Categories: ಕೋಲಾರ

ಆರೋಗ್ಯ, ಕೃಷಿ, ಎಪಿಎಂಸಿ ಮಾರುಕಟ್ಟೆಯ ಅಭಿವೃದ್ಧಿಗೆ ಪೂರಕವಾದ ಬಜೆಟ್ ಗೆ ಸಿಎಂಆರ್ ಶ್ರೀನಾಥ್ ಒತ್ತಾಯ

ಕೋಲಾರ: ಜಿಲ್ಲೆಯಲ್ಲಿನ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಔಷಧಗಳ ಲಭ್ಯತೆಯೊಂದಿಗೆ ದಿನದ 24 ಗಂಟೆಯೂ ಚಿಕಿತ್ಸೆ ನೀಡುವ ವೈದ್ಯರನ್ನೊಳಗೊಂಡ ಚಿಕಿತ್ಸಾ ಸೌಲಭ್ಯವನ್ನು ನೀಡುವಂತೆ ಬಜೆಟ್‌ ನಲ್ಲಿ ಹಣಕಾಸು ನಿಗದಿ ಪಡಿಸಬೇಕು ಎಂದು ಜೆಡಿಎಸ್‌ ಮುಖಂಡ ಸಿಎಂಆರ್ ಶ್ರೀನಾಥ್ ರಾಜ್ಯ ಸರಕಾರವನ್ನು ಒತ್ತಾಯಿಸಿದರು.

ರಾಜ್ಯ ಬಜೆಟ್‌ ಕುರಿತಂತೆ ಪತ್ರಿಕಾ ಹೇಳಿಕೆ ಮೂಲಕ ಒತ್ತಾಯಿಸಿದ ಅವರು, ನಗರದಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಮಹಿಳೆಯರಿಗೆ ವಿಶೇಷವಾದ ಕ್ಯಾನ್ಸರ್ ನಂತಹ ಆಂತರಿಕ ಚಿಕಿತ್ಸೆಗಳನ್ನು ಒಂದೇ ಸೂರಿನಡಿಯಲ್ಲಿ ಚಿಕಿತ್ಸೆ ನೀಡುವಂತ ಘಟಕವನ್ನು ಸ್ಥಾಪಿಸಿ ಮಹಿಳೆಯರ ಆರೋಗ್ಯ ಗೌಪ್ಯತೆಯನ್ನು ಕಾಪಾಡುವ ನಿಟ್ಟಿನಿಲ್ಲಿ ಹಣಕಾಸು ನಿಗದಿಪಡಿಸಬೇಕು

ಜಿಲ್ಲೆಯಲ್ಲಿ ಪ್ರವಾಸಿ ತಾಣಗಳು ನಿರ್ಲಕ್ಷ್ಯಕ್ಕೊಳಗಾಗಿ ಹಾಳು ಕೊಂಪೆಗಳಾಗಿವೆ. ಇವುಗಳನ್ನು ತ್ವರಿತವಾಗಿ ಶುಚಿಗೊಳಿಸಿ, ಅಭಿವೃದ್ಧಿ ಪಡಿಸಿ, ಮೂಲಭೂತ ಸೌಕರ್ಯಗಳೊಂದಿಗೆ ಗೈಡ್‌ ಗಳನ್ನು ನೇಮಕ ಮಾಡಿ ಕೋಲಾರದ ಇತಿಹಾಸ ಸಾರುವ ಮತ್ತು ಧಾರ್ಮಿಕ ಕೇಂದ್ರಗಳನ್ನು ಉಳಿಸಿ ಅಭಿವೃದ್ಧಿಪಡಿಸಲು ಬಜೆಟ್ ನಲ್ಲಿ ಹಣ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು

ಕೋಲಾರ ನಗರ ಪ್ರದೇಶವನ್ನು ಸ್ಮಾರ್ಟ್‌ ಸಿಟಿ ಅಡಿಯಲ್ಲಿ ವಿಶೇಷ ಅನುಧಾನ ನಿಗದಿಪಡಿಸಿ ನಗರಾಭಿವೃದ್ಧಿ ಮತ್ತು ಶೌಚಾಲಯಗಳು ಹಾಗೂ ನೈರ್ಮಲ್ಯ ಕಾಪಾಡಬೇಕು ಕೃಷಿ ಉತ್ಪನ್ನ ಮಾರುಕಟ್ಟೆ ಜಾಗ, ವರ್ತುಲ ರಸ್ತೆ ಮತ್ತು ಕೆ.ಸಿ ವ್ಯಾಲಿ ಮೂರನೇ ಹಂತದ ಶುದ್ಧೀಕರಣ ಹಲವಾರು ವರ್ಷಗಳಿಂದ ಸರ್ಕಾರದ ನಿರ್ಲಕ್ಷ್ಯದಿಂದ ನೆನೆಗುದಿಗೆ ಬಿದ್ದಿದೆ. ಆದ್ದರಿಂದ ಈ ಕೂಡಲೆ ತ್ವರಿತವಾಗಿ ಈ ಎಲ್ಲಾ ಕಾಮಗಾರಿಗಳನ್ನು ಕೈಗೆತ್ತಿಕೊಂಡು ಪೂರ್ಣಗೊಳಿಸುವಂತೆ ಬಜೆಟ್‌ ಮಂಡನೆಯಾಗಬೇಕು ಎಂದು ಸಿಎಂಆರ್ ಶ್ರೀನಾಥ್ ಒತ್ತಾಯಿಸಿದರು

Ramesh Babu

Journalist

Recent Posts

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

12 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

19 hours ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

22 hours ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

22 hours ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

1 day ago

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…

1 day ago