ದೊಡ್ಡಬಳ್ಳಾಪುರ ತಾಲೂಕಿನ ಆರೂಡಿ ಅರಣ್ಯ ಪ್ರದೇಶದಲ್ಲಿ ನೀಲಗಿರಿ ಮರಗಳನ್ನು ತೆರವುಗೊಳಿಸಿರುವ ಅರಣ್ಯದಲ್ಲಿ ವೈವಿಧ್ಯತೆಯ ಕಾಡು ಬೀಜಗಳ ನೇರ ಬೀಜ ಬಿತ್ತನೆ ಕಾರ್ಯಕ್ರಮವನ್ನು ಯುವ ಸಂಚಲನ (ರಿ), ವಲಯ ಅರಣ್ಯ ಇಲಾಖೆ ದೊಡ್ಡಬಳ್ಳಾಪುರ ಹಾಗೂ ಸೇಂಟ್ ಕ್ಲಾರೆಟ್ ಕಾಲೇಜು ಬೆಂಗಳೂರು ಇವರ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ ಎಂದು ಎಲ್ಲಾ ಜನರು ಅರಿತುಕೊಂಡರೆ ಪರಿಸರದ ಎಷ್ಟೋ ಸಮಸ್ಯೆಗಳು ಬಗೆಹರಿಯುತ್ತವೆ. ಅದರಲ್ಲೂ, ಇಂದಿನ ಯುವಜನತೆಗೆ ಪರಿಸರದ ಕುರಿತು ಅರಿವು ಮೂಡಿಸುವುದು ಬಹುಮುಖ್ಯ ಕೆಲಸವಾಗಿದೆ. ಇಂತಹ ಪರಿಸರದ ಕಾರ್ಯಗಳು ಯಶಸ್ವಿಯಾಗಬೇಕಾದರೆ ಯುವ ಸಂಚಲನದಂತಹ ಕೊಂಡಿಗಳು ಅರಣ್ಯ ಇಲಾಖೆಗೆ ಬಹುಮುಖ್ಯವಾಗಿ ಬೇಕಾಗುತ್ತದೆ ಎಂದು ವಲಯ ಅರಣ್ಯ ಸಂರಕ್ಷಣಾಧಿಕಾರಿ ಕೃಷ್ಣೇಗೌಡ ತಿಳಿಸಿದರು.
ಈ ಸಮಯದಲ್ಲಿ ಸೇಂಟ್ ಕ್ಲಾರೆಟ್ ಕಾಲೇಜಿನ ಉಪನ್ಯಾಸಕರಾದ ಶ್ರೀಯುತ ವಿನೀತ್ ಹಾಗೂ ಕಾಲೇಜಿನ ವಿವಿಧ ವಿಭಾಗದ 50 ಕ್ಕೂ ಹೆಚ್ಚು ವಿದ್ಯಾರ್ಥಿ/ವಿದ್ಯಾರ್ಥಿನಿಯರು, ಯುವ ಸಂಚಲನ ತಂಡದ ಸದಸ್ಯರು ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…
ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…