ಮೊಹಮದ್ ಶಮಿ ಅವರ ಅತ್ಯುತ್ತಮ ಬೌಲಿಂಗ್ ಹಾಗೂ ಬ್ಯಾಟ್ಸ್ಮನಗಳ ಸಂಘಟಿತ ಪ್ರಯತ್ನದಿಂದಾಗಿ ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಸರಣಿಯ ಮೊದಲ ಪಂದ್ಯದಲ್ಲಿ ಕೆ.ಎಲ್. ರಾಹುಲ್ ನಾಯಕತ್ವದ ಭಾರತ ತಂಡ ಐದು ವಿಕೆಟ್ಗಳಿಂದ ಗೆದ್ದು ಬೀಗಿದೆ.
ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಭಾರತ ತಂಡದ ನಾಯಕ ಕೆ.ಎಲ್. ರಾಹುಲ್ ಅವರ ನಂಬಿಕೆಯನ್ನು ಬೌಲಿಂಗ್ ಪಡೆ ಉಳಿಸಿಕೊಂಡರು. ತಂಡದ ಮೊತ್ತ ಐದು ರನ್ ಗಳಿಸುವ ಸಂದರ್ಭದಲ್ಲಿ ಶಮಿ ಅವರ ಬೌಲಿಂಗ್ ನಲ್ಲಿ ಆರಂಭಿಕ ಆಟಗಾರ ಮಿಚೆಲ್ ಮಾಷ್೯ ವಿಕೆಟ್ ಒಪ್ಪಿಸಿದರು.
ನಂತರ ಒಂದಾದ ಡೇವಿಡ್ ವಾರ್ನರ್ (52) ಹಾಗೂ ಸ್ಟೀವನ್ ಸ್ಮಿತ್ (41) ರನ್ ಗಳಿಸುವ ಮೂಲಕ ತಂಡವನ್ನು ಸಂಕಷ್ಟದಿಂದ ಪಾರು ಮಾಡಿದರು.
ಮಧ್ಯಮ ಕ್ರಮಾಂಕದ ಬ್ಯಾಟಿಂಗ್ ವಿಭಾಗದಲ್ಲಿ ಲಬುಶನಗೆ (39), ಗ್ರೀನ್ (31), ಜೋಶ್ ಇಂಗ್ಲಿಷ್ (45), ಸ್ಪಾನಿಶ್(29) ಹಾಗೂ ನಾಯಕ ಪ್ಯಾಟ್ ಕಮ್ಮಿನ್ಸ್(21) ಅವರ ಬ್ಯಾಟಿಂಗ್ ಬಲದಿಂದ 276 ರನ್ ಕಲೆಹಾಕಿತು.
ಭಾರತದ ಪರವಾಗಿ ವೇಗದ ಬೌಲರ್ ಮೊಹಮ್ಮದ್ ಶಮಿ ಐದು ವಿಕೆಟ್, ಬುಮ್ರಾ, ಜಡೇಜಾ ಹಾಗೂ ಅಶ್ವಿನ್ ತಲಾ ಒಂದು ವಿಕೆಟ್ ಪಡೆದು ಆಸ್ಟ್ರೇಲಿಯಾ ತಂಡವನ್ನು ಆಲೌಟ್ ಮಾಡಿದರು.
ಮಧ್ಯಮ ಕ್ರಮಾಂಕದ ಆಟಗಾರರಾದ ಸೂರ್ಯ ಕುಮಾರ್ ಯಾದವ್ (50) ಹಾಗೂ ನಾಯಕ ಕೆ.ಎಲ್. ರಾಹುಲ್ ಅಜೇಯ (58) ರನ್ ಗಳಿಸುವ ಮೂಲಕ ತಂಡವನ್ನು ಗೆಲುವಿನ ದಡ ಸೇರಿದರು.
"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…
ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…
ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…
ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…
ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…
ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್ (MIL)…