
ಆರ್.ಎಲ್ ಜಾಲಪ್ಪ ಜನ್ಮ ಶತಮಾನೋತ್ಸವದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಿದ್ದರು.
ನಾಡಿನ ಹಿರಿಯ ರಾಜಕೀಯ ಮುತ್ಸದ್ದಿ ಹಾಗೂ ಮಾಜಿ ಕೇಂದ್ರ ಸಚಿವ ಆರ್.ಎಲ್.ಜಾಲಪ್ಪನವರ ಜನ್ಮ ಶತಮಾನೋತ್ಸವ ಕಾರ್ಯಕ್ರಮವನ್ನು ಇಂದು ದೊಡ್ಡಬಳ್ಳಾಪುರದ ಆರ್‌ಎಲ್‌ಜೆಐಟಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದು. ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು.
ಇದೇ ವೇಳೆ ಸಂಸ್ಥೆಯ ಆವರಣದಲ್ಲಿ ನಿರ್ಮಿಸಲಾಗಿರುವ ಜಾಲಪ್ಪ ಅಕಾಡೆಮಿಯ ನೂತನ ಕಟ್ಟಡವನ್ನು ಅವರು ಉದ್ಘಾಟಿಸಿದರು. ಪ್ರೊ.ರವಿಕಿರಣ್ ಕೆ.ಆರ್ ಅವರು ಬರೆದಿರುವ “ನೇರ ನಿಷ್ಠುರ ನಡೆಯ ಹೃದಯವಂತ ಆರ್.ಎಲ್.ಜಾಲಪ್ಪ ಜೀವನ ಪಥ” ಪುಸ್ತಕವನ್ನು ಮುಖ್ಯಮಂತ್ರಿಗಳು ಲೋಕಾರ್ಪಣೆ ಮಾಡಿದರು.