ಆರ್ಥಿಕ ಶಿಸ್ತು ರೂಢಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಕರೆ ನೀಡಿದ ಮುಖ್ಯ ಪ್ರಬಂಧಕ ಮಧುಕರ್

ಅಳತೆ ಮೀರಿದ ಸಾಲದಿಂದ ಆರ್ಥಿಕ ದುಃಸ್ಥಿತಿ ಉಂಟಾಗುವುದಲ್ಲದೆ, ಮಾನಸಿಕ ಆರೋಗ್ಯವು ಹದಗೆಡುತ್ತದೆ. ಇಂತಹ ಸಮಸ್ಯೆಗಳನ್ನು ತಪ್ಪಿಸಲು ವಿದ್ಯಾರ್ಥಿ ದೆಸೆಯಿಂದಲೇ ಉಳಿತಾಯದ ಕುರಿತು ಅರಿವು ಸೇರಿದಂತೆ ಆರ್ಥಿಕ ಶಿಸ್ತನ್ನು ರೂಢಿಸಿಕೊಳ್ಳಬೇಕೆಂದು ಬ್ಯಾಂಕಿನ ಮುಖ್ಯ ಪ್ರಬಂಧಕರಾದ ಮಧುಕರ್ ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಭಾರತೀಯ ರಿಸರ್ವ್ ಬ್ಯಾಂಕಿನ ಆದೇಶದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಘ್ರಣೀಯ ಬ್ಯಾಂಕ್ ಹಾಗೂ ರುಡ್‌ಸೆಟ್ ಸಂಸ್ಥೆಯ ಸಹಯೋಗದೊಂದಿಗೆ ನೆಲಮಂಗಲ ತಾಲ್ಲೂಕಿನ ರುಡ್‌ಸೆಟ್ ಸಂಸ್ಥೆಯಲ್ಲಿ ಇಂದು ಆರ್ಥಿಕ ಸಾಕ್ಷರತಾ ಸಪ್ತಾಹದ ಅಂಗವಾಗಿ ಆರ್ಥಿಕ ಸಾಕ್ಷರತಾ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಸಭಿಕರನ್ನು ಉದ್ದೇಶಿಸಿ ಅವರು ಮಾತನಾಡಿದರು.

ಭಾರತೀಯ ರಿಸರ್ವ್ ಬ್ಯಾಂಕಿನ ಆದೇಶದಂತೆ ಆರ್ಥಿಕ ಸಾಕ್ಷರತಾ ಸಪ್ತಾಹವನ್ನು ಫೆಬ್ರವರಿ 13 ರಿಂದ 17 ರವರೆಗೆ ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರಲ್ಲಿ ಆರ್ಥಿಕ ಶಿಸ್ತು ಮೂಡಬೇಕಾದರೆ ಎಲ್ಲರೂ ಆರ್ಥಿಕ ಸಾಕ್ಷರತೆ ಕುರಿತು ಅರಿವು ಹೊಂದುವುದು ಅತ್ಯಗತ್ಯ ಎಂದು ತಿಳಿಸಿದರು.

ಡಿಜಿಟಲ್ ಬ್ಯಾಂಕಿಂಗ್ ಉಪಯುಕ್ತವಾಗಿದ್ದು, ಸುರಕ್ಷಿತ ಮಾರ್ಗಗಳ ಮೂಲಕ ಬಳಕೆ ಮಾಡಬೇಕು ಎಂದರಲ್ಲದೆ, ಡಿಜಿಟಲ್ ಬ್ಯಾಂಕಿಂಗ್ ಅಳವಡಿಸಿಕೊಳ್ಳುವುದರಿಂದ ನೋಟುಗಳ ಮುದ್ರಣ, ನಿರ್ವಹಣೆಗೆ ತಗುಲುವ ಖರ್ಚುಗಳನ್ನು ತಗ್ಗಿಸಬಹುದಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ರುಡ್‌ಸೆಟ್ ಸಂಸ್ಥೆಯ ನಿರ್ದೇಶಕರಾದ ಜೆ.ಆನಂದ್, ಸೊಣ್ಣಹಳ್ಳಿಪುರ ಆರ್‌ಸೆಟಿಯ ನಿರ್ದೇಶಕರಾದ ಗಿರಿಯಪ್ಪ, ಆರ್ಥಿಕ ಸಾಕ್ಷರತಾ ಕೇಂದ್ರದ ನೆಲಮಂಗಲ ತಾಲ್ಲೂಕಿನ ಸಲಹೆಗಾರರಾದ ಮಹಾಂತೇಶಯ್ಯ ಹಾಗೂ ದೇವನಹಳ್ಳಿ ತಾಲ್ಲೂಕಿನ ಸಲಹೆಗಾರರಾದ ಮಂಜುನಾಥ್, ಜ್ಞಾನಮಂದಿರ ಕಾಲೇಜಿನ ಪ್ರಾಂಶುಪಾಲರಾದ ಶ್ರೀಕಾಂತ್ ಸೇರಿದಂತೆ ಬ್ಯಾಂಕಿನ ಅಧಿಕಾರಿಗಳು, ರುಡ್‌ಸೆಟ್ ಸಂಸ್ಥೆಯ ಸಿಬ್ಬಂದಿಗಳು, ಸ್ವಸಹಾಯ ಸಂಘದ ಮಹಿಳೆಯರು, ಜ್ಞಾನ ಮಂದಿರ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.

ಆರ್ಥಿಕ ಸಾಕ್ಷರತೆ ಕುರಿತು ಆಯೋಜಿಸಲಾಗಿದ್ದ ಭಾಷಣ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು.

Ramesh Babu

Journalist

Recent Posts

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

3 hours ago

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

17 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

22 hours ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

1 day ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

2 days ago

ಸಿಎಂಗೆ ರೈತಪರ ಕಾಳಜಿ ಇಲ್ಲ ಶಾಸಕ ಧೀರಜ್ ಮುನಿರಾಜು ಆರೋಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…

2 days ago