ಆಶಾ ಭೋಸ್ಲೆ…..
ಸಂಗೀತ ಎಂಬ ಮಾಂತ್ರಿಕ ಮತ್ತು ಭಾವನಾತ್ಮಕ ಹಾಗೂ ಭ್ರಮಾತ್ಮಕ ಶಕ್ತಿಯ ಉತ್ತುಂಗ ಧ್ವನಿಯೊಂದು ನಮ್ಮನ್ನಗಲಿದ ಸಂದರ್ಭದಲ್ಲಿ……
ಶಬ್ದ ಅಥವಾ ಧ್ವನಿ ಕ್ರಮಬದ್ಧತೆಯ – ಶಿಸ್ತುಬದ್ಧತೆಯ ತರಂಗಗಳನ್ನು ಸಂಗೀತ ಎಂದು ಗ್ರಹಿಸಬಹುದೇ ?
ಅಥವಾ,
ಆ ಶಬ್ದಗಳ ಸುಶ್ರಾವ್ಯತೆ ಮಾತ್ರ ಸಂಗೀತವೇ ?
ಅಥವಾ,
ಧ್ವನಿ ಮತ್ತು ವಾದ್ಯಗಳ ಸಮ್ಮಿಲನದ ಭಾಷೆಗೆ ಸಂಗೀತ ಎನ್ನಬಹುದೇ……
ಅಥವಾ,
ಸಾಹಿತ್ಯ ಧ್ವನಿ ವಾದ್ಯಗಳ ಮಿಲನದ ಪ್ರಕ್ರಿಯೆಯೇ ಸಂಗೀತವೇ……
ಅಥವಾ,
ಧ್ವನಿಯ ಸ್ವರ, ಲಯ ತಾಳಗಳ ರೂಪವೇ ಸಂಗೀತ ಸೃಷ್ಟಿಸುತ್ತದೆಯೇ…..
ಭಾವನೆಗಳು ಅಕ್ಷರ ರೂಪದ ಸಾಹಿತ್ಯವಾಗಿ ಮೂಡಿದ ಮೇಲೆ ಆ ಅಕ್ಷರಗಳು ಮತ್ತೆ ಭಾವನೆಗಳಾಗಿ ಹಾಡಿನ ಮೂಲಕ ಪರಿವರ್ತನೆ ಹೊಂದಿ ಕೆಲವೊಮ್ಮೆ ಮತ್ತೆ ಅಕ್ಷರಗಳಾಗಿ ಮತ್ತೆ ಭಾವನೆಗಳಾಗುವ ಸರಪಳಿಯ ಕೊಂಡಿಯೊಂದು ಕಳಚಿದೆ……
ಸುಮಾರು ಮುಕ್ಕಾಲು ಶತಮಾನದ ಮನರಂಜನಾ ಮಾಧ್ಯಮದ ಲೋಕದಲ್ಲಿ ಮಿನುಗಿ ಜನಪ್ರಿಯರಾಗಿದ್ದ , ಎಷ್ಟೋ ಜನರ ಪಾಲಿನ ನೋವು ನಲಿವುಗಳ, ನೀರವ ರಾತ್ರಿಗಳ, ಬೆಳದಿಂಗಳ ಕಲರವದ, ಪ್ರೀತಿ ಪ್ರೇಮ ಪ್ರಣಯ ವಿರಹಗಳಲ್ಲಿ , ಕೆಲವೊಮ್ಮೆ ಭಕ್ತಿ ವೈರಾಗ್ಯಗಳೊಂದಿಗೆ ಸದಾ ಜೊತೆಯಾಗಿದ್ದ ಧ್ವನಿಯೊಂದು ಹಾಡುವುದನ್ನು ನಿಲ್ಲಿಸಿದೆ….
ಕೆಲವು ಅಪರೂಪದ ಸ್ವಾಭಾವಿಕ ಪ್ರತಿಭೆಗಳು ಎಲ್ಲಾ ಕ್ಷೇತ್ರಗಳಲ್ಲೂ ಉದಯಿಸಿವೆ. ಹೆಚ್ಚು ಶ್ರಮವಿಲ್ಲದೆ, ( ಅವರ ಪ್ರತಿಭೆಯ ಕಾರಣದಿಂದಾಗಿ ) ಆದರೆ ಶ್ರದ್ಧೆ ಮತ್ತು ಸಮರ್ಪಣಾ ಮನೋಭಾವದಿಂದ ತುಂಬಾ ಸರಳವಾಗಿ ಆ ಪ್ರತಿಭೆಯನ್ನು ದುಡಿಸಿಕೊಂಡಿದ್ದಾರೆ.
ಹಾಡುಗಳ ನಿಜವಾದ ಅರ್ಥ ಏನೇ ಇರಲಿ ಮನುಷ್ಯ ಜೀವಿಯ ಬದುಕಿನಲ್ಲಿ ಅತಿಹೆಚ್ಚು ಆಕರ್ಷಕ ಧ್ವನಿ ಎಂದರೆ ಅದು ಸಾಮಾನ್ಯವಾಗಿ ಹಾಡುಗಳು ಎಂದು ಕರೆಯಲ್ಪಡುವ ಧ್ವನಿ ತರಂಗಗಳು…….
