ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ ಜಿಲ್ಲೆಯಲ್ಲಿ 08 ಮಂದಿ ಸ್ವ ಉದ್ಯೋಗ ಸಾಲ ಪಡೆದುಕೊಂಡಿದ್ದು ಜೀವನವನ್ನು ರೂಪಿಸಿಕೊಳ್ಳುತ್ತಿದ್ದಾರೆ ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ದೀಪಶ್ರೀ.ಕೆ ಅವರು ತಿಳಿಸಿದರು.
ದೊಡ್ಡಬಳ್ಳಾಪುರ ತಾಲೂಕಿನ ಫಲಾನುಭವಿಗಳನ್ನು ಸ್ವತಃ ಭೇಟಿ ಮಾಡಿ ಪಡೆದ ಸಾಲವನ್ನು ಸದುಪಯೋಗಪಡಿಸಿಕೊಳ್ಳುತ್ತಿರುವುದನ್ನು ಪರಿಶೀಲಿಸಿ ಖಾತರಿಪಡಿಸಿಕೊಂಡ ನಂತರ ಮಾತನಾಡಿದ ಅವರು.
ದಿನಸಿ ಅಂಗಡಿ ಮಾಲೀಕ ಫಲಾನುಭವಿಯು ನಿಗಮ ಕೊಟ್ಟ ಸಾಲವನ್ನು ಬಂಡವಾಳಕ್ಕೆ ಹೂಡಿಕೆ ಮಾಡಿ ವ್ಯಾಪಾರ ವೃದ್ದಿಸಿಕೊಂಡಿದ್ದಾರೆ ಹೀಗೆ ಉಳಿದ ಫಲಾನುಭವಿಗಳು ಇನ್ನಿತರ ವ್ಯಾಪಾರ ನಡೆಸುತ್ತಿದ್ದಾರೆ ಎಂದು ತಿಳಿಸಿದರು.
ರಾಜ್ಯಾದ್ಯಂತ 3000ಕ್ಕೂ ಅಧಿಕ ಫಲಾನುಭವಿಗಳಿಗೆ ನಿಗಮದ ಮೂಲಕ ಸ್ವ ಉದ್ಯೋಗ ಆರಂಭಿಸಲು ಸಾಲ ನೀಡಲಾಗಿದೆ. 1 ಲಕ್ಷ ರೂ. ಸಾಲ ಪಡೆದರೆ 20000 ಸಬ್ಸಿಡಿ ದೊರೆಯುತ್ತದೆ. ಉಳಿದ 80000 ಸಾಲವನ್ನು ಮೂರು ವರ್ಷಗಳ ಕಾಲಾವಧಿಯಲ್ಲಿ ಕಡಿಮೆ ಬಡ್ಡಿ ದರದಲ್ಲಿ ಸಾಲವನ್ನು ಮಾಸಿಕ ಕಂತುಗಳಲ್ಲಿ ಪಾವತಿ ಮಾಡುವ ವ್ಯವಸ್ಥೆ ಇರುವುದರಿಂದ ಸಾಲ ಪಡೆದ ಫಲಾನುಭವಿಗಳು ಕಂತುಗಳನ್ನು ಮರುಪಾವತಿ ಮಾಡುತ್ತಿದ್ದಾರೆ ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ದೀಪಶ್ರೀ.ಕೆ ಅವರು ತಿಳಿಸಿದರು.
ಆರ್ಯ ವೈಶ್ಯ ಸಮುದಾಯದ ಅಭಿವೃದ್ಧಿ ನಿಗಮದಿಂದ ಸಾಲ ಪಡೆದ ಫಲಾನುಭವಿಗಳು ಗ್ರಾಮೀಣ ಭಾಗ ಮತ್ತು ತೀರಾ ಕುಗ್ರಾಮಗಳಲ್ಲಿ ವಾಸಿಸುತ್ತಿದ್ದಾರೆ. ಪ್ರತಿ ತಿಂಗಳು ಕಂತು ಪಾವತಿ ಮಾಡಲು ನಗರ ವ್ಯಾಪ್ತಿಯ ಬ್ಯಾಂಕುಗಳಿಗೆ ಬರುವುದು ಕಷ್ಟ. ಆದ್ದರಿಂದ ಫಲಾನುಭವಿಗಳು ತಮ್ಮ ಮನೆಯಿಂದಲೇ ಸುಲಭವಾಗಿ ಸಾಲ ಮರುಪಾವತಿ ಮಾಡುವ ಮೊಬೈಲ್ ಆ್ಯಪ್‌ಅನ್ನು ನಿಗಮದಿಂದ ಸೃಜಿಸಲಾಗಿದೆ.
