ಕೋಲಾರ: ನಗರದ ಪ್ರಾದೇಶಿಕ ಸಾರಿಗೆ (ಆರ್.ಟಿ.ಒ) ಕಚೇರಿಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ಲೋಕಾಯುಕ್ತ ತನಿಖೆಗೆ ಒತ್ತಾಯಿಸುವಂತೆ ಕರ್ನಾಟಕ ರಿಪಬ್ಲಿಕನ್ ಸಂಘಟನೆ ವತಿಯಿಂದ ತಮಟೆ ಚಳುವಳಿಗೆ ನಿರ್ಧರಿಸಲಾಗಿತ್ತು. ಮನವಿ ಸ್ವೀಕರಿಸಬೇಕಾದ ಅಧಿಕಾರಿಯೇ ಇಲ್ಲವಾಗಿದ್ದು, ಏ.16 ರಿಂದ ಕಛೇರಿ ಮುಂದೆ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗುತ್ತದೆ ಎಂದು ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಚಿಕ್ಕನಾರಾಯಣ ತಿಳಿಸಿದರು.
ನಗರದ ಆರ್.ಟಿ.ಒ ಕಚೇರಿ ಮುಂದೆ ಮಾತನಾಡಿದ ಅವರು ಕೋಲಾರ ಪ್ರಾದೇಶಿಕ ಸಾರಿಗೆ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಭ್ರಷ್ಟಾಚಾರ ಮಿತಿಮೀರಿದೆ ಡೈವಿಂಗ್ ತರಬೇತಿ ಕೇಂದ್ರಗಳ ಮಾಲೀಕರ ಜೊತೆಗೆ ಕೈ ಜೋಡಿಸಿ ಅನರ್ಹ ಅಭ್ಯರ್ಥಿಗಳಿಗೆ ಪರವಾನಗಿಗಳನ್ನು ನೀಡುವ ಮೂಲಕ ಬೇಕಾಬಿಟ್ಟಿ ಹಣ ವಸೂಲಿ ಮಾಡುತ್ತಿದ್ದಾರೆ ಇದಕ್ಕೆ ಕಡಿವಾಣವಾಗಬೇಕಾದರೆ ಲೋಕಾಯುಕ್ತರು ತನಿಖೆ ನಡೆಸಿ ಸಂಬಂಧಿಸಿದ ಅಧಿಕಾರಿಗಳು ಹಾಗೂ ಸಿಬ್ಬಂದಿ ವಿರುದ್ಧ ಕಾನೂನು ಕ್ರಮ ವಹಿಸಬೇಕು ಪ್ರತಿಭಟನೆಗೆ ಕರೆ ನೀಡಿದರೆ ಮನವಿ ಸ್ವೀಕರಿಸುವ ಅಧಿಕಾರಿಗಳು ನಾಪತ್ತೆಯಾಗುತ್ತಾರೆ ಎಂದು ಆರೋಪಿಸಿದರು.
ಜಿಲ್ಲೆಯಲ್ಲಿ ಆರ್.ಟಿ.ಒ ಅಧಿಕಾರಿ ವೇಣುಗೋಪಾಲ ರೆಡ್ಡಿ ಕುಮ್ಮಕ್ಕು ನಿಂದಾಗಿ ಖಾಸಗಿ ಬಸ್ ಗಳಿಗೆ ಅಸಲಿ ಮಾರ್ಗಗಳು ಇಲ್ಲದೇ ಇದ್ದರೂ ಬೇಕಾಬಿಟ್ಟಿ ಮಾರ್ಗಗಳಲ್ಲಿ ಚಲುಸುತ್ತಿವೆ ನಕಲಿ ರಸೀದಿಯನ್ನು ಬಳಸಿಕೊಂಡು ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟು ಮಾಡಿದ್ದಾರೆ ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದೆ ಶಾಲಾ ಕಾಲೇಜುಗಳ ವಾಹನಗಳಿಂದ ತಿಂಗಳ ಮಾಮೂಲಿ ನಡೆಯಯತ್ತಿದೆ ಈ ಎಲ್ಲಾ ಭ್ರಷ್ಟಾಚಾರಕ್ಕೆ ಕಡಿವಾಣವಾಗಲು ಲೋಕಾಯುಕ್ತ ಸಂಸ್ಥೆಯಿಂದ ತನಿಖೆ ನಡೆಸಬೇಕು ಇದಕ್ಕಾಗಿ ಏಪ್ರಿಲ್16 ರಂದು ಕಛೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಯಲಿದೆ ಎಂದರು.
ಈ ಸಂದರ್ಭದಲ್ಲಿ ಪಿವಿಸಿ ಸಂಘಟನೆಯ ಜಿಲ್ಲಾ ಅಧ್ಯಕ್ಷ ಪಿವಿಸಿ ಮಣಿ, ಕರ್ನಾಟಕ ರಿಪಬ್ಲಿಕನ್ ಸಂಘಟನೆ ರಾಜ್ಯ ಸಂಘಟನಾ ಕಾರ್ಯದರ್ಶಿ ಕೃಷ್ಣಮೂರ್ತಿ ಜಿಲ್ಲಾ ಅಧ್ಯಕ್ಷ ವಿ.ಅಮರೇಶ್, ಬಂಗಾರಪೇಟೆ ತಾಲೂಕು ಪ್ರಧಾನ ಕಾರ್ಯದರ್ಶಿ ತಿಪ್ಪಯ್ಯ ಇದ್ದರು.
ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…
ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…
ಎಲ್ಲರನ್ನು ಬೆಚ್ಚಿಬೀಳಿಸುವಂತಹ ಭೀಕರ ರಸ್ತೆ ಅಪಘಾತವೊಂದು ಚಿತ್ರದುರ್ಗದ ಬಳಿ ನಡೆದಿದ್ದು, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ 'ಸೀ ಬರ್ಡ್' ಖಾಸಗಿ ಬಸ್…
ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಸ್ವಸ್ತಿಶ್ರೀ ವಿಜಯಾಭ್ಯುದಯ ಶಾಲಿವಾಹನ ಶಕ ವರ್ಷಂಗಳು 1946ಕ್ಕೆ ಸರಿಯಾದ…
ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…
ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…