ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ ಸ್ವ ಉದ್ಯೋಗ ಸಾಲ-ದೀಪಶ್ರೀ.ಕೆ

ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ ಜಿಲ್ಲೆಯಲ್ಲಿ 08 ಮಂದಿ ಸ್ವ ಉದ್ಯೋಗ ಸಾಲ ಪಡೆದುಕೊಂಡಿದ್ದು ಜೀವನವನ್ನು ರೂಪಿಸಿಕೊಳ್ಳುತ್ತಿದ್ದಾರೆ ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ದೀಪಶ್ರೀ.ಕೆ ಅವರು ತಿಳಿಸಿದರು.

ದೊಡ್ಡಬಳ್ಳಾಪುರ ತಾಲೂಕಿನ ಫಲಾನುಭವಿಗಳನ್ನು ಸ್ವತಃ ಭೇಟಿ ಮಾಡಿ ಪಡೆದ ಸಾಲವನ್ನು ಸದುಪಯೋಗಪಡಿಸಿಕೊಳ್ಳುತ್ತಿರುವುದನ್ನು ಪರಿಶೀಲಿಸಿ ಖಾತರಿಪಡಿಸಿಕೊಂಡ ನಂತರ ಮಾತನಾಡಿದ ಅವರು.

ದಿನಸಿ ಅಂಗಡಿ ಮಾಲೀಕ ಫಲಾನುಭವಿಯು ನಿಗಮ ಕೊಟ್ಟ ಸಾಲವನ್ನು ಬಂಡವಾಳಕ್ಕೆ ಹೂಡಿಕೆ ಮಾಡಿ ವ್ಯಾಪಾರ ವೃದ್ದಿಸಿಕೊಂಡಿದ್ದಾರೆ ಹೀಗೆ ಉಳಿದ ಫಲಾನುಭವಿಗಳು ಇನ್ನಿತರ ವ್ಯಾಪಾರ ನಡೆಸುತ್ತಿದ್ದಾರೆ ಎಂದು ತಿಳಿಸಿದರು.

1 ಲಕ್ಷ ರೂ. ಸಾಲ ಪಡೆದರೆ 20 ಸಾವಿರ ರೂ. ಸಬ್ಸಿಡಿ

ರಾಜ್ಯಾದ್ಯಂತ 3000ಕ್ಕೂ ಅಧಿಕ ಫಲಾನುಭವಿಗಳಿಗೆ ನಿಗಮದ ಮೂಲಕ ಸ್ವ ಉದ್ಯೋಗ ಆರಂಭಿಸಲು ಸಾಲ ನೀಡಲಾಗಿದೆ. 1 ಲಕ್ಷ ರೂ. ಸಾಲ ಪಡೆದರೆ 20000 ಸಬ್ಸಿಡಿ ದೊರೆಯುತ್ತದೆ. ಉಳಿದ 80000 ಸಾಲವನ್ನು ಮೂರು ವರ್ಷಗಳ ಕಾಲಾವಧಿಯಲ್ಲಿ ಕಡಿಮೆ ಬಡ್ಡಿ ದರದಲ್ಲಿ ಸಾಲವನ್ನು ಮಾಸಿಕ ಕಂತುಗಳಲ್ಲಿ ಪಾವತಿ ಮಾಡುವ ವ್ಯವಸ್ಥೆ ಇರುವುದರಿಂದ ಸಾಲ ಪಡೆದ ಫಲಾನುಭವಿಗಳು ಕಂತುಗಳನ್ನು ಮರುಪಾವತಿ ಮಾಡುತ್ತಿದ್ದಾರೆ ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ದೀಪಶ್ರೀ.ಕೆ ಅವರು ತಿಳಿಸಿದರು.

ಮರುಪಾವತಿಗಾಗಿ ಆ್ಯಪ್ ಆರ್ಯ ವೈಶ್ಯ ನಿಗಮವೇ ಮೊದಲು

ಆರ್ಯ ವೈಶ್ಯ ಸಮುದಾಯದ ಅಭಿವೃದ್ಧಿ ನಿಗಮದಿಂದ ಸಾಲ ಪಡೆದ ಫಲಾನುಭವಿಗಳು ಗ್ರಾಮೀಣ ಭಾಗ ಮತ್ತು ತೀರಾ ಕುಗ್ರಾಮಗಳಲ್ಲಿ ವಾಸಿಸುತ್ತಿದ್ದಾರೆ. ಪ್ರತಿ ತಿಂಗಳು ಕಂತು ಪಾವತಿ ಮಾಡಲು ನಗರ ವ್ಯಾಪ್ತಿಯ ಬ್ಯಾಂಕುಗಳಿಗೆ ಬರುವುದು ಕಷ್ಟ. ಆದ್ದರಿಂದ ಫಲಾನುಭವಿಗಳು ತಮ್ಮ ಮನೆಯಿಂದಲೇ ಸುಲಭವಾಗಿ ಸಾಲ ಮರುಪಾವತಿ ಮಾಡುವ ಮೊಬೈಲ್ ಆ್ಯಪ್‌ಅನ್ನು ನಿಗಮದಿಂದ ಸೃಜಿಸಲಾಗಿದೆ.

ಆರ್ಯ ವೈಶ್ಯ ಪೋರ್ಟಲ್

ನಿಗಮದ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಪ್ರಚಾರ ನೀಡುವ ಸಲುವಾಗಿ ಆರ್ಯವೈಶ್ಯ ಪೋರ್ಟಲ್‌ಅನ್ನು ನಿಗಮ ಸಿದ್ಧಪಡಿಸಿದೆ. ರಾಜ್ಯದಲ್ಲಿರುವ ಆರ್ಯವೈಶ್ಯ ಕುಟುಂಬಗಳ ವಿವರ ನಿರುದ್ಯೋಗಿಗಳು ಅಕ್ಷರಸ್ಥರು, ಅನಕ್ಷರಸ್ಥರು ಇತ್ಯಾದಿ ಮಾಹಿತಿ ಸಂಗ್ರಹಿಸಲು ಈ ಪೋರ್ಟಲ್ ಸಹಾಯ ಮಾಡಲಿದೆ ಎಂದು ತಿಳಿಸಿದರು.
ಪರಿಶೀಲನೆ ವೇಳೆ ಆರ್ಯ ವೈಶ್ಯ ಅಭಿವೃದ್ಧಿ ನಿಗಮದ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯವಸ್ಥಾಪಕರಾದ ರಂಗನಾಥ್ ಅವರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಎಸ್ ಐ ಆರ್…..

ನಾವು ಅಕ್ರಮ ವಲಸಿಗರಲ್ಲ, ವಂಚಕರಲ್ಲ, ಈ ಮಣ್ಣಿನ ಮೂಲ ನಿವಾಸಿಗಳು. ದಯವಿಟ್ಟು ನಮ್ಮ ಅಸ್ತಿತ್ವವನ್ನು, ಸ್ವಾಭಿಮಾನವನ್ನು ಪ್ರಶ್ನಿಸಬೇಡಿ. ನಾವು ಭಾರತೀಯರು......…

6 hours ago

ಮಾರ್ಖಂಡೇಯ ಜಲಾಶಯದ ನೀರು ಪೋಲು ತಡೆಗೆ ಚಲುವರಾಯಸ್ವಾಮಿ ಖಡಕ್ ಸೂಚನೆ

ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್‌. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…

18 hours ago

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

22 hours ago

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

1 day ago

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

1 day ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

2 days ago