ಆಸ್ಟ್ರೇಲಿಯಾ ವಿರುದ್ದ ಮೊದಲ ಪಂದ್ಯ ಗೆದ್ದು ಬೀಗಿದ ಭಾರತ, ಮೂರು ಮಾದರಿಯಲ್ಲೂ ನಾವೇ ನಂ 1 !

ಮೊಹಮದ್ ಶಮಿ ಅವರ ಅತ್ಯುತ್ತಮ ಬೌಲಿಂಗ್ ಹಾಗೂ ಬ್ಯಾಟ್ಸ್ಮನಗಳ ಸಂಘಟಿತ ಪ್ರಯತ್ನದಿಂದಾಗಿ ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಸರಣಿಯ ಮೊದಲ ಪಂದ್ಯದಲ್ಲಿ ಕೆ.ಎಲ್. ರಾಹುಲ್ ನಾಯಕತ್ವದ ಭಾರತ ತಂಡ ಐದು ವಿಕೆಟ್ಗಳಿಂದ ಗೆದ್ದು ಬೀಗಿದೆ.

ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಭಾರತ ತಂಡದ ನಾಯಕ ಕೆ.ಎಲ್. ರಾಹುಲ್ ಅವರ ನಂಬಿಕೆಯನ್ನು ಬೌಲಿಂಗ್ ಪಡೆ ಉಳಿಸಿಕೊಂಡರು. ತಂಡದ ಮೊತ್ತ ಐದು ರನ್ ಗಳಿಸುವ ಸಂದರ್ಭದಲ್ಲಿ ಶಮಿ ಅವರ ಬೌಲಿಂಗ್ ನಲ್ಲಿ ಆರಂಭಿಕ ಆಟಗಾರ ಮಿಚೆಲ್ ಮಾಷ್೯ ವಿಕೆಟ್ ಒಪ್ಪಿಸಿದರು.

ನಂತರ ಒಂದಾದ ಡೇವಿಡ್ ವಾರ್ನರ್ (52) ಹಾಗೂ ಸ್ಟೀವನ್ ಸ್ಮಿತ್ (41) ರನ್ ಗಳಿಸುವ ಮೂಲಕ ತಂಡವನ್ನು ಸಂಕಷ್ಟದಿಂದ ಪಾರು ಮಾಡಿದರು.

ಮಧ್ಯಮ ಕ್ರಮಾಂಕದ ಬ್ಯಾಟಿಂಗ್ ವಿಭಾಗದಲ್ಲಿ ಲಬುಶನಗೆ (39), ಗ್ರೀನ್ (31), ಜೋಶ್ ಇಂಗ್ಲಿಷ್ (45), ಸ್ಪಾನಿಶ್(29) ಹಾಗೂ ನಾಯಕ ಪ್ಯಾಟ್ ಕಮ್ಮಿನ್ಸ್(21) ಅವರ ಬ್ಯಾಟಿಂಗ್ ಬಲದಿಂದ 276 ರನ್ ಕಲೆಹಾಕಿತು.

ಭಾರತದ ಪರವಾಗಿ ವೇಗದ ಬೌಲರ್ ಮೊಹಮ್ಮದ್ ಶಮಿ ಐದು ವಿಕೆಟ್, ಬುಮ್ರಾ, ಜಡೇಜಾ ಹಾಗೂ ಅಶ್ವಿನ್ ತಲಾ ಒಂದು ವಿಕೆಟ್ ಪಡೆದು ಆಸ್ಟ್ರೇಲಿಯಾ ತಂಡವನ್ನು ಆಲೌಟ್ ಮಾಡಿದರು.

277 ರನ್ ಗಳ ಗುರಿ ಬೆನ್ನತ್ತಿದ್ದ ಭಾರತ ತಂಡ ಆರಂಭಿಕ ಆಟಗಾರರಾದ ಶುಭ್ಮನ್ ಗಿಲ್ (74) ಹಾಗೂ ರುತುರಾಜ್ ಗಾಯಕ್ವಾಡ್ (71) ರನ್ ಗಳಿಸುವ ಮೂಲಕ 142 ರನ್ ಗಳ ಜೊತೆಯಾಟ ನಡೆಸಿ ತಂಡವನ್ನು ಗೆಲುವಿನತ್ತ ಕೊಂಡೊಯ್ದರು.

