ಆಸ್ತಿ ಪರಿಷ್ಕೃತ ಮಾರ್ಗಸೂಚಿ ದರ ಹೆಚ್ಚಳ..!

ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಆಸ್ತಿ ಖರೀದಿ, ಮಾರಾಟ ದರಗಳಲ್ಲಿ ಸರಾಸರಿ ಶೇ 30%ರಷ್ಟು ಹೆಚ್ಚಳ ಮಾಡಲಾಗಿದೆ. ನಿವೇಶನ, ಕಟ್ಟಡ, ಭೂಮಿ ಮತ್ತಿತರ ಸ್ತಿರಾಸ್ತಿಗಳ ಮಾರ್ಗಸೂಚಿ ದರ ಪರಿಷ್ಕರಣೆ ಜಾರಿ ಮಾಡಲಾಗಿದೆ. 5 ವರ್ಷಗಳ ಬಳಿಕ ಮಾರುಕಟ್ಟೆದರ ಮಾರ್ಗಸೂಚಿ ದರಕ್ಕಿಂತ 500ರಿಂದ 2,000 ಪಟ್ಟು ಹೆಚ್ಚಳ ಮಾಡಲಾಗುತ್ತಿದೆ.

ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಭೂಮಿಗಳಿಗೆ ಮಾರ್ಗಸೂಚಿ ದರ 5 ರಿಂದ 10 ಲಕ್ಷ ರೂ. ನಿಗದಿ ಮಾಡಲಾಗಿದೆ. ಮಾರುಕಟ್ಟೆ ದರ 10 ಕೋಟಿ ರೂ.ಗಳಿಗೂ ಅಧಿಕ  ಪ್ರದೇಶಗಳಲ್ಲಿ ಮಾರ್ಗಸೂಚಿ ದರವನ್ನು ಶೇ. 50ರಷ್ಟು ಹೆಚ್ಚಿಸಲಾಗಿದೆ.

ಈ ಹಿಂದೆ 2018ರಲ್ಲಿ ಮಾರ್ಗಸೂಚಿ ದರ ಪರಿಷ್ಕರಣೆಯಾಗಿತ್ತು. ಕಳೆದ ನಾಲ್ಕೂವರೆ ವರ್ಷಗಳಿಂದ ಪರಿಷ್ಕರಣೆಯಾಗಿಲ್ಲ.

ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಕೋಲಾರ ಸೇರಿದಂತೆ ಬೆಂಗಳೂರಿಗೆ ಸಮೀಪದಲ್ಲಿರುವ ಜಿಲ್ಲೆಗಳಲ್ಲೂ ಹೆಚ್ಚಿನ ಪ್ರಮಾಣದಲ್ಲಿ ಏರಿಕೆಯಾಗಿದೆ.

ಗ್ರಾಮೀಣಪ್ರದೇಶದಲ್ಲಿ ಗ್ರಾಮಠಾಣಾ ವ್ಯಾಪ್ತಿಯಲ್ಲಿನ ಅನುಮೋದಿತ ನಿವೇಶನಗಳ ಮಾರ್ಗಸೂಚಿ ದರದಲ್ಲೂ ಏರಿಕೆ ಮಾಡಲಾಗಿದೆ.

ಕೃಷಿ, ಕೃಷಿಯೇತರ ಜಮೀನುಗಳ ಮಾರ್ಗಸೂಚಿ ದರಗಳಲ್ಲೂ ಸಹ ಭಾರಿ ಬದಲಾವಣೆ ಆಗಿದೆ.

Leave a Reply

Your email address will not be published. Required fields are marked *