ಭಾರತೀಯ ಬೌಲಿಂಗ್ ವಿಭಾಗದ ಕಳಪೆ ಪ್ರದರ್ಶನದ ಲಾಭ ಪಡೆದು ಕೊನೆಯ ನಾಲ್ಕು ಓವರ್ ಗಳಲ್ಲಿ 68 ರನ್ ಗಳಿಸುವ ಮೂಲಕ ಭಾರತ ವಿರುದ್ಧದ ಎರಡನೇ ಟಿ-ಟ್ವೆಂಟಿ ಪಂದ್ಯದಲ್ಲಿ 206 ರನ್ ಗಳ ಬೃಹತ್ ಮೊತ್ತ ಕಲೆ ಹಾಕಿದ ಶ್ರೀಲಂಕಾ 16 ರನ್ ಗಳ ಅಧಿಕಾರಯುತ ಗೆಲುವು ಸಾಧಿಸಿತು.
ಟಾಸ್ ಗೆದ್ದು ಬೌಲಿಂಗ್ ಪ್ರಾರಂಭಿಸಿದ ಟೀಂ ಇಂಡಿಯಾದ ಯೋಜನೆ ಫಲ ನೀಡಲಿಲ್ಲ, ಶ್ರೀಲಂಕಾದ ಆರಂಭಿಕ ಜೋಡಿ ಕುಶಾಲ್ ಮೆಂಡಿಸ್ (52) ಹಾಗೂ ನಿಸಾಂಕ (33) ರನ್ ನಿಂದಾಗಿ ಮೊದಲ ವಿಕೆಟ್ ಗೆ 80 ರನ್ ಪೇರಿಸುವ ಮೂಲಕ ಬೌಲಿಂಗ್ ಪಡೆಯನ್ನು ಇನ್ನಿಲ್ಲದಂತೆ ಕಾಡಿದರು.
ಮೊದಲ ವಿಕೆಟ್ ಕಳೆದುಕೊಂಡ ನಂತರ ಲಂಕಾದ ಬ್ಯಾಟ್ಸ್‌ಮನ್ ಗಳು ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲರಾದರು ನಂತರ ತಂಡಕ್ಕೆ 58 ರನ್ ಸೇರಿಸುವ ಭರದಲ್ಲಿ 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದರು.
ಈ ಸಂದರ್ಭದಲ್ಲಿ ಜೊತೆಯಾದ ನಾಯಕ ದಸುನ್ ಶನಕಾ ಅಜೇಯ(56) ಹಾಗೂ ಕರುಣಾರತ್ನೆ (11) ಜೊತೆಯಾಟದ ಬಲದಿಂದ ಕೊನೆಯ ನಾಲ್ಕು ಓವರ್ ಗಳಲ್ಲಿ 68 ರನ್ ಗಳಿಸುವ ಮೂಲಕ ಬೃಹತ್ ಮೊತ್ತ ಕಲೆ ಹಾಕಿದರು.
ಮೊದಲ ಪಂದ್ಯದಲ್ಲಿ ಉತ್ತಮ ಪ್ರದರ್ಶನ ತೋರಿದ್ದ ಭಾರತೀಯ ಬೌಲಿಂಗ್ ವಿಭಾಗ ಎರಡನೇ ಪಂದ್ಯದಲ್ಲಿ ಕಳಪೆ ಪ್ರದರ್ಶನ ನೀಡಿತು, ಐದು ನೋಬಾಲ್ ಎಸೆಯುವ ಮೂಲಕ ಎಡಗೈ ವೇಗಿ ಅಶ೯ದೀಪ್ ಸಿಂಗ್ ದುಬಾರಿಯಾದರು.
ರನ್ ಬೆನ್ನತ್ತಿದ ಭಾರತ ತಂಡ ಆರಂಭಿಕ ಆಟಗಾರರು ಬೇಗನೆ ಪೆವಿಲಿಯನ್ ಸೇರಿದರು, ಕಳೆದ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ನಾಯಕ ಹಾರ್ದಿಕ್ ಪಾಂಡ್ಯ ಹಾಗೂ ಆಲ್ ರೌಂಡರ್ ದೀಪಕ್ ಹೂಡ ಉತ್ತಮ ಪ್ರದರ್ಶನ ತೋರುವಲ್ಲಿ ವಿಫಲರಾದರು, ತಂಡದ ಮೊತ್ತ 57 ರನ್ ಗಳಿಸಿದ್ದ ಸಂದರ್ಭದಲ್ಲಿ 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು.
ಸಂಕಷ್ಟ ಹಂತದಲ್ಲಿ ಜೊತೆಯಾದ ಸೂರ್ಯಕುಮಾರ್ ಯಾದವ್ (51) ಹಾಗೂ ಆಲ್ ರೌಂಡರ್ ಅಕ್ಷರ್ ಪಟೇಲ್(65) ರನ್ ಪೇರಿಸುವ ಮೂಲಕ ಒಂದು ಹಂತದಲ್ಲಿ ಅಭಿಮಾನಿಗಳಲ್ಲಿ ಗೆಲುವಿನ ಆಸೆ ಮೂಡಿಸಿದ್ದರು, ಆದರೆ ಮಧುಶಂಕ ಎಸೆದ ಚೆಂಡನ್ನು ಅರಿಯುವಲ್ಲಿ ವಿಫಲವಾದ ಸೂರ್ಯಕುಮಾರ್ ಯಾದವ್ ಹಸರಂಗಗೆ ಕ್ಯಾಚ್ ನೀಡಿದರು.
ಭರ್ಜರಿ ಬ್ಯಾಟಿಂಗ್ ಮಾಡಿದ ಅಕ್ಷರ್ ಪಟೇಲ್ ಮೂರು ಬೌಂಡರಿ ಹಾಗೂ ಆರು ಸಿಕ್ಸರ್ ಸಿಡಿಸುವ ಮೂಲಕ (65) ರನ್ ಗಳಿಸಿ ಪ್ರೇಕ್ಷಕರನ್ನು ಮೋಡಿ ಮಾಡಿದರು, ಬ್ಯಾಟಿಂಗ್ ನಲ್ಲಿ ಮಿಂಚಿದ ಬೌಲರ್ ಶಿವಂ ಮಾವಿ 2 ಬೌಂಡರಿ ಹಾಗೂ 2 ಸಿಕ್ಸರ್ ಸಿಡಿಸಿ (26) ರನ್ ಗಳಿಸಿ ಗಮನ ಸೆಳೆದರು.
ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…
ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…
ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…