ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್, ಗಾಂಧಿ ಮತ್ತು ಸಂವಿಧಾನದ ಆಶಯಗಳ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಜಾತಿ-ಧರ್ಮದ ಸಹಿಷ್ಣತೆ ಇರುವ, ಸರ್ವರನ್ನೂ ಒಳಗೊಳ್ಳುವ ಪರಂಪರೆ ನಮ್ಮದು. ಮನುಷ್ಯರನ್ನು ಜಾತಿ-ಧರ್ಮದ ನೆಪದಲ್ಲಿ ವಿರೋಧಿಸುವ ಕೆಲವರು ಪ್ರಾಣಿಗಳನ್ನು ಪ್ರೀತಿಸುತ್ತಾರೆ. ಪ್ರಾಣಿಗಳನ್ನು ಪ್ರೀತಿಸುವುದು ತಪ್ಪಲ್ಲ, ಆದರೆ ಮನುಷ್ಯರನ್ನು ವಿರೋಧಿಸುವುದು ತಪ್ಪು ಸಿಎಂ ಸಿದ್ದರಾಮಯ್ಯ ಹೇಳಿದರು.
ಆರ್ಥಿಕವಾಗಿ ಸರ್ವರಿಗೂ ಶಕ್ತಿ ಬಂದರೆ ಜಾತಿ ಹೋಗುತ್ತದೆ. ಬುದ್ಧ, ಬಸವಣ್ಣ ಅವರು ಜಾತಿ ಹೋಗಬೇಕೆಂದು ಹೋರಾಟ ಮಾಡಿದರೂ ಇನ್ನೂ ಜಾತಿ ಹೋಗಿಲ್ಲ. ಬಸವಣ್ಣನನ್ನು ಪ್ರೀತಿಸ್ತೀವಿ, ಪೂಜಿಸ್ತೀವಿ ಆದರೆ ಬಸವಣ್ಣರನ್ನು ಪಾಲಿಸುವುದಿಲ್ಲ. ಇದು ಇಂದಿನ ದುರಂತ.
ಜಾತಿ ಅಸಮಾನತೆ ಕಾರಣಕ್ಕೆ ನೊಂದಿದ್ದ ಅಂಬೇಡ್ಕರ್ ಅವರು ಬೌದ್ಧ ಧರ್ಮಕ್ಕೆ ಸೇರಿ, ತಾನು ಹಿಂದೂವಾಗಿ ಹುಟ್ಟಿದರೂ ಹಿಂದೂವಾಗಿ ಸಾಯುವುದಿಲ್ಲ ಎಂದು ಘೋಷಿದಿದ್ದರು ಎಂದರು.
ಒಳಮೀಸಲಾತಿ ಕುರಿತಾದ ಗೊಂದಲ ನಿವಾರಿಸಲು ನಾಗಮೋಹನ್ ದಾಸ್ ಅವರ ಸಮಿತಿ ರಚಿಸಿದ್ದೇವೆ. ಸಮಿತಿಯ ಶಿಫಾರಸ್ಸಿನಂತೆ ದತ್ತಾಂಶ ಸಂಗ್ರಹಕ್ಕೆ ಸಮೀಕ್ಷೆ ಆರಂಭಿಸಿದ್ದೇವೆ. ಮೂರು ಹಂತಗಳಲ್ಲಿ ಸಮೀಕ್ಷೆ ನಡೆಯಲಿದೆ. ಈ ಸಮೀಕ್ಷೆ ಒಳ ಮೀಸಲಾತಿಯ ಎಲ್ಲಾ ಗೊಂದಲಗಳನ್ನು ನಿವಾರಿಸುತ್ತದೆ ಎನ್ನುವ ಭರವಸೆ ಇದೆ ಎಂದು ಹೇಳಿದರು.
ಅಂಬೇಡ್ಕರ್ ಅವರು ಮೀಸಲಾತಿ ಕೊಡದೇ ಹೋಗಿದ್ದರೆ ನಾವು ಮನುಷ್ಯರಾಗಲು ಸಾಧ್ಯವೇ ಇರಲಿಲ್ಲ. ನಾನು ಮುಖ್ಯಮಂತ್ರಿಯೂ ಆಗುತ್ತಿರಲಿಲ್ಲ . ಶತ ಶತಮಾನಗಳ ಕಾಲ ಶೂದ್ರ ಸಮುದಾಯವನ್ನು ಶಿಕ್ಷಣದಿಂದ ದೂರ ಇಡಲಾಗಿತ್ತು. ಸಂವಿಧಾನದ ಕಾರಣದಿಂದ ಶಿಕ್ಷಣ ಪಡೆದು ಮುಖ್ಯಮಂತ್ರಿ ಆದೆ, ಇಲ್ಲದಿದ್ದರೆ ಕುರಿನೊ, ಎಮ್ಮೆನೊ ಕಾಯ್ಕಂಡು ಇರಬೇಕಿತ್ತು ಎಂದರು.
