ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಓರ್ವ ವೃದ್ಧ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ನಗರದ ಹೊರವಲಯದಲ್ಲಿರುವ ಆಲಹಳ್ಳಿ ಬಳಿ ಸಂಭವಿಸಿದೆ.
ಘಟನೆಯಲ್ಲಿ ಸುಮಾರು 60 ವರ್ಷ ವಯಸ್ಸಿನ ಅಪರಿಚಿತ ವೃದ್ಧ ಸಾವನಪ್ಪಿದ್ದಾರೆ.
ಭಾನುವಾರ ರಾತ್ರಿ ಘಟನೆ ನಡೆದಿರಬಹುದು ಎನ್ನಲಾಗುತ್ತಿದ್ದು, ತುರ್ತು ಸಂಖ್ಯೆಗಳಾದ 108ಗೆ ಕರೆ ಮಾಡಿದರು ಸಂಪರ್ಕ ದೊರಕದೆ ವೃದ್ಧನ ಶವ ರಸ್ತೆಯಲ್ಲಿಯೇ ಅನಾಥವಾಗಿ ಬಿದ್ದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.