ನಿಗಮದ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಪ್ರಚಾರ ನೀಡುವ ಸಲುವಾಗಿ ಆರ್ಯವೈಶ್ಯ ಪೋರ್ಟಲ್‌ಅನ್ನು ನಿಗಮ ಸಿದ್ಧಪಡಿಸಿದೆ. ರಾಜ್ಯದಲ್ಲಿರುವ ಆರ್ಯವೈಶ್ಯ ಕುಟುಂಬಗಳ ವಿವರ ನಿರುದ್ಯೋಗಿಗಳು ಅಕ್ಷರಸ್ಥರು, ಅನಕ್ಷರಸ್ಥರು ಇತ್ಯಾದಿ ಮಾಹಿತಿ ಸಂಗ್ರಹಿಸಲು ಈ ಪೋರ್ಟಲ್ ಸಹಾಯ ಮಾಡಲಿದೆ ಎಂದು ತಿಳಿಸಿದರು.
ಪರಿಶೀಲನೆ ವೇಳೆ ಆರ್ಯ ವೈಶ್ಯ ಅಭಿವೃದ್ಧಿ ನಿಗಮದ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯವಸ್ಥಾಪಕರಾದ ರಂಗನಾಥ್ ಅವರು ಉಪಸ್ಥಿತರಿದ್ದರು.
ಇದೇ ಏಪ್ರಿಲ್ ತಿಂಗಳಾಂತ್ಯಕ್ಕೆ ರೈತರಿಗೆ ಭೂ ಮಂಜೂರು ಮಾಡುವ ಬಗರ್ ಹುಕುಂ ಸಮತಿ ಸಭೆಯನ್ನು ಮಾಡಲಾಗುವುದು, ಸಭೆಯಲ್ಲಿ ಕನಿಷ್ಟ 100…
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸರ್ಕಾರದ ಪರವಾನಗಿ ಭೂ ಮಾಪಕರು ಎರಡು ತಿಂಗಳಿಂದ ಮುಷ್ಕರ ಹೂಡಿರುವುದರಿಂದ ಭೂ ಮಾಪನ ಇಲಾಖೆಯ…
ಕೇಂದ್ರ ಸರ್ಕಾರ ಕಳೆದ ಒಂದು ದಶಕದಿಂದ ವಿವಿಧ ಯೋಜನೆಗಳ ಮೂಲಕ ಮಹಿಳೆಯರ ಸಬಲೀಕರಣಕ್ಕೆ ಒಂದೊಂದೆ ಹೆಜ್ಜೆ ಇಟ್ಟುಕೊಂಡು ಬರುತ್ತಿದೆ ಎಂದು…
ಆಶಾ ಭೋಸ್ಲೆ..... ಸಂಗೀತ ಎಂಬ ಮಾಂತ್ರಿಕ ಮತ್ತು ಭಾವನಾತ್ಮಕ ಹಾಗೂ ಭ್ರಮಾತ್ಮಕ ಶಕ್ತಿಯ ಉತ್ತುಂಗ ಧ್ವನಿಯೊಂದು ನಮ್ಮನ್ನಗಲಿದ ಸಂದರ್ಭದಲ್ಲಿ...... ಶಬ್ದ…
Effektives Schreiben von Hausarbeiten Das Schreiben von Hausarbeiten kann für viele Studierende eine große Herausforderung…
ನಾನು ಜೆಡಿಎಸ್ ತಾಲೂಕು ಅಧ್ಯಕ್ಷ ಸ್ಥಾನಕ್ಕಾಗಿ ವರಿಷ್ಠರ ಬಳಿ ಕೇಳಿದ್ದೇನೆ. ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ. ಪಕ್ಷದ ವರಿಷ್ಠರು ಯಾವುದೇ…