ಬೆಂಗಳೂರು ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನೂಕುನುಗ್ಗಲುನಿಂದ ಉಂಟಾದ ಕಾಲ್ತುಳಿತಕ್ಕೆ ಹತ್ತಕ್ಕೂ ಹೆಚ್ಚು ಜನರು ಧಾರುಣವಾಗಿ ಸಾವನ್ನಪ್ಪಿರುವ ಘಟನೆ ನನಗೆ ತೀವ್ರ ದಿಗ್ಭ್ರಮೆ ಉಂಟು ಮಾಡಿದೆ ಎಂದು ಕೇಂದ್ರ ಮಂತ್ರಿ ಹಾಗೂ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಗೆಲುವಿನ ಸಂಭ್ರಮಕ್ಕೆ ಮುನ್ನವೇ ಮುಗ್ಧರ ಜೀವ ನಷ್ಟವಾಗಿರುವುದು ನನಗೆ ಅತೀವ ದುಃಖ ತಂದಿದೆ ಎಂದು ಹೇಳಿದ್ದಾರೆ.
ಸರಿಯಾದ ಪೂರ್ವಸಿದ್ಧತೆ ಮಾಡಿಕೊಳ್ಳದೆ, ಯಾವುದೇ ಮುನ್ನೆಚ್ಚರಿಕೆ ವಹಿಸದಿರುವುದೇ ಈ ಮಹಾದುರಂತಕ್ಕೆ ನೇರ ಕಾರಣ. ದುರಂತದ ಹೊಣೆಯನ್ನು ರಾಜ್ಯ ಕಾಂಗ್ರೆಸ್ ಸರಕಾರವೇ ಹೊತ್ತುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ಕೊಡಿಸುವುದರ ಜತೆಗೆ ಮೃತರ ಕುಟುಂಬಗಳ ನೆರವಿಗೆ ಸರಕಾರ ಕೂಡಲೇ ಧಾವಿಸಬೇಕು ಎಂದು ಆಗ್ರಹಿಸಿದ್ದಾರೆ.
ಕ್ರೀಡಾಂಗಣ ಹಾಗೂ ವಿಧಾನಸೌಧದ ಬಳಿ ಸಂಭ್ರಮವನ್ನು ಕಣ್ತುಂಬಿಕೊಳ್ಳಲು ಬಂದಿದ್ದ ಕ್ರಿಕೆಟ್ ಪ್ರೇಮಿಗಳು ಗಾಬರಿ, ಆತುರಕ್ಕೆ ಒಳಗಾಗದೆ ಕ್ಷೇಮವಾಗಿ ಮನೆ ತಲುಪಬೇಕು ಎಂಬುದು ನನ್ನ ಕಳಕಳಿ. ಪೊಲೀಸರು ಈ ನಿಟ್ಟಿನಲ್ಲಿ ತುರ್ತುಕ್ರಮ ವಹಿಸಿ ಜನರಿಗೆ ನೆರವಾಗಬೇಕು ಎಂದು ಹೇಳಿದ್ದಾರೆ.
ಸುಪ್ರಭಾತ.......... ಭಾರತೀಯ ಸಮಾಜ ಎಂಬುದು ಮಧ್ಯಮ ವರ್ಗದ ಸಂತೆ ಇದ್ದಂತೆ. ಇಲ್ಲಿ ಬಹುತೇಕ ಮಧ್ಯಮ ವರ್ಗದವರೇ ಅತಿ ಹೆಚ್ಚು ಮಧ್ಯಮ…
ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…
"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…