ನಮ್ಮ ಸ್ಥಿತಿಗೆ ಶಿಕ್ಷಣ ಮತ್ತು ಸಾಮಾಜಿಕ ಪರಿಸ್ಥಿತಿಗಳೇ ಕಾರಣವೇ ಹೊರತು ಹಣೆಬರಹ ಕಾರಣ ಅಲ್ಲ. ಪೂರ್ವ ಜನ್ಮದ ಪಾಪದ ಕಾರಣಕ್ಕೆ ಈಗ ಬಡತನ ಬಂದಿದೆ ಎನ್ನುವ ಕರ್ಮ ಸಿದ್ಧಾಂತ ಅಪ್ಪಟ ಸುಳ್ಳು. ಅದಕ್ಕೇ ಕರ್ಮ ಸಿದ್ದಾಂತ ತಿರಸ್ಕರಿಸಿ ಎಂದು ಬಸವಣ್ಣನವರು ಕರೆ ನೀಡಿದರು ಎಂದು ತಿಳಿಸಿದರು.
ರಾಜ್ಯ ಸರ್ಕಾರದ ಬಳಿ ಅಭಿವೃದ್ಧಿಗೆ ಹಣ ಇಲ್ಲ ಎಂದು ಬಿಜೆಪಿಯವರು ಸುಳ್ಳು ಹೇಳುತ್ತಿದ್ದಾರೆ. ಇಂದು ಒಂದೇ ದಿನ 140 ಕೋಟಿ ಅಭಿವೃದ್ಧಿ ಕಾರ್ಯಗಳನ್ನು ಹೆಚ್.ಡಿ.ಕೋಟೆ ಜನಕ್ಕೆ ಅರ್ಪಿಸಿದ್ದೇವೆ ಎಂದರು.
ಬಿಜೆಪಿಯವರಿಗೆ ಮಾನ ಮರ್ಯಾದೆ ಇಲ್ಲ. ಅವರು ಸುಳ್ಳು ಹೇಳ್ತಾರೆ, ನೀವು ನಂಬ್ತೀರಿ. ಈ ಬಾರಿ ₹8,000 ಕೋಟಿ ಶಾಸಕರ ಅನುದಾನ, ಸಾವಿರಾರು ಕೋಟಿ ಹಣ ಅಭಿವೃದ್ಧಿ ಕಾರ್ಯಗಳಿಗೆ ಮೀಸಲಿಟ್ಟಿದ್ದೇವೆ. 55 ಸಾವಿರ ಕೋಟಿ ಗ್ಯಾರಂಟಿ ಯೋಜನೆಗಳಿಗೆ ತೆಗೆದಿರಿಸಿದ್ದೀವಿ. 80 ಸಾವಿರ ಕೋಟಿ ಬಂಡವಾಳ ವೆಚ್ಚಕ್ಕೆ ಮೀಸಲಿರಿಸಿಟ್ಟೇವೆ. ಈ ಹಣ ಎಲ್ಲಿಂದ ಬಂತು? ಎಂದು ಪ್ರಶ್ನೆ ಮಾಡಿದರು.
ಬಿಜೆಪಿಯವರು ಸತ್ಯದ ತಲೆ ಮೇಲೆ ಹೊಡೆದಂತೆ ಸುಳ್ಳು ಹೇಳ್ತಾರೆ. ಹಾಲಿನ ದರ 4ರೂ ಹೆಚ್ಚು ಮಾಡಿ ಇದರಲ್ಲಿ ಒಂದೂ ರೂಪಾಯಿಯನ್ನೂ ನಾವು ಇಟ್ಟುಕೊಳ್ಳದೆ ಅಷ್ಟನ್ನೂ ರೈತರಿಗೆ, ಗೋಸಾಕಾಣಿಕೆದಾರರಿಗೆ ವರ್ಗಾಯಿಸಿದ್ದೇವೆ.
ಆದರೆ ಬಿಜೆಪಿ ಚಿನ್ನ, ಬೆಳ್ಳಿ, ಡೀಸೆಲ್, ಪೆಟ್ರೋಲ್ , ಅಡುಗೆ ಅನಿಲ, ಬೇಳೆ, ಗೊಬ್ಬರ, ಎಣ್ಣೆ ಕಾಳು ಸೇರಿ ಎಲ್ಲದರ ಬೆಲೆ ಹೆಚ್ಚಿಸಿದ್ದು ಕೇಂದ್ರದ ಬಿಜೆಪಿ ಸರ್ಕಾರ. ಆದ್ದರಿಂದ ಜನಾಕ್ರೋಶ ಇರುವುದು ಬಿಜೆಪಿ ಸರ್ಕಾರದ ಮೋದಿಯವರ ವಿರುದ್ಧವೇ ಹೊರತು ನಮ್ಮ ಸರ್ಕಾರದ ಮೇಲಲ್ಲ ಎಂದರು.
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…