ಬಹುಶಃ ಹುಟ್ಟಿದ ಮಗುವಿನಿಂದ ವೃದ್ದರವರೆಗೆ ಒಂದಲ್ಲ ಒಂದು ರೀತಿಯ ಹಾಡುಗಳ ಮೋಹ ಅವರ ಮನಸ್ಸುಗಳ ಮೇಲೆ ಪ್ರಭಾವ ಬೀರುವುದನ್ನು ಕಾಣಬಹುದು……
ಕೇವಲ ಭಾರತ ದೇಶ ಮಾತ್ರವಲ್ಲ, ಇಡೀ ಸೃಷ್ಟಿಯ ಮನುಷ್ಯ ಪ್ರಾಣಿಯ ಎಲ್ಲರಿಗೂ ಇದು ಅನ್ವಯಿಸುತ್ತದೆ. ಭಾಷೆಗಳನ್ನು ಮೀರಿ ಅನೇಕ ವೈವಿಧ್ಯಮಯ ಪ್ರಕಾರಗಳಲ್ಲಿ ಇದು ಅಸ್ತಿತ್ವದಲ್ಲಿದೆ…..
ಜಾನಪದವೇ ಇರಲಿ, ಶಾಸ್ತ್ರೀಯವೇ ಆಗಿರಲಿ, ಪಾಶ್ಚಿಮಾತ್ಯವೇ ಇರಲಿ, ಮಧ್ಯಪ್ರಾಚ್ಯದ ಅಥವಾ ಆಫ್ರಿಕಾದ ಸಂಗೀತವೇ ಇರಲಿ ಒಟ್ಟಿನಲ್ಲಿ ಹಾಡುಗಳು ಮನುಷ್ಯ ಜೀವನದ ಅವಿಭಾಜ್ಯ ಅಂಗವಾಗಿದೆ. ಅದು ಎಲ್ಲಾ ಕಾಲಮಾನಗಳನ್ನು ಮೀರಿ ಬೆಳೆದಿದೆ……
ಆಧುನಿಕತೆ ಮತ್ತು ತಂತ್ರಜ್ಞಾನ ಬೆಳೆದಂತೆ ಮುಖ್ಯವಾಗಿ ಸಿನಿಮಾ ರಂಗದ ಅಭಿವೃದ್ಧಿಯೊಂದಿಗೆ ಈ ಕ್ಷಣದಲ್ಲಿ ಹಾಡುಗಳು ಉತ್ತುಂಗಕ್ಕೇರಿದೆ……
ಸಂಕೀರ್ಣ ಬದುಕಿನ ಜಂಜಡಗಳಿಂದ ನರಳುತ್ತಿರುವ ಮನುಷ್ಯ ಮನರಂಜನೆ ಅಥವಾ ಮನಸ್ಸುಗಳ ಪುನಶ್ಚೇತನಕ್ಕಾಗಿ ಸಂಗೀತದ ಮೊರೆ ಹೋಗುವುದು ಸಾಮಾನ್ಯವಾಗಿ ನಾವು ಗಮನಿಸಿದ್ದೇವೆ ಮತ್ತು ಅನುಭವಿಸಿದ್ದೇವೆ…….
ಸಪ್ತ ಸ್ವರಗಳ ಸಹಾಯದಿಂದ ನವರಸಗಳನ್ನು ಹೊಮ್ಮಿಸುವ ಸಂಗೀತ ನಮ್ಮ ಭಾವನೆಗಳೊಂದಿಗೆ ಅಲೆಅಲೆಯಾಗಿ ತೇಲುತ್ತಾ ಸಾಗುವ ಪರಿ ಅನನ್ಯ….
ಅಂತಹ ಸಂಗೀತ – ಹಾಡುಗಳ ಕ್ಷೇತ್ರದಲ್ಲಿ ಅತ್ಯುನ್ನತ ಸಾಧನೆ ಮಾಡಿದ ಆಶಾ ಬೋಸ್ಲೆ ಸುಮಾರು 12000 ಕ್ಕೂ ಹೆಚ್ಚು ಹಾಡುಗಳಿಗೆ ಧ್ವನಿಯಾಗಿದ್ದವರು. ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ……
ಎಷ್ಟೋ ಪ್ರೇಮಿಗಳಿಗೆ, ಎಷೋ ವಿರಹಿಗಳಿಗೆ, ಎಷ್ಟೋ ನೋವುಂಡವರಿಗೆ, ಎಷ್ಟೋ ಕನಸುಗಾರರಿಗೆ, ಎಷ್ಟೋ ನಿರಾಶಾವಾದಿಗಳಿಗೆ, ಎಷ್ಟೋ ಹೃದಯಹೀನರಿಗೆ ತಮ್ಮ ಒಂದು ಹಾಡಿನ ಮೂಲಕ ಆ ಕ್ಷಣ ಒಂದು ಪ್ರತಿಕ್ರಿಯೆಯಾದ ಆಶಾ ಅವರ ಧ್ವನಿ ಹಾಡುವುದನ್ನು ನಿಲ್ಲಿಸಿದೆ.
ಬದುಕಿನ ಪಯಣದಲ್ಲಿ ಅನೇಕರಿಗೆ ಲಲಿತ ಕಲೆಗಳು ಸ್ಪೂರ್ತಿ ಪ್ರೇರಣೆ ಪ್ರಭಾವವನ್ನು ಹೊಂದುವ ಬಗೆಯನ್ನು ನೆನೆಯುತ್ತಾ…….
ಸಾವಿನ ನೆರಳಲ್ಲಿ ಬದುಕು….
ಒಬ್ಬ ಹೇಳಿದ ಜ್ಞಾನ ಮುಖ್ಯ,
ಇನ್ನೊಬ್ಬ ಹೇಳಿದ ಧ್ಯಾನ ಮುಖ್ಯ,
ಮತ್ತೊಬ್ಬ ಹೇಳಿದ ಭಕ್ತಿ ಮುಖ್ಯ,
ಮಗದೊಬ್ಬ ಹೇಳಿದ ಯೋಗ ಮುಖ್ಯ,
ಅಲ್ಲೊಬ್ಬ ಹೇಳಿದ ನಂಬಿಕೆ ಮುಖ್ಯ,
ಇಲ್ಲೊಬ್ಬ ಹೇಳಿದ ಕರ್ಮ ಮುಖ್ಯ,
ಹಿಂದೊಬ್ಬ ಹೇಳಿದ ತತ್ವ ಮುಖ್ಯ,
ಯಾವಾಗಲೋ ಒಬ್ಬ ಹೇಳಿದ ಸಿದ್ಧಾಂತ ಮುಖ್ಯ,
ಆಗೊಬ್ಬ ಅಂದ ಜೀವನ ಪವಿತ್ರವಾದುದು,
ಈಗೊಬ್ಬ ಅಂದ ಜೀವನ ನಶ್ವರ,
ಮತ್ತೊಬ್ಬ ಅಂದ ಜೀವನ ಅದ್ಭುತವಾದುದು,
ಮಗದೊಬ್ಬ ಅಂದ ಬದುಕು ಮಾಯೆ,
ಅಲ್ಲೊಬ್ಬ ಹೇಳಿದ ಬದುಕು ಭ್ರಮೆ,
ಇಲ್ಲೊಬ್ಬ ಅಂದ ಬದುಕು ಸುಂದರ,
ಹಿಂದೊಬ್ಬ ಹೇಳಿದ ದೇಹ ಮೂಳೆ ಮಾಂಸದ ತಡಿಕೆ,
ಆಗೊಬ್ಬ ಅಂದ ದೇಹವೇ ದೇಗುಲ,
ಯಾವಾಗಲೋ ಒಬ್ಬ ಹೇಳಿದ ಮೋಕ್ಷವೇ ಜೀವನದ ಅಂತಿಮ,
ಆದರೆ,
ಸಾಮಾನ್ಯನೊಬ್ಬ ಏನೂ ಹೇಳಲಿಲ್ಲ, ಜೀವಿಸಿದ,
ಬದುಕು ಬದುಕಷ್ಟೇ,ಉಳಿದದ್ದೂ ಬದುಕಷ್ಟೇ,
ಸಹಜವಾಗಿ ಬದುಕಿ,
ಬೇರೇನೂ ಇಲ್ಲ…..
ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ – ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ
ಲೇಖಕ-ವಿವೇಕಾನಂದ. ಎಚ್. ಕೆ
Effektives Schreiben von Hausarbeiten Das Schreiben von Hausarbeiten kann für viele Studierende eine große Herausforderung…
ನಾನು ಜೆಡಿಎಸ್ ತಾಲೂಕು ಅಧ್ಯಕ್ಷ ಸ್ಥಾನಕ್ಕಾಗಿ ವರಿಷ್ಠರ ಬಳಿ ಕೇಳಿದ್ದೇನೆ. ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ. ಪಕ್ಷದ ವರಿಷ್ಠರು ಯಾವುದೇ…
ಹೆಣ್ಣಿನ ಹಿತರಕ್ಷಣೆಗಾಗಿ ದೊಡ್ಡಬಳ್ಳಾಪುರದಲ್ಲಿ ಮಹಿಳಾ ಪೊಲೀಸ್ ಠಾಣೆಯನ್ನು ಸ್ಥಾಪನೆ ಮಾಡಲಾಗಿದೆ..ಈ ಮಹಿಳಾ ಠಾಣೆಯಲ್ಲಿ ಅತ್ಯಾಚಾರ, ವರದಕ್ಷಿಣೆ ನಿಷೇಧ ಕಾಯ್ದೆ, ಮಕ್ಕಳ…
ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ 14 ) ಅವರ ವ್ಯಕ್ತಿತ್ವ ಮತ್ತು…
In der heutigen akademischen Welt steht die Qualität der schriftlichen Arbeiten im Mittelpunkt des Interesses.…
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…