ಕೋಲಾರ: ಆರ್ ಟಿ ಒ ಕಚೇರಿಯಲ್ಲಿ ಸಾರ್ವಜನಿಕರ ದೂರಿನ ಮೇರೆಗೆ ಶಾಸಕ ಕೊತ್ತೂರು ಜಿ ಮಂಜುನಾಥ್ ಸೋಮವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿಗಳು ಹಾಗೂ ಸಾರ್ವಜನಿಕರಿಂದ ಮಾಹಿತಿ ಪಡೆದರು.
ಈ ಸಂದರ್ಭದಲ್ಲಿ ಮಾತನಾಡಿ, ಶಾಸಕ ಕೊತ್ತೂರು ಮಂಜುನಾಥ್ ಆರ್ ಟಿ ಓ ಕಚೇರಿಯಲ್ಲಿ ಬ್ರೋಕರ್ ಗಳನ್ನು ದೂರವಿಟ್ಟು ಸಾರ್ವಜನಿಕರಿಗೆ ನೇರವಾಗಿ ಸ್ಪಂದಿಸಬೇಕು ಡ್ರೈವಿಂಗ್ ಲೈಸೆನ್ಸ್ ಹಾಗೂ ಸ್ಮಾರ್ಟ್ ಕಾರ್ಡ್ ವಿತರಣೆಯಲ್ಲಿ ವಿಳಂಬದಿಂದ ಸಾರ್ವಜನಿಕರು ಸಮಸ್ಯೆ ಎದುರಿಸುತ್ತಿರುವ ಬಗ್ಗೆ ಮಾಹಿತಿ ಪಡೆದು ಈ ಬಗ್ಗೆ ಕೂಡಲೇ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯಾದ್ಯಂತ ಖಾಸಗಿ ಬಸ್ ಗಳು ನಿಗದಿತ ಮಾರ್ಗದಲ್ಲಿ ಅನುಮತಿ ಹೊಂದಿದ್ದರೂ ನಿಯಮಬಾಹಿರವಾಗಿ ಸಂಚರಿಸುತ್ತಿರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಅನ್ಯ ಮಾರ್ಗದ ಪರ್ಮಿಟ್ ಹೊಂದಿರುವ ಬಸ್ಸುಗಳ ಪ್ರವೇಶವಾಗಿದ್ದು ಅಂತಹ ಬಸ್ಸುಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು ಕಚೇರಿಯಲ್ಲಿ ಖಾಲಿ ಹುದ್ದೆಗಳ ಬಗ್ಗೆ ಮಾಹಿತಿ ಪಡೆದ ಶಾಸಕರು, ತಕ್ಷಣ ಖಾಲಿ ಹುದ್ದೆ ಭರ್ತಿಗೆ ಸರ್ಕಾರಕ್ಕೆ ಮನವಿ ಮಾಡಲಾಗುತ್ತದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಸಂಜಯ್ ರೆಡ್ಡಿ , ಮುಖಂಡರಾದ ಉರಟಾಗ್ರಹಾರ ಚೌಡರೆಡ್ಡಿ, ಮಲೇಷಿಯಾ ರಾಜಕುಮಾರ್ ಮುಂತಾದವರು ಇದ್ದರು.
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…
ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…
ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ 14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…