ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ಐಪಿಎಲ್ ಸಂಭ್ರಮಾಚರಣೆಯ ವೇಳೆ ಕಾಲ್ತುಳಿತಕ್ಕೆ ಸಿಲುಕಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ಕ್ಷೇಮ ವಿಚಾರಿಸಲಾಯಿತು. ಆರ್.ಸಿ.ಬಿ ವಿಜಯೋತ್ಸವದ ಸಂದರ್ಭದಲ್ಲಿ ನಿರೀಕ್ಷೆ ಮೀರಿ ಜನಪ್ರವಾಹ ಹರಿದು ಬಂದ ಹಿನ್ನೆಲೆಯಲ್ಲಿ ಉಂಟಾಗಿರುವ ದುರಂತದಲ್ಲಿ 11 ಮಂದಿಗೂ ಹೆಚ್ಚು ಅಭಿಮಾನಿಗಳು ಪ್ರಾಣ ಕಳೆದುಕೊಂಡಿರುವುದು ಹಾಗೂ ಹಲವರು ಸಾವು ಬದುಕಿನ ನಡುವೆ ಹೋರಾಡುತ್ತಿರುವುದು ಅತ್ಯಂತ ನೋವಿನ ಸಂಗತಿ. ನೂರಾರು ಸಂಖ್ಯೆಯ ಜನ ಅಸ್ವಸ್ಥರಾಗಿ ಆಸ್ಪತ್ರೆ ಸೇರಿರುವ ಹೃದಯವಿದ್ರಾವಕ ಘಟನೆ ಸಂಭ್ರಮದ ಮನೆಯಲ್ಲಿ ಸೂತಕದ ಛಾಯೆ ಆವರಿಸುವಂತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.
ರಾಜ್ಯ ಸರ್ಕಾರ ಈ ಕೂಡಲೇ ನೊಂದ ಕುಟುಂಬಗಳಿಗೆ ಆತ್ಮವಿಶ್ವಾಸ ತುಂಬಬೇಕು, ಸಾಂತ್ವನ ಹೇಳಬೇಕು ಹಾಗೂ ಸೂಕ್ತ ಪರಿಹಾರ ಘೋಷಿಸಬೇಕು, ಅಸ್ವಸ್ಥತೆಯಿಂದ ಚಿಕಿತ್ಸೆ ಅವಶ್ಯಕತೆ ಇರುವವರಿಗೆ ತಕ್ಷಣ ಸೂಕ್ತ ಚಿಕಿತ್ಸೆ ಕಲ್ಪಿಸುವ ನಿಟ್ಟಿನಲ್ಲಿ ಎಲ್ಲಾ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು.
ಆರ್‌ಸಿಬಿ ವಿಜಯದ ನಂತರ ಇಡೀ ರಾಜ್ಯದಲ್ಲಿ ಬೆಂಗಳೂರೂ ಸೇರಿದಂತೆ ಕೆಲ ಪ್ರಮುಖ ನಗರಗಳಲ್ಲಿ ಜನರು ವಿಜಯೋತ್ಸವದಲ್ಲಿ ಮುಳುಗಿದ್ದು ಅಭಿಮಾನಿಗಳ ಸಂಭ್ರಮಾಚರಣೆಯ ಸಂದರ್ಭದಲ್ಲಿ ಪರಿಸ್ಥಿತಿ ನಿಭಾಯಿಸಲಾಗದ ಸ್ಥಿತಿ ನಿನ್ನೆಯೇ ಉದ್ಬವಿಸಿತ್ತು ಎಂದರು.
ಈ ಹಿನ್ನೆಲೆಯಲ್ಲಿ ಇಂದೇ ಸಂಭ್ರಮಾಚರಣೆ ಆಚರಿಸುವ ಕುರಿತು ಸೇರಬಹುದಾದ ಜನರ ಲೆಕ್ಕಾಚಾರವನ್ನು ಅಂದಾಜಿಸಿ ಸರ್ಕಾರ ವಿವೇಚಿಸಿ ನಿರ್ಧಾರ ತೆಗೆದುಕೊಳ್ಳಬಹುದಾಗಿತ್ತು, ಆದರೆ ಆ ನಿಟ್ಟಿನಲ್ಲಿ ಮುನ್ನೆಚ್ಚರಿಕೆಯ ವ್ಯವಸ್ಥೆ ರೂಪಿಸುವ ನಿಟ್ಟಿನಲ್ಲಿ ಪರಿಸ್ಥಿತಿ ಕೈಮೀರುವ ಹಂತವನ್ನು ಅಂದಾಜಿಸಿ ಮತ್ತೊಂದು ದಿನಾಂಕವನ್ನು ನಿಗದಿಪಡಿಸಬಹುದಾಗಿತ್ತು, ಆದರೆ ಆತುರದ ನಿರ್ಧಾರದಿಂದ ಈ ರೀತಿಯ ದುರ್ಘಟನೆ ಸಂಭವಿಸಿದೆ. ಇದರ ಹೊಣೆ ಯಾರು ಹೊರಬೇಕು? ಎಂಬುದನ್ನು ಸರ್ಕಾರ ವಿವೇಚಿಸಲಿ. ಪರಿಸ್ಥಿತಿಯನ್ನು ವ್ಯವಸ್ಥಿತವಾಗಿ ನಿಭಾಯಿಸಲಾಗದ ವೈಫಲ್ಯದ ಕುರಿತು ನ್ಯಾಯಾಂಗ ತನಿಖೆಗೆ ಒತ್ತಾಯಿಸುವೆ ಎಂದು ತಿಳಿಸಿದ್ದಾರೆ.
ಸುಪ್ರಭಾತ.......... ಭಾರತೀಯ ಸಮಾಜ ಎಂಬುದು ಮಧ್ಯಮ ವರ್ಗದ ಸಂತೆ ಇದ್ದಂತೆ. ಇಲ್ಲಿ ಬಹುತೇಕ ಮಧ್ಯಮ ವರ್ಗದವರೇ ಅತಿ ಹೆಚ್ಚು ಮಧ್ಯಮ…
ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…
"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…