ಆಸರೆ–ಸನ್ಮಿತ್ರ ಯೋಜನೆಯಡಿ ವಯೋವೃದ್ಧರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಜನಸ್ನೇಹಿ ಪೊಲೀಸ್ ವ್ಯವಸ್ಥೆಗೆ ಆಸರೆ–ಸನ್ಮಿತ್ರ ಸಹಕಾರಿ- ಎಎಸ್ಪಿ ವೆಂಕಟೇಶ್ ಪ್ರಸನ್ನ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ಹಾಗೂ ನವೋದಯ ಚಾರಿಟೇಬಲ್ ಟ್ರಸ್ಟ್ ಸಹಯೋಗದಲ್ಲಿ ಕರ್ನಾಟಕ ಪೊಲೀಸ್ ಇಲಾಖೆಯ ಆಸರೆ–ಸನ್ಮಿತ್ರ ಯೋಜನೆಯಡಿ ನಗರದ ಬಸವ ಭವನದಲ್ಲಿ ಭಾನುವಾರ ವಯೋವೃದ್ಧರಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಯಿತು.

ಶಿಬಿರಕ್ಕೆ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ವೆಂಕಟೇಶ್ ಪ್ರಸನ್ನ ಚಾಲನೆ ನೀಡಿ ಮಾತನಾಡಿ, ಪೊಲೀಸ್ ಇಲಾಖೆಯನ್ನು ಇನ್ನಷ್ಟು ಜನಸ್ನೇಹಿಯಾಗಿ ರೂಪಿಸುವ ಉದ್ದೇಶದಿಂದ ಮನೆ-ಮನೆ ಪೊಲೀಸ್, ಆಸರೆ ಹಾಗೂ ಸನ್ಮಿತ್ರ ಸೇರಿದಂತೆ ಹಲವು ಯೋಜನೆಗಳನ್ನು ಜಾರಿಗೊಳಿಸಲಾಗಿದೆ ಎಂದು ಹೇಳಿದರು.

ಸನ್ಮಿತ್ರ ಯೋಜನೆಯಡಿ ಮಾದಕ ವ್ಯಸನಿಗಳಿಗೆ ಆಪ್ತ ಸಮಾಲೋಚನೆ ನೀಡುವ ಮೂಲಕ ದುಶ್ಚಟಗಳಿಂದ ಹೊರಬರಲು ಮಾರ್ಗದರ್ಶನ ಮಾಡಲಾಗುತ್ತಿದೆ. ಪ್ರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗುರುತಿಸಲಾದ ವ್ಯಸನಿಗಳ ಹಿನ್ನೆಲೆಯನ್ನು ಪರಿಶೀಲಿಸಿ, ಅವರಿಗೆ ಮಾದಕ ವಸ್ತುಗಳು ಎಲ್ಲಿಂದ ದೊರೆಯುತ್ತವೆ ಹಾಗೂ ಯಾರ ಮೂಲಕ ತಲುಪುತ್ತವೆ ಎಂಬ ಮಾಹಿತಿಯನ್ನು ಸಂಗ್ರಹಿಸಿ, ಮಾದಕ ವಸ್ತುಗಳು ಅವರ ಕೈಗೆ ಸಿಗದಂತೆ ತಡೆಯುವುದೇ ಯೋಜನೆಯ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದರು.

ಗ್ರಾಮಾಂತರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಡಾ. ಎಂ.ಬಿ. ನವೀನ್ ಕುಮಾರ್ ಮಾತನಾಡಿ, ಭೂಗಳ್ಳರು ಹಾಗೂ ರಿಯಲ್ ಎಸ್ಟೇಟ್ ದಂಧೆಯಲ್ಲಿ ತೊಡಗಿರುವ ಕೆಲವರು ವಯೋವೃದ್ಧರನ್ನು ವಂಚಿಸುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ನಕಲಿ ದಾಖಲೆಗಳನ್ನು ಸೃಷ್ಟಿಸಿ ಆಸ್ತಿ ಕಬಳಿಸುವಂತಹ ಕೃತ್ಯಗಳಿಗೆ ಕಟ್ಟುನಿಟ್ಟಿನ ಕ್ರಮ ಅಗತ್ಯವಿದೆ ಎಂದು ಹೇಳಿದರು.

