ತವರಿನಲ್ಲಿ ನಡೆಯುವ ಏಕದಿನ ವಿಶ್ವಕಪ್ ಗೂ ಮುನ್ನ ಆಸ್ಟ್ರೇಲಿಯಾ ವಿರುದ್ದ ನಡೆಯುವ ಏಕದಿನ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು ಕನ್ನಡಿಗ ಕೆ.ಎಲ್. ರಾಹುಲ್ ಅವರಿಗೆ ನಾಯಕನ ಪಟ್ಟವನ್ನು ನೀಡಲಾಗಿದೆ.
ಇತ್ತೀಚೆಗಷ್ಟೇ ಗಾಯದಿಂದ ಗುಣಮುಖರಾಗಿ ಏಷ್ಯಾ ಕಪ್ ನಲ್ಲಿ ಬ್ಯಾಟಿಂಗ್ ಹಾಗೂ ವಿಕೆಟ್ ಕೀಪಿಂಗ್ ನಲ್ಲಿ ಮಿಂಚಿದ್ದ ಕೆ.ಎಲ್. ರಾಹುಲ್ ಗೆ ಮತ್ತೊಮ್ಮೆ ನಾಯಕತ್ವ ನೀಡಿರುವುದು ಅಭಿಮಾನಿಗಳಲ್ಲಿ ಸಂತಸ ತಂದಿದೆ.
ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಹಾಗೂ ಉಪನಾಯಕ ಹಾರ್ದಿಕ್ ಪಾಂಡ್ಯ ಅವರಿಗೆ ವಿಶ್ರಾಂತಿ ನೀಡಲಾಗಿದ್ದು ಅನುಭವಿ ಆಫ್ ಸ್ಪಿನ್ನರ್ ಆರ್. ಅಶ್ವಿನ್ ಅವರು ವಾಪಸ್ ಆಗಿದ್ದಾರೆ.
ಮೊದಲೆರಡು ಪಂದ್ಯಕ್ಕೆ ಟೀಂ ಇಂಡಿಯಾ:
ಕೆಎಲ್ ರಾಹುಲ್ (ನಾಯಕ), ರವೀಂದ್ರ ಜಡೇಜಾ (ಉಪ ನಾಯಕ) ರುತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಇಶಾನ್ ಕಿಶನ್, ಶಾರ್ದೂಲ್ ಠಾಕೂರ್, ವಾಶಿಂಗ್ಟನ್ ಸುಂದರ್, ಆರ್ ಅಶ್ವಿನ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ
ಅಂತಿಮ ಪಂದ್ಯಕ್ಕೆ ಟೀಂ ಇಂಡಿಯಾ: ರೋಹಿತ್ ಶರ್ಮಾ(ನಾಯಕ), ಹಾರ್ದಿಕ್ ಪಾಂಡ್ಯ, ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಲ್ ರಾಹುಲ್, ಇಶಾನ್ ಕಿಶನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಸರ್ ಪಟೇಲ್, ವಾಶಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಆರ್ ಅಶ್ವಿನ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್
ಸೆಪ್ಟೆಂಬರ್ 22 ರಂದು ಮೊಹಾಲಿಯಲ್ಲಿ ಮೊದಲ ಪಂದ್ಯ, ಸೆಪ್ಟೆಂಬರ್ 24 ರಂದು ಇಂಧೋರ್ ಹಾಗೂ ತೃತೀಯ ಏಕದಿನ ಪಂದ್ಯವು ಸೆಪ್ಟೆಂಬರ್ 27 ರಂದು ರಾಜ್ಯ ಕೋಟ್ ನಲ್ಲಿ ನಡೆಯಲಿದೆ.