Categories: ಮೈಸೂರು

ಆರ್ಥಿಕವಾಗಿ ಸರ್ವರಿಗೂ ಶಕ್ತಿ ಬಂದರೆ ಜಾತಿ ಹೋಗುತ್ತದೆ- ಸಿಎಂ ಸಿದ್ದರಾಮಯ್ಯ

ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್, ಗಾಂಧಿ ಮತ್ತು ಸಂವಿಧಾನದ ಆಶಯಗಳ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಜಾತಿ-ಧರ್ಮದ ಸಹಿಷ್ಣತೆ ಇರುವ, ಸರ್ವರನ್ನೂ ಒಳಗೊಳ್ಳುವ ಪರಂಪರೆ ನಮ್ಮದು. ಮನುಷ್ಯರನ್ನು ಜಾತಿ-ಧರ್ಮದ ನೆಪದಲ್ಲಿ ವಿರೋಧಿಸುವ ಕೆಲವರು ಪ್ರಾಣಿಗಳನ್ನು ಪ್ರೀತಿಸುತ್ತಾರೆ. ಪ್ರಾಣಿಗಳನ್ನು ಪ್ರೀತಿಸುವುದು ತಪ್ಪಲ್ಲ, ಆದರೆ ಮನುಷ್ಯರನ್ನು ವಿರೋಧಿಸುವುದು ತಪ್ಪು ಸಿಎಂ ಸಿದ್ದರಾಮಯ್ಯ ಹೇಳಿದರು.

ಆರ್ಥಿಕವಾಗಿ ಸರ್ವರಿಗೂ ಶಕ್ತಿ ಬಂದರೆ ಜಾತಿ ಹೋಗುತ್ತದೆ. ಬುದ್ಧ, ಬಸವಣ್ಣ ಅವರು ಜಾತಿ ಹೋಗಬೇಕೆಂದು ಹೋರಾಟ ಮಾಡಿದರೂ ಇನ್ನೂ ಜಾತಿ ಹೋಗಿಲ್ಲ. ಬಸವಣ್ಣನನ್ನು ಪ್ರೀತಿಸ್ತೀವಿ, ಪೂಜಿಸ್ತೀವಿ ಆದರೆ ಬಸವಣ್ಣರನ್ನು ಪಾಲಿಸುವುದಿಲ್ಲ. ಇದು ಇಂದಿನ ದುರಂತ.
ಜಾತಿ ಅಸಮಾನತೆ ಕಾರಣಕ್ಕೆ ನೊಂದಿದ್ದ ಅಂಬೇಡ್ಕರ್ ಅವರು ಬೌದ್ಧ ಧರ್ಮಕ್ಕೆ ಸೇರಿ, ತಾನು ಹಿಂದೂವಾಗಿ ಹುಟ್ಟಿದರೂ ಹಿಂದೂವಾಗಿ ಸಾಯುವುದಿಲ್ಲ ಎಂದು ಘೋಷಿದಿದ್ದರು ಎಂದರು.

ಒಳ‌ಮೀಸಲಾತಿ ಕುರಿತಾದ ಗೊಂದಲ ನಿವಾರಿಸಲು ನಾಗಮೋಹನ್ ದಾಸ್ ಅವರ ಸಮಿತಿ ರಚಿಸಿದ್ದೇವೆ. ಸಮಿತಿಯ ಶಿಫಾರಸ್ಸಿನಂತೆ ದತ್ತಾಂಶ ಸಂಗ್ರಹಕ್ಕೆ ಸಮೀಕ್ಷೆ ಆರಂಭಿಸಿದ್ದೇವೆ. ಮೂರು ಹಂತಗಳಲ್ಲಿ ಸಮೀಕ್ಷೆ ನಡೆಯಲಿದೆ. ಈ ಸಮೀಕ್ಷೆ ಒಳ ಮೀಸಲಾತಿಯ ಎಲ್ಲಾ ಗೊಂದಲಗಳನ್ನು ನಿವಾರಿಸುತ್ತದೆ ಎನ್ನುವ ಭರವಸೆ ಇದೆ‌ ಎಂದು ಹೇಳಿದರು.

