮಾಡ್ತಿದ್ದ ದರ್ಶನ್ ಎನ್ನುವಾತನನ್ನು ನಯನಾ ಲವ್ ಮಾಡುತ್ತಿದ್ದಳು. ಆದ್ರೆ, ದರ್ಶನ್ ಕೆಲಸದ ಬಗ್ಗೆ ಮನೆಯಲ್ಲಿ ಹೇಳಲು ಹೆದರಿದ್ದಳು. ಹೀಗಾಗಿ ಈ ಮದುವೆ ನೀನೇ ನಿಲ್ಲಿಸು ಎಂದು ನಯನಾ, ಪ್ರಿಯಕರ ದರ್ಶನ್ಗೆ ಹೇಳಿದ್ದಳು.
ಅದರಂತೆ ಪ್ರಿಯಕರ ದರ್ಶನ್ ಗ್ಯಾಂಗ್, ಜನವರಿ 27ರಂದು ರವೀಶ್ ಕೊಳ್ಳೇಗಾಲದ ಕಲ್ಯಾಣ ಮಂಟಪ್ಪಕ್ಕೆ ತೆರಳುತ್ತಿದ್ದ ಮಾರ್ಗಮಧ್ಯೆಯೇ ಕಾರು ಅಡ್ಡಗಟ್ಟಿದ್ದು, ನೀನು ಮದ್ವೆ ಮನೆಗಲ್ಲ ಸ್ಮಶಾನಕ್ಕೆ ತೆರಳಬೇಕೆಂದು ಚಾಕು, ಡ್ರ್ಯಾಗರ್ನಿಂದ ಹಲ್ಲೆ ಪರಾರಿಯಾಗಿತ್ತು.
ಬಳಿಕ ರವೀಶ್ ದಾಖಲಾಗಿದ್ದ ಆಸ್ಪತ್ರೆಗೆ ನಯನಾ ಬಂದು ತನ್ನ ಮದುವೆಯಾಗು ಎಂದು ನಾಟಕವಾಡಿದ್ದಳು. ಆದಾಗಲೇ ರವೀಶ್ಗೂ ಸಹ ಅನುಮಾನ ಬಂದಿದ್ದರಿಂದ ನಯನಾಳನ್ನು ಮದುವೆಯಾಗಲು ನಿರಾಕರಿಸಿದ್ದ. ಇದೀಗ ನಯನಾಳ ಅಸಲಿ ನೌಟಂಕಿ ಆಟ ಬಯಲಾಗಿದೆ.
ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…
ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್ (MIL)…
ಸ್ಟಿಂಗ್ ಆಪರೇಷನ್ ಮಾಡಿಸುವುದಕ್ಕೆ ಮುಖ್ಯಮಂತ್ರಿಗಳಿಗೆ ತಲೆ ಕೆಟ್ಟಿದೆಯೇ? ಪದೇಪದೇ ಈ ವಿಚಾರದಲ್ಲಿ ಮುಖ್ಯಮಂತ್ರಿಗಳನ್ನು ಎಳೆದು ತರುವ ಎಚ್.ಡಿ. ಕುಮಾರಸ್ವಾಮಿ ಅವರಿಗೆ…
ದೊಡ್ಡಬಳ್ಳಾಪುರ: ಯಲಹಂಕ ಸಮೀಪದ ರಾಜಾನುಕುಂಟೆ ರೈಲ್ವೆ ನಿಲ್ದಾಣದ ಬಳಿ ರೈಲ್ವೆ ಹಳಿಗಳ ಮೇಲೆ ನಿಲ್ಲಿಸಿದ್ದ ಎರಡು ರೈಲು ಬೋಗಿಗಳಿಗೆ ಬೆಂಕಿ…
ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ತೆಗೆಯುವ ದಂಧೆ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸುಮಾರು 35 ಟ್ರ್ಯಾಕ್ಟರ್ಗಳು…
ನಮ್ಮ ತೆರಿಗೆ ನಮ್ಮ ಹಕ್ಕು, ಈ ವಿಷಯದಲ್ಲಿ ರಾಜಕೀಯ ಮೀರಿ ವೈಜ್ಞಾನಿಕ ಸಮತೋಲನ ಸಾಧಿಸಬೇಕಾದುದು ಇಂದಿನ ತುರ್ತು ಅಗತ್ಯವಾಗಿದೆ..... ಕೇಂದ್ರದ…