ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಆಸ್ತಿ ಖರೀದಿ, ಮಾರಾಟ ದರಗಳಲ್ಲಿ ಸರಾಸರಿ ಶೇ 30%ರಷ್ಟು ಹೆಚ್ಚಳ ಮಾಡಲಾಗಿದೆ. ನಿವೇಶನ, ಕಟ್ಟಡ, ಭೂಮಿ ಮತ್ತಿತರ ಸ್ತಿರಾಸ್ತಿಗಳ ಮಾರ್ಗಸೂಚಿ ದರ ಪರಿಷ್ಕರಣೆ ಜಾರಿ ಮಾಡಲಾಗಿದೆ. 5 ವರ್ಷಗಳ ಬಳಿಕ ಮಾರುಕಟ್ಟೆದರ ಮಾರ್ಗಸೂಚಿ ದರಕ್ಕಿಂತ 500ರಿಂದ 2,000 ಪಟ್ಟು ಹೆಚ್ಚಳ ಮಾಡಲಾಗುತ್ತಿದೆ.
ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಭೂಮಿಗಳಿಗೆ ಮಾರ್ಗಸೂಚಿ ದರ 5 ರಿಂದ 10 ಲಕ್ಷ ರೂ. ನಿಗದಿ ಮಾಡಲಾಗಿದೆ. ಮಾರುಕಟ್ಟೆ ದರ 10 ಕೋಟಿ ರೂ.ಗಳಿಗೂ ಅಧಿಕ ಪ್ರದೇಶಗಳಲ್ಲಿ ಮಾರ್ಗಸೂಚಿ ದರವನ್ನು ಶೇ. 50ರಷ್ಟು ಹೆಚ್ಚಿಸಲಾಗಿದೆ.
ಈ ಹಿಂದೆ 2018ರಲ್ಲಿ ಮಾರ್ಗಸೂಚಿ ದರ ಪರಿಷ್ಕರಣೆಯಾಗಿತ್ತು. ಕಳೆದ ನಾಲ್ಕೂವರೆ ವರ್ಷಗಳಿಂದ ಪರಿಷ್ಕರಣೆಯಾಗಿಲ್ಲ.
ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಕೋಲಾರ ಸೇರಿದಂತೆ ಬೆಂಗಳೂರಿಗೆ ಸಮೀಪದಲ್ಲಿರುವ ಜಿಲ್ಲೆಗಳಲ್ಲೂ ಹೆಚ್ಚಿನ ಪ್ರಮಾಣದಲ್ಲಿ ಏರಿಕೆಯಾಗಿದೆ.
ಗ್ರಾಮೀಣಪ್ರದೇಶದಲ್ಲಿ ಗ್ರಾಮಠಾಣಾ ವ್ಯಾಪ್ತಿಯಲ್ಲಿನ ಅನುಮೋದಿತ ನಿವೇಶನಗಳ ಮಾರ್ಗಸೂಚಿ ದರದಲ್ಲೂ ಏರಿಕೆ ಮಾಡಲಾಗಿದೆ.
ಕೃಷಿ, ಕೃಷಿಯೇತರ ಜಮೀನುಗಳ ಮಾರ್ಗಸೂಚಿ ದರಗಳಲ್ಲೂ ಸಹ ಭಾರಿ ಬದಲಾವಣೆ ಆಗಿದೆ.
ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…
ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…