ಅಂಬೇಡ್ಕರ್ ಅವರು ಮೀಸಲಾತಿ ಕೊಡದೇ ಹೋಗಿದ್ದರೆ ನಾವು ಮನುಷ್ಯರಾಗಲು ಸಾಧ್ಯವೇ ಇರಲಿಲ್ಲ. ನಾನು ಮುಖ್ಯಮಂತ್ರಿಯೂ ಆಗುತ್ತಿರಲಿಲ್ಲ . ಶತ ಶತಮಾನಗಳ ಕಾಲ ಶೂದ್ರ ಸಮುದಾಯವನ್ನು ಶಿಕ್ಷಣದಿಂದ ದೂರ ಇಡಲಾಗಿತ್ತು. ಸಂವಿಧಾನದ ಕಾರಣದಿಂದ ಶಿಕ್ಷಣ ಪಡೆದು ಮುಖ್ಯಮಂತ್ರಿ ಆದೆ, ಇಲ್ಲದಿದ್ದರೆ ಕುರಿನೊ, ಎಮ್ಮೆನೊ ಕಾಯ್ಕಂಡು ಇರಬೇಕಿತ್ತು ಎಂದರು.

ನಮ್ಮ ಸ್ಥಿತಿಗೆ ಶಿಕ್ಷಣ ಮತ್ತು ಸಾಮಾಜಿಕ ಪರಿಸ್ಥಿತಿಗಳೇ ಕಾರಣವೇ ಹೊರತು ಹಣೆಬರಹ ಕಾರಣ ಅಲ್ಲ. ಪೂರ್ವ ಜನ್ಮದ ಪಾಪದ ಕಾರಣಕ್ಕೆ ಈಗ ಬಡತನ ಬಂದಿದೆ ಎನ್ನುವ ಕರ್ಮ ಸಿದ್ಧಾಂತ ಅಪ್ಪಟ ಸುಳ್ಳು. ಅದಕ್ಕೇ ಕರ್ಮ‌ ಸಿದ್ದಾಂತ ತಿರಸ್ಕರಿಸಿ ಎಂದು ಬಸವಣ್ಣನವರು ಕರೆ ನೀಡಿದರು ಎಂದು ತಿಳಿಸಿದರು.

ರಾಜ್ಯ ಸರ್ಕಾರದ ಬಳಿ ಅಭಿವೃದ್ಧಿಗೆ ಹಣ ಇಲ್ಲ ಎಂದು ಬಿಜೆಪಿಯವರು ಸುಳ್ಳು ಹೇಳುತ್ತಿದ್ದಾರೆ. ಇಂದು ಒಂದೇ ದಿನ 140 ಕೋಟಿ ಅಭಿವೃದ್ಧಿ ಕಾರ್ಯಗಳನ್ನು ಹೆಚ್.ಡಿ.ಕೋಟೆ ಜನಕ್ಕೆ ಅರ್ಪಿಸಿದ್ದೇವೆ ಎಂದರು.

ಬಿಜೆಪಿಯವರಿಗೆ ಮಾನ ಮರ್ಯಾದೆ ಇಲ್ಲ. ಅವರು ಸುಳ್ಳು ಹೇಳ್ತಾರೆ, ನೀವು ನಂಬ್ತೀರಿ. ಈ ಬಾರಿ ₹8,000 ಕೋಟಿ ಶಾಸಕರ ಅನುದಾನ, ಸಾವಿರಾರು ಕೋಟಿ ಹಣ ಅಭಿವೃದ್ಧಿ ಕಾರ್ಯಗಳಿಗೆ ಮೀಸಲಿಟ್ಟಿದ್ದೇವೆ. 55 ಸಾವಿರ ಕೋಟಿ ಗ್ಯಾರಂಟಿ ಯೋಜನೆಗಳಿಗೆ ತೆಗೆದಿರಿಸಿದ್ದೀವಿ. 80 ಸಾವಿರ ಕೋಟಿ ಬಂಡವಾಳ ವೆಚ್ಚಕ್ಕೆ ಮೀಸಲಿರಿಸಿಟ್ಟೇವೆ. ಈ ಹಣ ಎಲ್ಲಿಂದ ಬಂತು? ಎಂದು ಪ್ರಶ್ನೆ ಮಾಡಿದರು.

