ಆರ್‌ಸಿಬಿ ವಿಜಯೋತ್ಸವ: ಅಭಿಮಾನಿಗಳ ಭೀಕರ ಕಾಲ್ತುಳಿತ ಕೇಸ್: ಸಾವಿನ ಸಂಖ್ಯೆ 11ಕ್ಕೆ ಏರಿಕೆ

ಬೆಂಗಳೂರು : ಆರ್‌ಸಿಬಿ ವಿಜಯೋತ್ಸವದಲ್ಲಿ ಉಂಟಾದ ನೂಕುನುಗ್ಗಲಿನ ವೇಳೆ ಭೀಕರ ಕಾಲ್ತುಳಿತ ಪರಿಣಾಮ ಸಾವನ್ನಪ್ಪಿದವರ ಸಂಖ್ಯೆ 11 ಕ್ಕೆ ಏರಿಕೆಯಾಗಿದೆ.

ಅವಘಡದಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

ಹಲವು ಗಾಯಾಳುಗಳನ್ನು ಸಮೀಪದ ಬೌರಿಂಗ್‌ ಆಸ್ಪತ್ರೆಗೆ ಹಾಗೂ ವೈದೇಹಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಮಿಕ್ಕವರಿಗೆ ಸಮೀಪದ ಆಸ್ಪತ್ರೆಗಳಲ್ಲೇ ಚಿಕಿತ್ಸೆಯ ವ್ಯವಸ್ಥೆ ಮಾಡಲಾಗಿದೆ.

ಅನಾಹುತ ನಡೆದ ಹಿನ್ನೆಲೆಯಲ್ಲಿ ವಿಜಯೋತ್ಸವ ಕಾರ್ಯಕ್ರಮ ರದ್ದು ಪಡಿಸಲಾಗಿದೆ. ಜನರನ್ನು ಮನೆಗೆ ತೆರಳುವಂತೆ ಪೊಲೀಸರು ಮೈಕ್ ಮೂಲಕ ಮನವಿ ಮಾಡಿಕೊಳ್ಳುತ್ತಿದ್ದಾರೆ.

Leave a Reply

Your email address will not be published. Required fields are marked *