ಆರ್‌ಒ ಘಟಕಗಳ ನೀರಿನ ಗುಣಮಟ್ಟ ಪ್ರಮಾಣಪತ್ರ ಪ್ರದರ್ಶನಕ್ಕೆ ಸದಸ್ಯರ ಆಗ್ರಹ

ದೊಡ್ಡಬಳ್ಳಾಪುರ: ನಗರದಲ್ಲಿನ ಎಲ್ಲಾ ಆರ್‌ಒ ಕುಡಿಯುವ ನೀರಿನ ಘಟಕಗಳ ನೀರಿನ ಗುಣಮಟ್ಟವನ್ನು ನಿಯಮಿತವಾಗಿ ಪರೀಕ್ಷಿಸಿ, ಅದರ ಪ್ರಮಾಣಪತ್ರವನ್ನು ಸಾರ್ವಜನಿಕರ ವೀಕ್ಷಣೆಗೆ ಪ್ರದರ್ಶಿಸಬೇಕು ಎಂದು ನಗರಸಭೆ ಸದಸ್ಯರು ಸಾಮಾನ್ಯ ಸಭೆಯಲ್ಲಿ ಆಗ್ರಹಿಸಿದರು.

ನಗರಸಭೆ ಕಾರ್ಯಾಲಯದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಸದಸ್ಯರು, ನಗರದಲ್ಲಿ ಸುಮಾರು 40 ಆರ್‌ಒ ಕುಡಿಯುವ ನೀರಿನ ಘಟಕಗಳು ಕಾರ್ಯನಿರ್ವಹಿಸುತ್ತಿದ್ದು, ಅವುಗಳಲ್ಲಿ ನೀರಿನ ಗುಣಮಟ್ಟ ಪರೀಕ್ಷೆ ಸಮರ್ಪಕವಾಗಿ ನಡೆಯುತ್ತಿಲ್ಲ ಎಂದು ಆರೋಪಿಸಿದರು.

ಲ್ಯಾಬ್‌ಗಳಲ್ಲಿ ಪರೀಕ್ಷೆ ನಡೆಸಿದರೂ ಅದರ ಪ್ರಮಾಣಪತ್ರಗಳನ್ನು ಘಟಕಗಳಲ್ಲಿ ಪ್ರದರ್ಶಿಸಲಾಗುತ್ತಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಆರ್‌ಒ ಘಟಕಗಳ ನಿರ್ವಹಣೆಯನ್ನು ಗುತ್ತಿಗೆ ಪಡೆದವರು ಕೇವಲ ಹಣ ಸಂಗ್ರಹಿಸುವುದರಲ್ಲೇ ನಿರತರಾಗಿದ್ದು, ಸ್ವಚ್ಛತೆ ಹಾಗೂ ಉಪಕರಣಗಳ ನಿರ್ವಹಣೆಗೆ ಅಗತ್ಯ ಗಮನ ನೀಡುತ್ತಿಲ್ಲ. ಇದರಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿದೆ. ಈ ಸಮಸ್ಯೆಯನ್ನು ಶೀಘ್ರವಾಗಿ ಪರಿಷ್ಕರಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸದಸ್ಯರು ಒತ್ತಾಯಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ನಗರಸಭೆ ಪೌರಾಯುಕ್ತ ಕಾರ್ತಿಕೇಶ್ವರ್, ನಗರದ ಎಲ್ಲಾ ಆರ್‌ಒ ಘಟಕಗಳ ಸ್ಥಿತಿಗತಿಗಳನ್ನು ಪರಿಶೀಲಿಸಲು ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ನಗರದ ಕುಡಿಯುವ ನೀರಿನ ಸಮಸ್ಯೆಯೂ ಪ್ರಸ್ತಾಪವಾಯಿತು. ಕೆಲ ಪ್ರದೇಶಗಳಲ್ಲಿ ದಿನಬಳಕೆಯ ನೀರು ಸಮರ್ಪಕವಾಗಿ ಪೂರೈಕೆಯಾಗುತ್ತಿಲ್ಲ. ಪರಿಣಾಮವಾಗಿ ಸಾರ್ವಜನಿಕರು ಟ್ಯಾಂಕರ್ ನೀರಿನ ಮೊರೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೆಲವು ಕಡೆಗಳಲ್ಲಿ ಕಲುಷಿತ ನೀರಿನ ಸಮಸ್ಯೆಯೂ ಕಂಡುಬರುತ್ತಿದೆ ಎಂದು ಸದಸ್ಯರು ತಿಳಿಸಿದರು.

