ಆಸ್ತಿ ವಿಚಾರವಾಗಿ ವೃದ್ಧ ದಂಪತಿ ಕೊಲೆಯಾಗಿರುವ ಅಮಾನವೀಯ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಸೂಲಿಬೆಲೆಯಲ್ಲಿ ಘಟನೆ ಶನಿವಾರ ಸಂಜೆ ನಡೆದಿದೆ. ತಡವಾಗಿ ನಿನ್ನೆ ಸಂಜೆ ಬೆಳಕಿಗೆ ಬಂದಿದೆ.
ರಾಮಕೃಷ್ಣಪ್ಪ (70), ಮುನಿರಾಮಕ್ಕ (65) ಕೊಲೆಗೀಡಾದ ವೃದ್ಧ ದಂಪತಿ.
ಮಗ ನರಸಿಂಹ ರಾಡ್ ನಿಂದ ಹೊಡೆದು ವೃದ್ಧ ದಂಪತಿಯನ್ನು ಕೊಲೆ ಮಾಡಿರುವ ಆರೋಪ ಕೇಳಿಬರುತ್ತಿದೆ.
ಸದ್ಯ ಸೂಲಿಬೆಲೆ ಪೊಲೀಸರು ಮಗ ನರಸಿಂಹನನ್ನ ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಿದ್ದಾರೆ.
ಮಗ ನರಸಿಂಹ ಮದುವೆಯಾದಗಲಿಂದಲೂ ತಂದೆ ತಾಯಿ ಬಿಟ್ಟು ಪ್ರತ್ಯೇಕವಾಗಿ ವಾಸವಾಗಿದ್ದ. ವೃದ್ಧ ದಂಪತಿಗೆ ಐದು ಮಂದಿ ಮಕ್ಕಳು ಅದರಲ್ಲಿ ನಾಲ್ಕು ಮಂದಿ ಹೆಣ್ಣು ಮಕ್ಕಳು, ಒಬ್ಬನೆ ಗಂಡು ಮಗ. ಐದು ಮಂದಿ ಮಕ್ಕಳಿಗೂ ಮದುವೆ ಮಾಡಿರುವ ವೃದ್ಧ ದಂಪತಿ. ಮಗ ತಂದೆ ತಾಯಿಯನ್ನ ಹೊರಗಿಟ್ಟಿದ್ದ ಎನ್ನಲಾಗಿದೆ.
ದಂಪತಿ ಹೆಣ್ಣು ಮಕ್ಕಳಿಗೆ ಇರುವ ಆಸ್ತಿಯಲ್ಲಿ ಪಾಲು ಕೊಡಲು ಮುಂದಾಗಿದಕ್ಕೆ ಪ್ರತಿದಿನ ಮಗ ನರಸಿಂಹ ತನ್ನ ತಂದೆ ತಾಯಿ ಬಳಿ ಜಗಳವಾಡುತ್ತಿದ್ದ, ಶನಿವಾರದಂದು ಜಗಳ ತಾರಕಕ್ಕೇರಿ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ.
ಹೆತ್ತ ತಂದೆ ತಾಯಿಯನ್ನೇ ಕೊಲೆ ಮಾಡಿ ತಲೆ ಮರೆಸಿಕೊಳ್ಳದೇ ತನಗೆ ಏನು ತಿಳಿಯದ ಹಾಗೆ ಮನೆಯಲ್ಲಿಯೇ ಇದ್ದ ಎನ್ನಲಾಗಿದೆ.
ವೃದ್ಧ ದಂಪತಿಯು ಪ್ರತಿ ದಿನ ತನ್ನ ಹೆಣ್ಣುಮಕ್ಕಳಿಗೆ ಕರೆ ಮಾಡಿ ಮಾತಾಡುತ್ತಿದ್ದರು, ಅದರೆ ಶನಿವಾರದಿಂದ ಕರೆ ಮಾಡಿರಲಿಲ್ಲ , ಹೀಗಾಗಿ ಅನುಮಾನಗೊಂಡಿದ್ದ ಹೆಣ್ಣುಮಕ್ಕಳು. ಕಿರಿ ಮಗಳು ಮನೆಗೆ ಭೇಟಿ ನೀಡಿದಾಗ ಮನೆ ಬಾಗಿಲಿಗೆ ಬೀಗ ಹಾಕಲಾಗಿತ್ತು , ತಕ್ಷಣ ತಂದೆ ತಾಯಿಗೆ ಕರೆ ಮಾಡಿದ್ದಾರೆ. ಆದರೆ ಇಬ್ಬರ ನಂಬರ್ ಸ್ವಿಚ್ ಆಫ್ ಅಗಿತ್ತು.
ಆತಂಕಗೊಂಡು ಸುಲಿಬೆಲೆಯಲ್ಲಿ ಇರುವ ತನ್ನ ಅಕ್ಕನ ಮನೆಗೆ ಹೋಗಿ ಮರಳಿ ತಂದೆ ತಾಯಿ ಮನೆಯ ಬಳಿ ಬಂದಿದ್ದರು.
ಈ ವೇಳೆ ಮನೆಯ ಹೊರಗಿನ ಬಾತ್ ರೂಂ ಬೀಗ ಯಾರೋ ತೆರೆದಿರುವುದು ಗಮನಿಸಿದ್ದಾರೆ. ತಕ್ಷಣ ಮನೆಯ ಬಾಗಿಲನ್ನು ಹೊಡೆದು ಒಳಗೆ ಹೋಗಿದ್ದಾರೆ. ಬಾಗಿಲ ಬಳಿಯೇ ತಂದೆಯ ಮೃತ ದೇಹ ಮತ್ತು ಅಡುಗೆ ಮನೆಯ ಬಳಿ ತಾಯಿ ಮೃತ ದೇಹ ನೋಡಿ ಶಾಕ್ ಆಗಿದ್ದಾರೆ.
ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಸೂಲಿಬೆಲೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…
ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…
ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…
ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…
ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್ (MIL)…
ಸ್ಟಿಂಗ್ ಆಪರೇಷನ್ ಮಾಡಿಸುವುದಕ್ಕೆ ಮುಖ್ಯಮಂತ್ರಿಗಳಿಗೆ ತಲೆ ಕೆಟ್ಟಿದೆಯೇ? ಪದೇಪದೇ ಈ ವಿಚಾರದಲ್ಲಿ ಮುಖ್ಯಮಂತ್ರಿಗಳನ್ನು ಎಳೆದು ತರುವ ಎಚ್.ಡಿ. ಕುಮಾರಸ್ವಾಮಿ ಅವರಿಗೆ…