ನಗರದ ಆರ್.ಎಲ್.ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯಕ್ಕೆ ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತಾ ಮಂಡಳಿ-ನ್ಯಾಕ್ “ಎ” ಶ್ರೇಣಿ ನೀಡಿದೆ ಎಂದು ಶ್ರೀ ದೇವರಾಜ ಅರಸ್ ಶಿಕ್ಷಣ ಸಂಸ್ಥೆ ಉಪಾಧ್ಯಕ್ಷ ಜೆ.ರಾಜೇಂದ್ರ ತಿಳಿಸಿದರು.
ಆರ್.ಎಲ್.ಜೆ.ಐ.ಟಿ ಕಾಲೇಜಿನ ಸಭಾಂಗಣದಲ್ಲಿ ಶನಿವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ವಾರ ಕಾಲೇಜಿಗೆ ಭೇಟಿ ನೀಡಿದ್ದ ತಜ್ಞರ ಸಮಿತಿ ಕಾಲೇಜಿನ ಮೂಲಸೌಕರ್ಯ, ಸಂಶೋಧನೆ ಮತ್ತು ಅಧ್ಯಯನ, ಬೋಧನಾ ಗುಣಮಟ್ಟ, ಪೂರಕ ಸವಲತ್ತು, ವಿದ್ಯಾರ್ಥಿಯ ಶೈಕ್ಷಣಿಕ ಬೆಳವಣಿಗೆ ಮತ್ತು ಪ್ರತಿಕ್ರಿಯೆ, ಸಾಮಾಜಿಕ ಕಾಳಜಿ, ವಸತಿ ನಿಲಯ, ಹಣಕಾಸು ನಿರ್ವಹಣೆ, ಕ್ರೀಡೆ, ಸಾಂಸ್ಕೃತಿಕ ಸವಲತ್ತುಗಳು ಸೇರಿದಂತೆ ವಿವಿಧ ಹಂತಗಳಲ್ಲಿ ಸಮಗ್ರ ಪರಿಶೀಲನೆ ನಡೆಸಿ 3.24 ಸಿಜಿಪಿಎ ಅಂಕಗಳೊಂದಿಗೆ ‘ಎ’ ಶ್ರೇಣಿ ನೀಡಲಾಗಿದ್ದು, ಮುಂದಿನ 5 ವರ್ಷಗಳವರೆಗೆ ಈ ಮೌಲ್ಯಾಂಕನ ಚಾಲ್ತಿಯಲ್ಲಿರುತ್ತದೆ ಎಂದು ತಿಳಿಸಿದರು.
ತಾಂತ್ರಿಕ ಮಹಾವಿದ್ಯಾಲಯ ಆರಂಭವಾಗಿ 23 ವರ್ಷ ಕಳೆದಿದ್ದು, ಮೊದಲ ಯತ್ನದಲ್ಲೇ ನ್ಯಾಕ್ ‘ಎ’ ಶ್ರೇಣಿ ಪಡೆದಿರುವ ಆರ್‌ಎಲ್‌ಜೆಐಟಿ ಸಾಧನೆ ಅನನ್ಯ. ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ದಿವಂಗತ ಆರ್.ಎಲ್.ಜಾಲಪ್ಪ ಅವರ ಸಾಮಾಜಿಕ ಕಾಳಜಿಯ ಆಲೋಚನೆಗಳನ್ನು ಅನುಷ್ಠಾನಕ್ಕೆ ತರುವ ನಿಟ್ಟಿನಲ್ಲಿ ಸ್ಥಳೀಯರಿಗೆ ಹೆಚ್ಚಿನ ಶೈಕ್ಷಣಿಕ ಅವಕಾಶಗಳನ್ನು ಕಲ್ಪಿಸಲಾಗುತ್ತಿದೆ. ಎಲ್ಲ ಹಂತಗಳಲ್ಲೂ ಕಾಲೇಜು ಉನ್ನತೀಕರಣಗೊಂಡಿದೆ ಎಂದರು.
ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವ್ಯವಹಾರ ನಿರ್ವಹಣಾ ಸ್ನಾತಕೋತ್ತರ ಪದವಿ ಎಂಬಿಎ ಹಾಗೂ ಮುಂಬರುವ ವರ್ಷದಿಂದ ಎಂ.ಟೆಕ್ ಪದವಿಗಳನ್ನು ಆರಂಭಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.
ಕಾಲೇಜಿನ ಪ್ರಾಂಶುಪಾಲ ಡಾ.ಕೆ.ವಿಜಯ್ ಕಾರ್ತಿಕ್ ಮಾತನಾಡಿ, ಸತತ ಐದು ವರ್ಷಗಳ ಪರಿಶ್ರಮದ ಕಾರಣ ಈ ರಾಷ್ಟ್ರ ಮಟ್ಟದ ಗೌರವ ನಮ್ಮ ಕಾಲೇಜಿಗೆ ದೊರೆತಿದೆ. ಗುಣಮಟ್ಟದ ಶಿಕ್ಷಣ, ಸೌಲಭ್ಯ ನೀಡುವುದರ ಜೊತೆಗೆ ಸಿಬ್ಬಂದಿ, ಆಡಳಿತ ಮಂಡಳಿಯ ಸಹಕಾರದಿಂದ ಈ ಸಾಧನೆ ಸಾಧ್ಯವಾಗಿದೆ ಎಂದರು.
ಮಾನವ ಸಂಪನ್ಮೂಲ ಅಧಿಕಾರಿ ಎನ್.ಎಸ್.ಬಾಬುರೆಡ್ಡಿ ಮಾತನಾಡಿ, ಕಾಲೇಜಿನ ವಾತಾವರಣ, ಸೌಲಭ್ಯ, ಶಿಕ್ಷಣ ಸೇರಿದಂತೆ ಸಿಬ್ಬಂದಿಗಳಿಗೆ ಒದಗಿಸಲಾದ ಸೌಲಭ್ಯ, ವಿದ್ಯಾರ್ಥಿಗಳಿಗೆ ದೊರೆತ ಉದ್ಯೋಗಾವಕಾಶಗಳನ್ನೂ ಆದ್ಯತೆಯಾಗಿ ಪರಿಗಣಿಸಲಾಗಿದೆ ಎಂದರು.
ಉಪಪ್ರಾಂಶುಪಾಲ ಡಾ.ಶಿವಪ್ರಸಾದ್, ನ್ಯಾಕ್ ಸಂಯೋಜಕರು, ವಿವಿಧ ವಿಭಾಗಗಳ ಮುಖ್ಯಸ್ಥರು ಉಪಸ್ಥಿತರಿದ್ದರು.
ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…
"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…