ಸಾರ್ವತ್ರಿಕ ಲೋಕಸಭಾ ಚುನಾವಣೆ-2024 ರ ಸಂಬಂಧ ಏಪ್ರಿಲ್ 26 ರಂದು ನಡೆಯುವ ಮತದಾನದ ದಿನದಂದು ಯಾವುದೇ ಆಸೆ ಆಮಿಷಗಳಿಗೆ ಒಳಗಾಗದೆ ಪ್ರತಿಯೊಬ್ಬ ಮತದಾರರು ಕಡ್ಡಾಯವಾಗಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸಿ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಎನ್ ಶಿವಶಂಕರ ಅವರು ಹೇಳಿದರು.
ಸಾರ್ವತ್ರಿಕ ಲೋಕಸಭಾ ಚುನಾವಣೆ 2024ರ ಅಂಗವಾಗಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಆಯೋಜಿಸಿದ್ದ ಜಿಲ್ಲಾಡಳಿತ ಕಛೇರಿ ಮೇಲೆ ಮತದಾನ ಜಾಗೃತಿಗಾಗಿ ಹಾಟ್ ಏರ್ ಬಲೂನ್ ಅನಾವರಣ ಹಾಗೂ ಮತದಾನ ಜಾಗೃತಿ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಹಲವು ಮತದಾನ ಜಾಗೃತಿ ಕಾರ್ಯಕ್ರಮ ಗಳನ್ನು ಹಮ್ಮಿಕೊಳ್ಳಲಾಗಿದೆ. ಲೋಕಸಭಾ ಚುನಾವಣೆಗೆ ಏಪ್ರಿಲ್ 26 ರಂದು ಮತದಾನ ನಡೆಯಲಿದೆ. ಸಧೃಡ ದೇಶ ನಿರ್ಮಾಣ ಮಾಡಲು ಯಾವುದೇ ಆಸೆ ಆಮಿಷಗಳಿಗೆ ಒಳಗಾಗದೆ ತಪ್ಪದೇ ಪ್ರತಿಯೊಬ್ಬರು ಮತ ಚಲಾಯಿಸಿ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಸ್ವೀಪ್ ಸಮಿತಿಯ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಜಿಲ್ಲಾ ಐಕಾನ್ ಆಗಿ ಕಾಮಿಡಿ ಕಿಲಾಡಿ ನಟ ರಘು, ಲಿಂಗತ್ವ ಅಲ್ಪಸಂಖ್ಯಾತರ ಕ್ಷೇತ್ರದಿಂದ ಅದ್ಯ ಮತ್ತು ವಿಕಲಚೇತನರ ಕ್ಷೇತ್ರದಿಂದ ಪ್ಯಾರ ಕ್ರೀಡಾ ಪಟು ಪ್ರಕಾಶ್ ಅವರು ಭಾಗವಹಿಸಿ ಎಲ್ಲರು ತಪ್ಪದೇ ಮತದಾನದ ಹಕ್ಕು ಚಲಾಯಿಸಿ ಎಂದು ಮತದಾನ ಜಾಗೃತಿ ಮೂಡಿಸಿದರು.
ಮತದಾನ ಜಾಗೃತಿಗಾಗಿ ಜಿಲ್ಲಾಧಿಕಾರಿ ಹಾಟ್ ಏರ್ ಬಲೂನ್ ಹಾರಿಸುವ ಮೂಲಕ ಚಾಲನೆ ನೀಡಿದರು. ಮತದಾನ ಜಾಗೃತಿ ಸಹಿ ಸಂಗ್ರಹ ಅಭಿಯಾನದಲ್ಲಿ ಜಿಲ್ಲಾಧಿಕಾರಿ ಸೇರಿದಂತೆ ಎಲ್ಲಾ ಅಧಿಕಾರಿಗಳು, ಸಿಬ್ಬಂದಿ ಭಾಗವಹಿಸುವ ಮೂಲಕ ಎಲ್ಲರೂ ಸಹಿ ಹಾಕಿ ಮತದಾನ ಜಾಗೃತಿ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.
ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಸಂಗಪ್ಪ, ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಟಿ.ಕೆ ರಮೇಶ್, ಜಿಲ್ಲಾ ಪಂಚಾಯತಿ ಮುಖ್ಯ ಯೋಜನಾಧಿಕಾರಿ ರಾಮಕೃಷ್ಣಯ್ಯ, ಮುಖ್ಯ ಲೆಕ್ಕಾಧಿಕಾರಿ ಶ್ರೀನಿವಾಸ ಸೇರಿದಂತೆ ಜಿಲ್ಲಾಡಳಿತದ ಸಿಬ್ಬಂದಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಮುಸ್ಲಿಂ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು…
ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…
ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ 14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…
ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಅವರನ್ನು ಧಾರವಾಡ ನಗರದ ಹಾಶ್ಮಿನಗರದಲ್ಲಿ ಇರುವ ಮನೆಯಲ್ಲೇ ಹತ್ಯೆ ಮಾಡಿರುವ ಘಟನೆ…