ನಗರದಲ್ಲಿ ಪ್ರಸ್ತುತ 90 ಬೋರ್‌ವೆಲ್‌ಗಳು ಕಾರ್ಯನಿರ್ವಹಿಸುತ್ತಿದ್ದು, ಕಳೆದ ಬೇಸಿಗೆಯಲ್ಲಿ ನೀರಿನ ಕೊರತೆ ಮತ್ತು ವಿದ್ಯುತ್ ವ್ಯತ್ಯಯದಿಂದ ನೀರಿನ ಪೂರೈಕೆಯಲ್ಲಿ ಸಮಸ್ಯೆಗಳು ಎದುರಾಗಿದ್ದವು ಎಂದರು. ನೀರಿನ ಸಮಸ್ಯೆ ನಿವಾರಣೆಗೆ ಹೆಚ್ಚುವರಿ ಬೋರ್‌ವೆಲ್‌ಗಳನ್ನು ಕೊರೆಸುವ ಕ್ರಮ ಕೈಗೊಳ್ಳಲಾಗಿದೆ ಹಾಗೂ ಯುಜಿಡಿ ನಿರ್ವಹಣೆಯ ಕೆಲಸವೂ ನಡೆಯುತ್ತಿದೆ ಎಂದು ನಗರಸಭೆ ಪೌರಾಯುಕ್ತ ಕಾರ್ತಿಕೇಶ್ವರ್ ಹೇಳಿದರು.

ನಗರಸಭೆಯ ಹಿರಿಯ ಸದಸ್ಯ ಎಂ.ಜಿ. ಶ್ರೀನಿವಾಸ್ ಮಾತನಾಡಿ, ಅಧಿಕಾರಿಗಳು ಜವಾಬ್ದಾರಿಯಿಂದ ಕೆಲಸ ನಿರ್ವಹಿಸಿದರೆ ಅನೇಕ ಸಮಸ್ಯೆಗಳನ್ನು ತಪ್ಪಿಸಬಹುದು ಎಂದರು. ಜಕ್ಕಲುಮಡಗು ನೀರಿನ ಹಂಚಿಕೆಯನ್ನು ಹೆಚ್ಚಿಸುವ ಸಾಧ್ಯತೆಗಳ ಕುರಿತು ಪರಿಶೀಲನೆ ನಡೆಸಬೇಕು ಹಾಗೂ ನೀರಿನ ಸಂಪನ್ಮೂಲಗಳನ್ನು ವೃದ್ಧಿಸಲು ಕ್ರಮ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು. ದೊಡ್ಡಬಳ್ಳಾಪುರ ಸುತ್ತಮುತ್ತ ಕೈಗಾರಿಕಾ ಪ್ರದೇಶಗಳು ವೇಗವಾಗಿ ಅಭಿವೃದ್ಧಿಯಾಗುತ್ತಿದ್ದರೂ, ಅಗತ್ಯ ಮೂಲಸೌಕರ್ಯಗಳು ಸಮರ್ಪಕವಾಗಿ ಒದಗಿಸಲಾಗುತ್ತಿಲ್ಲ ಎಂದು ಅವರು ಅಭಿಪ್ರಾಯಪಟ್ಟರು.

ಸಭೆಯಲ್ಲಿ ರಸ್ತೆ ಗುಂಡಿಗಳ ಸಮಸ್ಯೆ, ಇ-ಆಫೀಸ್ ಕಾರ್ಯಗಳ ವಿಳಂಬ, ಯುಜಿಡಿ ನಿರ್ವಹಣೆ, ಕಸದ ವಿಲೇವಾರಿ ಸೇರಿದಂತೆ ವಿವಿಧ ನಾಗರಿಕ ಸಮಸ್ಯೆಗಳ ಕುರಿತು ಚರ್ಚೆ ನಡೆಯಿತು.

ಸಂಜಯನಗರದ ಎಸ್‌ಆರ್‌ಸಿ ಗರಡಿ ಮನೆಯ ನಿರ್ವಹಣಾ ಜವಾಬ್ದಾರಿಯನ್ನು ಟ್ರಸ್ಟ್‌ಗೆ ನೀಡುವ ವಿಚಾರವೂ ಸಭೆಯಲ್ಲಿ ಪ್ರಸ್ತಾಪವಾಯಿತು.

ಸಭೆಯಲ್ಲಿ ನಗರಸಭೆ ಉಪಾಧ್ಯಕ್ಷ ವೆಂಕಟೇಶ್(ಬಂತಿ), ನಿಕಟಪೂರ್ವ ಅಧ್ಯಕ್ಷೆ ಸುಮಿತ್ರಾ ಕೆ, ಹಿರಿಯ ಸದಸ್ಯರಾದ ತ.ನ. ಪ್ರಭುದೇವ್, ರವಿಕುಮಾರ್, ಪದ್ಮನಾಭ, ಶಿವು, ಮಲ್ಲೇಶ್ ಹಾಗೂ ನಗರಸಭೆ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…

9 hours ago

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

11 hours ago

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

17 hours ago

ಹೃದಯ ವೈಶಾಲ್ಯತೆ ಮತ್ತು ಶುದ್ಧತೆ…

" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…

18 hours ago

ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ: ಪಿಡಿಒ ಗೌರಮ್ಮ

ಚಿಕ್ಕನಾಯಕನಹಳ್ಳಿ ಸೆ.07: ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ ಹಾಗಾಗಿ ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಕ್ಷಿ…

1 day ago

ಅರ್ಹ ರೈತರು ಸೌಲಭ್ಯಗಳನ್ನು ಪಡೆದುಕೊಳ್ಳಿ : ಪಿಡಿಒ ರಂಜಿತ

ಚಿಕ್ಕನಾಯಕನಹಳ್ಳಿ ಸೆ.08: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…

1 day ago