ಬಿಜೆಪಿಯವರು ಸತ್ಯದ ತಲೆ ಮೇಲೆ ಹೊಡೆದಂತೆ ಸುಳ್ಳು ಹೇಳ್ತಾರೆ. ಹಾಲಿನ ದರ 4ರೂ ಹೆಚ್ಚು ಮಾಡಿ ಇದರಲ್ಲಿ ಒಂದೂ ರೂಪಾಯಿಯನ್ನೂ ನಾವು ಇಟ್ಟುಕೊಳ್ಳದೆ ಅಷ್ಟನ್ನೂ ರೈತರಿಗೆ, ಗೋಸಾಕಾಣಿಕೆದಾರರಿಗೆ ವರ್ಗಾಯಿಸಿದ್ದೇವೆ.
ಆದರೆ ಬಿಜೆಪಿ ಚಿನ್ನ, ಬೆಳ್ಳಿ, ಡೀಸೆಲ್, ಪೆಟ್ರೋಲ್ , ಅಡುಗೆ ಅನಿಲ, ಬೇಳೆ, ಗೊಬ್ಬರ, ಎಣ್ಣೆ ಕಾಳು ಸೇರಿ ಎಲ್ಲದರ ಬೆಲೆ ಹೆಚ್ಚಿಸಿದ್ದು ಕೇಂದ್ರದ ಬಿಜೆಪಿ ಸರ್ಕಾರ. ಆದ್ದರಿಂದ ಜನಾಕ್ರೋಶ ಇರುವುದು ಬಿಜೆಪಿ ಸರ್ಕಾರದ ಮೋದಿಯವರ ವಿರುದ್ಧವೇ ಹೊರತು ನಮ್ಮ ಸರ್ಕಾರದ ಮೇಲಲ್ಲ ಎಂದರು.

Ramesh Babu

Journalist

Recent Posts

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

6 hours ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

8 hours ago

ಜಗಳ ಬಿಡಿಸಲು ಹೋದ ಪೊಲೀಸರ ಮೇಲೆಯೇ ಹಲ್ಲೆ ಆರೋಪ: 112 ತುರ್ತು ಸೇವೆ ಸಿಬ್ಬಂದಿಗೆ ಗಾಯ: ಇಬ್ಬರು ಆರೋಪಿಗಳು ವಶಕ್ಕೆ

ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…

11 hours ago

ಮ್ಯಾನ್‌ಹೋಲ್ ತುಂಬಿ ಹೆದ್ದಾರಿಗೆ ಹರಿದ ಕೊಳಚೆ ನೀರು

ದೊಡ್ಡಬಳ್ಳಾಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ (ಟಿಬಿ) ವೃತ್ತದಲ್ಲಿ ಮ್ಯಾನ್‌ಹೋಲ್ ತುಂಬಿ ತುಳುಕುತ್ತಿದ್ದು, ಕೊಳಚೆ ನೀರು ಹೆದ್ದಾರಿಗೆ ಹರಿದು ವಾಹನ…

13 hours ago

ಎಸಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ: ಕಚೇರಿಯ ಕೆಲ ಅಧಿಕಾರಿಗಳು, ಸಿಬ್ಬಂದಿ ನಾಪತ್ತೆ: ಅಧಿಕಾರಿಗಳಿಗಾಗಿ ಕಾಯುತ್ತಿರುವ ಸಾರ್ವಜನಿಕರು

ದೊಡ್ಡಬಳ್ಳಾಪುರ: ನಗರದ ಉಪವಿಭಾಗಾಧಿಕಾರಿ (ಎಸಿ) ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ…

15 hours ago

ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಿ- ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಸಲಹೆ

ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…

1 day ago