ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಆವತಿಯಲ್ಲಿ ಹಮ್ಮಿಕೊಳ್ಳಲಾದ ವಿಕಸಿತ ಭಾರತ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ ಅವರು ಪಾಲ್ಗೊಂಡು ಕೇಂದ್ರ ಸರ್ಕಾರದ ವಿವಿಧ ಯೋಜನೆಗಳಡಿ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರು ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಫಲಾನುಭವಿಗಳೊಂದಿಗೆ ನಡೆಸಿದ ಸಂವಾದ ಕಾರ್ಯಕ್ರಮವನ್ನು ವೀಕ್ಷಿಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಇತರರು ಉಪಸ್ಥಿತರಿದ್ದರು.