ಶಿಬಿರದಲ್ಲಿ ಕಣ್ಣಿನ ಪರೀಕ್ಷೆ, ದಂತ ತಪಾಸಣೆ, ರಕ್ತದೊತ್ತಡ, ಮಧುಮೇಹ ಪರೀಕ್ಷೆ, ಇಸಿಜಿ ಹಾಗೂ ಹೃದಯ ಸಂಬಂಧಿತ ತಪಾಸಣೆಗಳನ್ನು ನಡೆಸಲಾಯಿತು. ಅಲ್ಲದೆ ಮನೋವೈದ್ಯರಿಂದ ವಯೋವೃದ್ಧರಿಗೆ ಆಪ್ತ ಸಮಾಲೋಚನೆ ನೀಡಲಾಯಿತು. ಸನ್ಮಿತ್ರ ಯೋಜನೆಯಡಿ ಗುರುತಿಸಲ್ಪಟ್ಟಿರುವ 30 ಯುವಕರಿಗೂ ಸೈಕಿಯಾ ಟ್ರಸ್ಟ್ ಸಹಯೋಗದಲ್ಲಿ ಸಮಾಲೋಚನೆ ಹಾಗೂ ವೈದ್ಯಕೀಯ ಸಲಹೆ ನೀಡಲಾಯಿತು.
ಗ್ರಾಮಾಂತರ ಪೊಲೀಸ್ ಠಾಣೆಯ 11 ಬೀಟ್‌ಗಳಿಂದ ಆಯ್ಕೆ ಮಾಡಲಾದ ಒಟ್ಟು 110 ವಯೋವೃದ್ಧರಿಗೆ ಆರೋಗ್ಯ ತಪಾಸಣೆ ನಡೆಸಲಾಗಿದ್ದು, ಪೊಲೀಸ್ ಇಲಾಖೆಯ ವಿಶ್ವಾಸದ ಸಂಕೇತವಾಗಿ ವಿಶೇಷ ಕಿಟ್‌ಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಲಕ್ಷ್ಮೀನಾರಾಯಣ, ದೊಡ್ಡಬಳ್ಳಾಪುರ ಉಪವಿಭಾಗದ ಡಿವೈಎಸ್ಪಿ ಪಾಂಡುರಂಗ, ಇನ್ಸ್‌ಪೆಕ್ಟರ್ ಡಾ. ಎಂ.ಬಿ. ನವೀನ್ ಕುಮಾರ್, ಮನೋವೈದ್ಯ ಡಾ. ರವಿಕುಮಾರ್, ಡಾ. ಪರಮೇಶ್ವರ್, ಡಾ. ಇಂದಿರಾ, ನವೋದಯ ಚಾರಿಟೇಬಲ್ ಟ್ರಸ್ಟ್ ಮುಖ್ಯಸ್ಥ ಜನಾರ್ದನ್ ಸೇರಿದಂತೆ ಪೊಲೀಸ್ ಅಧಿಕಾರಿಗಳು, ವೈದ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL)…

3 hours ago

ಸ್ಟಿಂಗ್ ಆಪರೇಷನ್ ವಿವಾದ: ಸಿದ್ದರಾಮಯ್ಯನವರದ್ದು ಕುಮಾರಸ್ವಾಮಿ ತರಹದ ಚರಿತ್ರೆಯಲ್ಲ: ಎಚ್.ಡಿ.ಕೆ ವಿರುದ್ಧ ಸಚಿವ ಚಲುವರಾಯಸ್ವಾಮಿ ತೀವ್ರ ವಾಗ್ದಾಳಿ

ಸ್ಟಿಂಗ್ ಆಪರೇಷನ್ ಮಾಡಿಸುವುದಕ್ಕೆ ಮುಖ್ಯಮಂತ್ರಿಗಳಿಗೆ ತಲೆ ಕೆಟ್ಟಿದೆಯೇ? ಪದೇಪದೇ ಈ ವಿಚಾರದಲ್ಲಿ ಮುಖ್ಯಮಂತ್ರಿಗಳನ್ನು ಎಳೆದು ತರುವ ಎಚ್.ಡಿ. ಕುಮಾರಸ್ವಾಮಿ ಅವರಿಗೆ…

15 hours ago

ರಾಜಾನುಕುಂಟೆ ಬಳಿ ರೈಲು ಬೋಗಿಗಳಿಗೆ ಬೆಂಕಿ: ಎರಡು ಬೋಗಿಗಳು ಸುಟ್ಟು ಭಸ್ಮ

ದೊಡ್ಡಬಳ್ಳಾಪುರ: ಯಲಹಂಕ ಸಮೀಪದ ರಾಜಾನುಕುಂಟೆ ರೈಲ್ವೆ ನಿಲ್ದಾಣದ ಬಳಿ ರೈಲ್ವೆ ಹಳಿಗಳ ಮೇಲೆ ನಿಲ್ಲಿಸಿದ್ದ ಎರಡು ರೈಲು ಬೋಗಿಗಳಿಗೆ ಬೆಂಕಿ…

21 hours ago

ಮಧುರೆ ಕೆರೆಯಲ್ಲಿ ಮಣ್ಣು ದಂಧೆ ಆರೋಪ: ಸುಮಾರು 35 ಟ್ರ್ಯಾಕ್ಟರ್, 5 ಜೆಸಿಬಿಗಳ ಅಬ್ಬರ; ಮಣ್ಣು ತೆಗೆಯುವುದಕ್ಕೆ ಗ್ರಾಮಸ್ಥರ ಬ್ರೇಕ್!

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ತೆಗೆಯುವ ದಂಧೆ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸುಮಾರು 35 ಟ್ರ್ಯಾಕ್ಟರ್‌ಗಳು…

22 hours ago

ನಮ್ಮ ತೆರಿಗೆ ನಮ್ಮ ಹಕ್ಕು…

ನಮ್ಮ ತೆರಿಗೆ ನಮ್ಮ ಹಕ್ಕು, ಈ ವಿಷಯದಲ್ಲಿ ರಾಜಕೀಯ ಮೀರಿ ವೈಜ್ಞಾನಿಕ ಸಮತೋಲನ ಸಾಧಿಸಬೇಕಾದುದು ಇಂದಿನ ತುರ್ತು ಅಗತ್ಯವಾಗಿದೆ..... ಕೇಂದ್ರದ…

1 day ago

ದೇವನಹಳ್ಳಿ ಬಳಿ ಭೀಕರ ಅಪಘಾತ: ಓರ್ವ ಸಾವು: ಹಲವರಿಗೆ ಗಾಯ

ದೇವನಹಳ್ಳಿ: ನಿಧಾನವಾಗಿ ಸಾಗುತ್ತಿದ್ದ ಲಾರಿಗೆ ಹಿಂಬದಿಯಿಂದ ವೇಗವಾಗಿ ಬಂದ ರೇಂಜ್ ರೋವರ್ ಕಾರು ಡಿಕ್ಕಿ ಹೊಡೆದ ಪರಿಣಾಮ ಮೊಳಕಾಲ್ಮೂರು ಕ್ಷೇತ್ರದ…

1 day ago