ಸ್ವ ಪ್ರೇರಣೆ, ಸಮಯ ನಿರ್ವಹಣೆಯನ್ನು ಅಳವಡಿಸಿಕೊಂಡು, ಸ್ವಯಂ ಉದ್ಯಮಶೀಲ ಮಹಿಳೆಯಾಗುವುದರೊಂದಿಗೆ, ಸಾಮಾಜಿಕ, ಆರ್ಥಿಕವಾಗಿ ಸದೃಢರಾಗುವ ಮೂಲಕ ಮಹಿಳೆಯರು ಸಬಲೀಕರಣವಾಗಬೇಕೆಂದು ಕೆನರಾ ಬ್ಯಾಂಕ್‌ನ, ಅರಶಿನಕುಂಟೆ ಶಾಖೆಯ ವ್ಯವಸ್ಥಾಪಕರಾದ ಕಾವ್ಯ ಅವರು ಶಿಬಿರಾರ್ಥಿಗಳಿಗೆ ಕರೆ ನೀಡಿದರು.
ನೆಲಮಂಗಲ ತಾಲ್ಲೂಕಿನ ಅರಶಿನಕುಂಟೆಯಲ್ಲಿರುವ ರುಡ್‌ಸೆಟ್ ಸಂಸ್ಥೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು.
ಜವಾಬ್ದಾರಿಗಳನ್ನು ಅರಿತು, ಸರಿಯಾದ ಮಾರ್ಗದಲ್ಲಿ ಮಹಿಳೆಯರು ಸ್ವಾಭಿಮಾನದ ಜೀವನವನ್ನು ಕಟ್ಟಿಕೊಳ್ಳಬೇಕೆಂದು ತಿಳಿಸಿದರಲ್ಲದೆ, ಸರ್ಕಾರ ಹಾಗೂ ಬ್ಯಾಂಕಿನಲ್ಲಿ ಮಹಿಳೆಯರಿಗೆಂದೇ ಇರುವ ಯೋಜನೆಗಳ ಸೌಲಭ್ಯ, ಸಹಾಯಧನದ ಸೌಲಭ್ಯಗಳನ್ನು ಪಡೆಯಬೇಕೆಂದು ಹೇಳಿದರು.
ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ ಎಂಬ ಉಕ್ತಿಯಂತೆ ಆಕೆಯಿಂದು ಎಲ್ಲ ಕ್ಷೇತ್ರದಲ್ಲೂ ತನ್ನನ್ನು ಗುರುತಿಸಿಕೊಂಡಿದ್ದಾಳೆ. ಅಂತೆಯೇ ಮಹಿಳಾ ಶಿಬಿರಾರ್ಥಿಗಳಾದ ಬದುಕಿನ ಅವಶ್ಯಕತೆಗಳ ಪೂರೈಕೆಗಾಗಿ ಕೌಶಲ್ಯಗಳನ್ನು ಹೊಂದಿ, ದುಡಿಮೆ ಆರಂಭಿಸಿ ಎಂದು ಸಲಹೆ ನೀಡಿದರಲ್ಲದೆ, ತಾವುಗಳು ಸಾಧನೆ ಮಾಡಲು ಅಗತ್ಯ ಪ್ರೇರಣೆ ಹೊಂದಿ ಸಾಧಿಸಬೇಕೆಂದು ಎಂದು ಹೇಳಿದರು.
ರುಡ್‌ಸೆಟ್ ಸಂಸ್ಥೆಯಲ್ಲಿ ತರಬೇತಿ ಪಡೆದು ಯಶಸ್ವಿ ಮಹಿಳಾ ಉದ್ಯಮಿಗಳಾಗಿರುವವರ ಪೈಕಿ ಸಾಂಕೇತಿಕವಾಗಿ ಭವ್ಯ, ಗಾಯತ್ರಿ ಹಾಗೂ ಶೃತಿ ಎಂಬ ಮಹಿಳಾ ಉದ್ಯಮಿಗಳು ಭಾಗವಹಿಸಿ, ತಮ್ಮ ಉದ್ಯಮದ ದಾರಿ ಬೆಳೆದು ಬಂದ ಹಾದಿಯ ಕುರಿತು ಶಿಬಿರಾರ್ಥಿಗಳೊಂದಿಗೆ ಹಂಚಿಕೊಂಡರು.
ಮಹಿಳಾ ದಿನಾಚರಣೆ ನಿಮಿತ್ತ ಆಯೋಜಿಸಲಾಗಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಶಿಬಿರಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಬೆಂಗಳೂರು: ಸೂಕ್ತ ದಾಖಲೆಗಳನ್ನು ಪರಿಶೀಲಿಸದೆ 10.50 ಕೋಟಿ ಸಾಲ ಮಂಜೂರು ಮಾಡಿ ಸೌಂದರ್ಯ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಗೆ ಆರ್ಥಿಕ…
ದೊಡ್ಡಬಳ್ಳಾಪುರ: ತಾಲ್ಲೂಕಿನ ಮಾಕಳಿ ರೈಲ್ವೆ ನಿಲ್ದಾಣದ ಸಮೀಪ ಹಿಂದೂಪುರ–ಯಲಹಂಕ ಹೆದ್ದಾರಿಯಲ್ಲಿ ಶನಿವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್…
ಬ್ಯಾಂಕ್ ನೌಕರರ ಒಕ್ಕೂಟವು ಸೆ.28ರಿಂದ 30ರವರೆಗೆ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರು ಹಾಗೂ ಗ್ರಾಹಕರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ…
ಜನರು ನೀಡಿದ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂಬ ಉದ್ದೇಶದಿಂದ ನನಗಿರುವ ಅಧಿಕಾರವನ್ನು ಬಳಸಿಕೊಂಡು ನಿಮ್ಮ ಸೇವೆ ಮಾಡುತ್ತಿದ್ದೆನೆ ಎಂದು ಮಂಡ್ಯ…
ಬೆಂಗಳೂರು ಗ್ರಾಮಾಂತರ: ಮಳೆಯ ಕೊರತೆ ಹಾಗೂ ಹಸಿರು ಮೇವಿನ ಅಭಾವದಿಂದ ಜಾನುವಾರು ಸಾಕಾಣಿಕೆದಾರರು ಎದುರಿಸುತ್ತಿರುವ ಸಂಕಷ್ಟಕ್ಕೆ ಪರ್ಯಾಯವಾಗಿ, ಜಾನುವಾರುಗಳಿಗೆ ಸ್ಥಳೀಯವಾಗಿಯೇ…
ವಿಶ್ವ ಪ್ರವಾಸೋದ್ಯಮ ದಿನಾಚರಣೆಯನ್ನು ದೇವನಹಳ್ಳಿ ತಾಲ್ಲೂಕಿನ ಅವತಿಯ ತಿಮ್ಮರಾಯಸ್ವಾಮಿ ಬೆಟ್ಟದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ…