ಆಶ್ರಯ ನಿವೇಶನ ಹಂಚಿಕೆಯಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಆರೋಪ: ಕರವೇ ಪ್ರತಿಭಟನೆ

ದೊಡ್ಡಬಳ್ಳಾಪುರ: ಆಶ್ರಯ ನಿವೇಶನ ಹಾಗೂ ವಸತಿ ಯೋಜನೆಯಡಿ ಮಂಜೂರಾಗಿರುವ ಸರ್ಕಾರಿ ಜಮೀನಿನಲ್ಲಿ ನಿವೇಶನ ರಹಿತರಿಗೆ ಹಕ್ಕುಪತ್ರ ವಿತರಿಸುವಲ್ಲಿ ಕೆಲವು ಗ್ರಾಮ ಪಂಚಾಯಿತಿಗಳು ನಿರ್ಲಕ್ಷ್ಯ ವಹಿಸುತ್ತಿವೆ ಎಂದು ಆರೋಪಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಕುಮಾರ್ ಶೆಟ್ಟಿ ಬಣ) ತಾಲೂಕು ಘಟಕದ ವತಿಯಿಂದ ಗುರುವಾರ ತಾಲೂಕು ಪಂಚಾಯಿತಿ ಆವರಣದಲ್ಲಿ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ತಾಲೂಕು ಅಧ್ಯಕ್ಷ ಹಮಾಮ್ ವೆಂಕಟೇಶ್ ಮಾತನಾಡಿ, ಗ್ರಾಮೀಣ ಪ್ರದೇಶದ ನಿವೇಶನ ರಹಿತ ಬಡ ಕುಟುಂಬಗಳಿಗೆ ಆದ್ಯತೆಯ ಮೇರೆಗೆ ಆಶ್ರಯ ಯೋಜನೆಯಡಿ ನಿವೇಶನ ಹಂಚಿಕೆ ಮಾಡಿ ಸೂರು ಕಲ್ಪಿಸುವ ಉದ್ದೇಶದಿಂದ ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮ ಕಾರ್ಯನಿರ್ವಹಿಸುತ್ತಿದೆ. ಆದರೆ ಸರ್ಕಾರಿ ಜಾಗವನ್ನು ಗುರುತಿಸಿ ಬಡಾವಣೆಯಾಗಿ ಅಭಿವೃದ್ಧಿಪಡಿಸಿ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸುವಲ್ಲಿ ಕೆಲವು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿದರು.

ಜಮೀನು ಮಂಜೂರಾಗದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಲಭ್ಯವಿರುವ ಸರ್ಕಾರಿ ಜಾಗವನ್ನು ಗುರುತಿಸಿ ಮಂಜೂರಾತಿಗೆ ಪ್ರಸ್ತಾವನೆ ಸಲ್ಲಿಸುವುದು ಅಧಿಕಾರಿಗಳ ಜವಾಬ್ದಾರಿಯಾಗಿದೆ. ಆದರೆ ಕೆಲವು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಯೋಜನೆ ಅನುಷ್ಠಾನ ವಿಳಂಬವಾಗುತ್ತಿದೆ. ಈ ಬಗ್ಗೆ ಶಾಸಕರು ಹಾಗೂ ತಾಲೂಕು ದಂಡಾಧಿಕಾರಿಗಳು ಮಧ್ಯಪ್ರವೇಶಿಸಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ತಾಲೂಕಿನ ಕನಸವಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಮದೇವನಹಳ್ಳಿ ಸೇರಿದಂತೆ ಭಕ್ತರಹಳ್ಳಿ, ಹೊಸಹಳ್ಳಿ, ನಾಗಸಂದ್ರ, ಬಚ್ಚಹಳ್ಳಿ, ಶಿವಪುರ, ಸೊಣ್ಣಪ್ಪನಹಳ್ಳಿ, ಚಿಕ್ಕಬೆಳವಂಗಲ, ದೊಡ್ಡಹೆಜ್ಜಾಜಿ, ಚುಂಚೇಗೌಡನಹೊಸಹಳ್ಳಿ, ಮಧುರನಹೊಸಹಳ್ಳಿ, ಕೂಗೋನಹಳ್ಳಿ ಹಾಗೂ ಪಿಂಡಕೂರತಿಮ್ಮನಹಳ್ಳಿ ಗ್ರಾಮಗಳ ವಿವಿಧ ಸರ್ವೆ ಸಂಖ್ಯೆಗಳಲ್ಲಿರುವ ಸರ್ಕಾರಿ ಜಾಗಗಳನ್ನು ಆಶ್ರಯ ನಿವೇಶನ ಯೋಜನೆಗೆ ವರ್ಗಾಯಿಸಲಾಗಿದ್ದರೂ ಅಭಿವೃದ್ಧಿಪಡಿಸಿಲ್ಲ ಎಂದು ಆರೋಪಿಸಿದರು.

ನಕ್ಷೆ ಇಲ್ಲ, ಸಿವಿಲ್ ನ್ಯಾಯಾಲಯದಲ್ಲಿ ಪ್ರಕರಣ ಬಾಕಿ ಇದೆ, ಫಲಾನುಭವಿಗಳ ಆಯ್ಕೆ ಆಗಿಲ್ಲ, ಜಾಗದಲ್ಲಿ ತಕರಾರು ಇದೆ, ಹದ್ದುಬಸ್ತು ಪೂರ್ಣಗೊಂಡಿಲ್ಲ ಎಂಬ ಕಾರಣಗಳನ್ನು ಅಧಿಕಾರಿಗಳು ಮುಂದಿಡುತ್ತಿರುವುದನ್ನು ಕರವೇ ಖಂಡಿಸುತ್ತದೆ ಎಂದು ಹೇಳಿದರು.

ತಕ್ಷಣ ತಾಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಭೂಮಾಪನ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ಬಾಕಿ ಇರುವ ಪ್ರಕ್ರಿಯೆ ಪೂರ್ಣಗೊಳಿಸಿ ಅರ್ಹ ಫಲಾನುಭವಿಗಳಿಗೆ ನಿವೇಶನ ಹಂಚಿಕೆ ಮಾಡಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ತಾಲೂಕು ಕಚೇರಿ ಹಾಗೂ ತಾಲೂಕು ಪಂಚಾಯಿತಿ ಎದುರು ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಮುನಿರಾಜು, ಜಿಲ್ಲಾ ಉಪಾಧ್ಯಕ್ಷ ಎಸ್.ಎಲ್. ವೇಣು, ತಾಲೂಕು ಕಾರ್ಯಾಧ್ಯಕ್ಷ ಜೋಗಹಳ್ಳಿ ಅಮ್ಮು, ಯುವ ಘಟಕದ ಅಧ್ಯಕ್ಷ ಹೇಮಂತ್, ಉಪಾಧ್ಯಕ್ಷ ಕೆ.ಆರ್. ಮಂಜುನಾಥ್, ಎಸ್.ಎಂ. ಆನಂದ್ ಕುಮಾರ್, ಖಜಾಂಚಿ ರವಿ ಮುಕ್ಕೇನಹಳ್ಳಿ, ಪ್ರಧಾನ ಕಾರ್ಯದರ್ಶಿ ಬಶೀರ್ ಶ್ರೀನಗರ ಸೇರಿದಂತೆ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

Ramesh Babu

Journalist

Recent Posts

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL)…

2 hours ago

ಸ್ಟಿಂಗ್ ಆಪರೇಷನ್ ವಿವಾದ: ಸಿದ್ದರಾಮಯ್ಯನವರದ್ದು ಕುಮಾರಸ್ವಾಮಿ ತರಹದ ಚರಿತ್ರೆಯಲ್ಲ: ಎಚ್.ಡಿ.ಕೆ ವಿರುದ್ಧ ಸಚಿವ ಚಲುವರಾಯಸ್ವಾಮಿ ತೀವ್ರ ವಾಗ್ದಾಳಿ