ಮಧ್ಯಮ ಕ್ರಮಾಂಕದ ಆಟಗಾರರಾದ ಸೂರ್ಯ ಕುಮಾರ್ ಯಾದವ್ (50) ಹಾಗೂ ನಾಯಕ ಕೆ.ಎಲ್. ರಾಹುಲ್ ಅಜೇಯ (58) ರನ್ ಗಳಿಸುವ ಮೂಲಕ ತಂಡವನ್ನು ಗೆಲುವಿನ ದಡ ಸೇರಿದರು.

ಭಾರತದ ಪರವಾಗಿ ಮಿಂಚಿದ ವೇಗಿ ಮೊಹಮ್ಮದ್ ಶಮಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು, ಮೊದಲ ಪಂದ್ಯವನ್ನು ಗೆಲ್ಲುವ ಮೂಲಕ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತ 1-0 ಮುನ್ನಡೆ ಸಾಧಿಸಿತು ಹಾಗೂ ಮೂರು ಮಾದರಿಯಲ್ಲೂ ನಂ 1 ತಂಡವಾಗಿ ವಿರಾಜಮಾನರಾಗಿದೆ.

Ramesh Babu

Journalist

Recent Posts

ಮಹಾವೀರ ಜಯಂತಿ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…

6 hours ago

ನಾನು ಯಾರ ಜಮೀನು ಕಬಳಿಕೆ‌ ಮಾಡಿಲ್ಲ- ಕಾನೂನಾತ್ಮಕವಾಗಿ ಜಮೀನು ಖರೀದಿ ಮಾಡಿದ್ದೇನೆ- ನನ್ನ ಏಳಿಗೆ ಸಹಿಸದವರಿಂದ ನನ್ನ ಮೇಲೆ ಹಲ್ಲೆ ನಡೆದಿದೆ- ಕಾನೂನು ಹೋರಾಟ ಮಾಡಿ ಗೆಲ್ಲುವೆ- ವಕೀಲ ಪ್ರತಾಪ್

ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…

6 hours ago

KIADB ಭೂಸ್ವಾಧೀನ ವಿರೋಧಿಸಿ ತಾಲೂಕು ಕಚೇರಿಗೆ ಟ್ರ್ಯಾಕ್ಟರ್ ರ್ಯಾಲಿ

ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ರಾಂಪುರ. ನಾರನಹಳ್ಳಿ, ಸೊಣ್ಣೇನಹಳ್ಳಿ  ಗ್ರಾಮಗಳ ವ್ಯಾಪ್ತಿಯ ಸುಮಾರು 2100 ಎಕರೆ ಭೂಮಿಯನ್ನು ಕೆಐಎಡಿಬಿ ಸ್ವಾಧೀನಪಡಿಸಿಕೊಳ್ಳಲು…

14 hours ago

ಹುಟ್ಟಿಸುವವನೂ ಅವನೇ…. ಸಾಯಿಸುವವನೂ ಅವನೇ…

ದೇವರು ಎಷ್ಟೊಂದು ಒಳ್ಳೆಯವನಲ್ಲವೇ........ ಲಕ್ಷಾಂತರ ಜನರನ್ನು ಕೊಲ್ಲಿಸಲು ಅಡಾಲ್ಫ್ ಹಿಟ್ಲರನನ್ನು ಒಂದು ದೇಶದ ಅಧ್ಯಕ್ಷನನ್ನಾಗಿಸಿದ. ಈಗ ಡೊನಾಲ್ಡ್ ಟ್ರಂಪ್ ಅವರನ್ನು…

20 hours ago

ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ-ಎನ್.ಶೋಭಾ

ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…

1 day ago

ಮನೆ ಹೊಸ್ತಿಲಿನಲ್ಲಿ ಪೂಜೆಗಿಟ್ಟಿದ್ದ ಒಣಗಿದ ದಾಸವಾಳ ಹೂ ನುಂಗಿ ಆರುವರೆ ತಿಂಗಳ ಮಗು ದಾರುಣ ಸಾವು

ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…

1 day ago