ಮಾಜಿ ಕೇಂದ್ರ ಸಚಿವ ಹಾಗೂ ಶ್ರೀ ದೇವರಾಜ ಅರಸ್ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಆರ್.ಎಲ್.ಜಾಲಪ್ಪ ಅವರ ಪ್ರಥಮ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಜಾಲಪ್ಪ ಸ್ಮೃತಿವನ, ವಸ್ತು ಸಂಗ್ರಹಾಲಯ ಲೋಕಾರ್ಪಣೆ ’ಜಾಲಪ್ಪ ನೆನಪು’ ಕಾರ್ಯಕ್ರಮ ಶನಿವಾರ ಇಲ್ಲಿನ ಆರ್‌ಎಲ್‌ಜೆಐಟಿ ಕ್ಯಾಂಪಸ್‌ನಲ್ಲಿ ನಡೆಯಿತು.ಕಾರ್ಯಕ್ರಮವನ್ನು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿದ ಗಣ್ಯರು
ಜಾಲಪ್ಪ ಅವರ ಪುಣ್ಯಸ್ಥಳವನ್ನು ಸ್ಮೃತಿವನವಾಗಿ ಅಭಿವೃದ್ದಿಪಡಿಸಿ ಫೋಟೋ ಗ್ಯಾಲರಿ ಮತ್ತು ವಸ್ತು ಸಂಗ್ರಹಾಲಯವನ್ನು ಸ್ಥಾಪಿಸಲಾಗಿದೆ. ಜಾಲಪ್ಪ ಅವರು ನಡೆದು ಬಂದ ಹಾದಿಯನ್ನು ಬಿಂಬಿಸುವ ಛಾಯಾಚಿತ್ರಗಳು, ಜಾಲಪ್ಪ ಅವರ ಅನನ್ಯ ವಸ್ತು-ವಿಶೇಷತೆಗಳನ್ನು ಸಂಗ್ರಹಿಸಿಡುವ ಪ್ರಯತ್ನ ಮಾಡಲಾಗಿದೆ.
ಅಮೃತ ಶಿಲೆಯಲ್ಲಿ ಕೆತ್ತಲಾಗಿರುವ ಪುತ್ಥಳಿಯನ್ನು ವಸ್ತು ಸಂಗ್ರಹಾಲಯದಲ್ಲಿ ಲೋಕಾರ್ಪಣೆ ಮಾಡಲಾಗಿದೆ.
ಈ ವೇಳೆ ವಿಧಾನಸಭಾ ಮಾಜಿ ಸ್ಪೀಕರ್ ರಮೇಶ್ ಕುಮಾರ್, ಪಿ.ಜಿ.ಆರ್. ಸಿಂಧ್ಯಾ, ಮಾಜಿ ಶಾಸಕ ವೆಂಕಟಾಚಲಯ್ಯ, ಶಾಸಕ ಟಿ.ವೆಂಕಟರಮಣಯ್ಯ, ರೇಷ್ಮೆ ಮಂಡಳಿ ಅಧ್ಯಕ್ಷ ಬಿ.ಸಿ.ನಾರಾಯಣಸ್ವಾಮಿ, ಖ್ಯಾತ ವಕೀಲ ಎಂ.ಟಿ.ನಾಣಯ್ಯ, ಪಿಎಲ್ ಡಿ ಬ್ಯಾಂಕ್ ಅದ್ಯಕ್ಷ ಲಕ್ಷ್ಮೀನಾರಾಯಣ್, ಸೇರಿದಂತೆ ಇತರರು ಉಪಸ್ಥಿತರಿದ್ದರು.