ಸ್ಟಿಂಗ್ ಆಪರೇಷನ್ ಮಾಡಿಸುವುದಕ್ಕೆ ಮುಖ್ಯಮಂತ್ರಿಗಳಿಗೆ ತಲೆ ಕೆಟ್ಟಿದೆಯೇ? ಪದೇಪದೇ ಈ ವಿಚಾರದಲ್ಲಿ ಮುಖ್ಯಮಂತ್ರಿಗಳನ್ನು ಎಳೆದು ತರುವ ಎಚ್.ಡಿ. ಕುಮಾರಸ್ವಾಮಿ ಅವರಿಗೆ…

14 hours ago

ರಾಜಾನುಕುಂಟೆ ಬಳಿ ರೈಲು ಬೋಗಿಗಳಿಗೆ ಬೆಂಕಿ: ಎರಡು ಬೋಗಿಗಳು ಸುಟ್ಟು ಭಸ್ಮ

ದೊಡ್ಡಬಳ್ಳಾಪುರ: ಯಲಹಂಕ ಸಮೀಪದ ರಾಜಾನುಕುಂಟೆ ರೈಲ್ವೆ ನಿಲ್ದಾಣದ ಬಳಿ ರೈಲ್ವೆ ಹಳಿಗಳ ಮೇಲೆ ನಿಲ್ಲಿಸಿದ್ದ ಎರಡು ರೈಲು ಬೋಗಿಗಳಿಗೆ ಬೆಂಕಿ…

20 hours ago

ಮಧುರೆ ಕೆರೆಯಲ್ಲಿ ಮಣ್ಣು ದಂಧೆ ಆರೋಪ: ಸುಮಾರು 35 ಟ್ರ್ಯಾಕ್ಟರ್, 5 ಜೆಸಿಬಿಗಳ ಅಬ್ಬರ; ಮಣ್ಣು ತೆಗೆಯುವುದಕ್ಕೆ ಗ್ರಾಮಸ್ಥರ ಬ್ರೇಕ್!

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ತೆಗೆಯುವ ದಂಧೆ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸುಮಾರು 35 ಟ್ರ್ಯಾಕ್ಟರ್‌ಗಳು…

21 hours ago

ನಮ್ಮ ತೆರಿಗೆ ನಮ್ಮ ಹಕ್ಕು…

ನಮ್ಮ ತೆರಿಗೆ ನಮ್ಮ ಹಕ್ಕು, ಈ ವಿಷಯದಲ್ಲಿ ರಾಜಕೀಯ ಮೀರಿ ವೈಜ್ಞಾನಿಕ ಸಮತೋಲನ ಸಾಧಿಸಬೇಕಾದುದು ಇಂದಿನ ತುರ್ತು ಅಗತ್ಯವಾಗಿದೆ..... ಕೇಂದ್ರದ…

1 day ago

ದೇವನಹಳ್ಳಿ ಬಳಿ ಭೀಕರ ಅಪಘಾತ: ಓರ್ವ ಸಾವು: ಹಲವರಿಗೆ ಗಾಯ

ದೇವನಹಳ್ಳಿ: ನಿಧಾನವಾಗಿ ಸಾಗುತ್ತಿದ್ದ ಲಾರಿಗೆ ಹಿಂಬದಿಯಿಂದ ವೇಗವಾಗಿ ಬಂದ ರೇಂಜ್ ರೋವರ್ ಕಾರು ಡಿಕ್ಕಿ ಹೊಡೆದ ಪರಿಣಾಮ ಮೊಳಕಾಲ್ಮೂರು ಕ್ಷೇತ್ರದ…

1 day ago