ಅತ್ಯಂತ ರೋಚಕತೆಯಿಂದ ಕೂಡಿದ್ದ ಎರಡನೇ ಟೆಸ್ಟ್ ಪಂದ್ಯದಲ್ಲಿ ಮುರಿಯದ ಏಳನೇ ವಿಕೆಟ್ ಗೆ ಶ್ರೇಯಸ್ ಅಯ್ಯರ್ (29) ಹಾಗೂ ಆಲ್ ರೌಂಡರ್ ಆರ್. ಅಶ್ವಿನ್(42) ರನ್ ಗಳಿಸುವ ಮೂಲಕ 71 ರನ್ ಗಳ ಜೊತೆಯಾಟದ ನೆರವಿನಿಂದ ನಾಲ್ಕನೇ ದಿನದ ಪ್ರಾರಂಭದಲ್ಲಿಯೇ 3 ವಿಕೆಟ್ ಗಳ ಅಧಿಕಾರಯುತ ಜಯ ಸಾಧಿಸಿತು.
ಮೊದಲ ಇನಿಂಗ್ಸ್ ಮುನ್ನಡೆ ಕಾಯ್ದುಕೊಂಡಿದ್ದ ಭಾರತ ಎರಡನೇ ಇನಿಂಗ್ಸ್ ಆರಂಭಿಸಿದಾಗ ಗೆಲ್ಲಲು 144 ರನ್ ಗಳಿಸಿ ಸುಲಭ ಗೆಲುವಿನ ನಿರೀಕ್ಷೆಯಲ್ಲಿತ್ತು ಆದರೆ ಮಾರಕ ಬೌಲಿಂಗ್ ದಾಳಿ ನಡೆಸಿದ ಬಾಂಗ್ಲಾ ಬೌಲಿಂಗ್ ಪಡೆ ಎದುರಾಳಿ ತಂಡದ ಮೊತ್ತ 3 ರನ್ ದಾಟುಲಾಗಲೇ ನಾಯಕ ಹಾಗೂ ಆರಂಭಿಕ ಬ್ಯಾಟ್ಸ್‌ಮನ್ ಕೆ. ಎಲ್. ರಾಹುಲ್ ಅವರ ವಿಕೆಟ್ ಪಡೆಯುವ ಮೂಲಕ ಆಘಾತ ನೀಡಿತು.
ಆರಂಭಿಕ ಬ್ಯಾಟ್ಸ್‌ಮನ್ ಶುಭಮನ್ ಗಿಲ್, ಉಪನಾಯಕ ಚತೇಶ್ವರ ಪೂಜಾರ, ಅನುಭವಿ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಹಾಗೂ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಬ್ ಪಂತ್ ಹೆಚ್ಚು ಕಾಲ ಕ್ರೀಸ್ ನಲ್ಲಿ ನಿಲ್ಲಲಿಲ್ಲ ಈ ಹಂತದಲ್ಲಿ ಆಲ್ ರೌಂಡರ್ ಅಕ್ಷರ್ ಪಟೇಲ್ 34 ರನ್ ಗಳಿಸುವ ಮೂಲಕ ತಂಡಕ್ಕೆ ಕೊಂಚ ಆಸರೆಯಾದರು.
ಒಂದು ಹಂತದಲ್ಲಿ 74 ರನ್ ಗೆ 7 ವಿಕೆಟ್ ಕಳೆದುಕೊಂಡು ಸೋಲಿನ ಸುಳಿಯಲ್ಲಿದ್ದ ತಂಡವನ್ನು ಶ್ರೇಯಸ್ ಅಯ್ಯರ್ ಹಾಗೂ ಆಲ್ ರೌಂಡರ್ ಆರ್. ಅಶ್ವಿನ್ 71 ರನ್ ಗಳ ಜೊತೆಯಾಟ ಆಡುವ ಮೂಲಕ ತಂಡವನ್ನು ಗೆಲುವಿನ ದಡ ಸೇರಿಸಿದರು, ಅದರಲ್ಲೂ ಅಶ್ವಿನ್ ಒಂದೇ ಓವರ್ ನಲ್ಲಿ ಒಂದು ಸಿಕ್ಸರ್ ಎರಡು ಬೌಂಡರಿ ಸಹಿತ 16 ರನ್ ದೋಚುವ ಮೂಲಕ ತಾನೊಬ್ಬ ಬೆಸ್ಟ್ ಆಲ್ ರೌಂಡರ್ ಎಂದು ತಿಳಿಸಿದರು.
ಬಾಂಗ್ಲಾ ತಂಡದ ಪರವಾಗಿ ಹಸನ್ ಮೀರಜ್ ಐದು ವಿಕೆಟ್ ಗಳ ಗೊಂಚಲು ಪಡೆದರೆ ನಾಯಕ ಶಕೀಬ್ ಆಲ್ ಹಸನ್ ಎರಡು ವಿಕೆಟ್ ಪಡೆದರು. ಎರಡನೇ ಪಂದ್ಯದಲ್ಲಿ 54 ರನ್ ಹಾಗೂ 6 ವಿಕೆಟ್ ಪಡೆಯುವ ಮೂಲಕ ಆರ್. ಅಶ್ವಿನ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರೆ ಮೊದಲ ಪಂದ್ಯದಲ್ಲಿ ಮಿಂಚಿದ್ದ ಚತೇಶ್ವರ ಪೂಜಾರ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದರು.
ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…
ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…
ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…
ಕೋಲಾರ: ಅಮೆಜಾನ್ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…
ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್‌ಸ್ಪೆಕ್ಟರ್‌ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…
ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್…