Categories: ಟೆನಿಸ್

ಆಸ್ಟ್ರೇಲಿಯನ್ ಓಪನ್ ಡಬಲ್ಸ್‌ನಲ್ಲಿ ಭರ್ಜರಿ ಗೆಲುವು ಸಾಧಿಸಿದ ಕನ್ನಡಿಗ ರೋಹನ್​ ಬೋಪಣ್ಣ

ಭಾರತದ ಹಿರಿಯ ಟೆನಿಸ್ ಆಟಗಾರ ಕನ್ನಡಿಗ ರೋಹನ್​ ಬೋಪಣ್ಣ ಆಸ್ಟ್ರೇಲಿಯಾ ಓಪನ್​ ಟೆನಿಸ್​ ಟೂರ್ನಿಯಲ್ಲಿ ಪುರುಷರ ಡಬಲ್ಸ್ ವಿಭಾಗದಲ್ಲಿ ಪ್ರಶಸ್ತಿ ಗೆಲ್ಲುವ ಮೂಲಕ ಮಹತ್ತರ ಸಾಧನೆ ಮಾಡಿದ್ದಾರೆ.

ಇಂದು ನಡೆದ ಪುರುಷರ ಡಬಲ್ಸ್​ ಫೈನಲ್ ಪಂದ್ಯದಲ್ಲಿ ರೋಹನ್ ಬೋಪಣ್ಣ ಮತ್ತು ಅವರ ಜತೆಗಾರ ಆಸ್ಟ್ರೇಲಿಯಾದ ಮ್ಯಾಥ್ಯೂ ಎಬ್ಡೆನ್‌ ಸೇರಿ ಇಟಲಿಯ ಸಿಮೋನ್​ ಬೊಲೆಲ್ಲಿ-ಆ್ಯಂಡ್ರಿಯಾ ವಸಸ್ಸೊರಿ ವಿರುದ್ಧ 7-6(7-0), 7-5 ನೇರ ಸೆಟ್​ಗಳಿಂದ ಗೆಲುವು ಸಾಧಿಸುವ ಮೂಲಕ ಐತಿಹಾಸಿಕ‌ ಸಾಧನೆ ಮಾಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಶ್ಲಾಘನೆ

ವಿಶ್ವ ಟೆನ್ನಿಸ್‌ನ ನಂ.1 ಡಬಲ್ಸ್‌ ಆಟಗಾರ, ಕನ್ನಡಿಗ ರೋಹನ್‌ ಬೋಪಣ್ಣ ಅವರು ಆಸ್ಟ್ರೇಲಿಯಾದ ಮ್ಯಾಥ್ಯೂ ಎಬ್ಡನ್‌ ಜೊತೆಗೂಡಿ ಆಸ್ಟ್ರೇಲಿಯನ್ ಓಪನ್ ಡಬಲ್ಸ್‌ನಲ್ಲಿ ಪ್ರಶಸ್ತಿ ಮುಡಿಗೇರಿಸಿಕೊಳ್ಳುವ ಮೂಲಕ ನಾಡಿಗೆ ಹೆಮ್ಮೆ ಮೂಡಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಶ್ಲಾಘನೆ‌ ಮಾಡಿದ್ದಾರೆ.

ಈ ಪ್ರಶಸ್ತಿ ಗೆಲುವಿನೊಂದಿಗೆ ಅವರು ಗ್ರ್ಯಾಂಡ್‌ ಸ್ಲಾಂ ಪ್ರಶಸ್ತಿ ಗೆದ್ದ ಅತ್ಯಂತ ಹಿರಿಯ ಆಟಗಾರ ಎಂಬ ಹೊಸ ದಾಖಲೆ ಬರೆದಿರುವುದು ವಿಶೇಷ ಎಂದಿದ್ದಾರೆ.

ವಯಸ್ಸು ಬರೀ ಅಂಕಿಗಳಿಗಷ್ಟೇ ಸೀಮಿತ, ಸಾಧನೆಯ ಹಂಬಲ ದೊಡ್ಡದೆಂಬ ಮಾತು ಇವರ ಆಟ ನೋಡಿದವರಿಗೆ ಅನ್ನಿಸದೆ ಇರಲಾರದು. ಇಂತಹ ಇನ್ನಷ್ಟು ದಾಖಲೆಗಳು ರೋಹನ್ ಬೋಪಣ್ಣನವರಿಂದ ಮೂಡಿಬರಲೆಂದು ಆಶಿಸುತ್ತೇನೆ ಎಂದು ತಿಳಿಸಿದ್ದಾರೆ.

Ramesh Babu

Journalist

Recent Posts

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

3 hours ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

3 hours ago

ದೊಡ್ಡಬಳ್ಳಾಪುರ ರೈಲ್ವೆ ಸ್ಟೇಷನ್ ಬಳಿ ಅಂಡರ್ ಪಾಸ್ ಅವೈಜ್ಞಾನಿಕ- ಮೇಲ್ಸೇತುವೆ ಅಗತ್ಯ- ಸಂಸದ ಡಾ. ಕೆ. ಸುಧಾಕರ್

ಕೇಂದ್ರ ಸರಕಾರದ ಜನಪರ ಯೋಜನೆಗಳನ್ನು ಕಾಲಮಿತಿಯೊಳಗೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ಅರ್ಹ ಫಲಾನುಭವಿಗಳಿಗೆ ತ್ವರಿತವಾಗಿ ಸೌಲಭ್ಯಗಳು ತಲುಪುವಂತೆ ಕ್ರಮವಹಿಸಿ ಎಂದು ಅಧಿಕಾರಿಗಳಿಗೆ…

4 hours ago

ಮುಂದಿನ ದಿನಗಳಲ್ಲಿ 1000 ಸಬ್ ಇನ್ಸ್ ಪೆಕ್ಟರ್, 8000 ಕಾನ್ಸ್ಟೇಬಲ್ ಗಳ ನೇಮಕ – ಗೃಹ ಸಚಿವ ಪರಮೇಶ್ವರ್

  ಪೊಲೀಸ್ ಇಲಾಖೆಯಲ್ಲಿ 1000 ಸಬ್ ಇನ್ಸ್ಪೆಕ್ಟರ್ ಹಾಗೂ 8000 ಕಾನ್ಸ್ಟೇಬಲ್ ಗಳನ್ನು ಆದಷ್ಟು ಶೀಘ್ರ ನೇಮಕ ಮಾಡಲಾಗುವುದು ಎಂದು…

4 hours ago

ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ

ಇಂದು ಮಧ್ಯಾಹ್ನ 3.00 ಗಂಟೆಗೆ 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ…

7 hours ago

ಪಿಯುಸಿ ವಿದ್ಯಾರ್ಥಿಗಳಿಗೆ National Academic Depository (NAD) – DigiLocker ಮೂಲಕ ಫಲಿತಾಂಶದ ದಿನವೇ ಅಂಕಪಟ್ಟಿ

2025-26ನೇ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಅಂಕಪಟ್ಟಿಯನ್ನು ಫಲಿತಾಂಶ ಪ್ರಕಟವಾದ ದಿನವೇ National Academic Depository…

10 hours ago