ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲ್ಲೂಕಿನ ಜಕ್ಕೇರುಮಡಗು ತಾಂಡಾದಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಚಂದವ್ವ (55) ಎಂದು ಗುರುತಿಸಲಾಗಿದೆ. ಈ ಕೃತ್ಯವನ್ನು ಚಂದವ್ವ ಅವರ ಪುತ್ರ ಕುಮಾರ ಎಸಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಪಿತ್ರಾರ್ಜಿತವಾಗಿ ದೊರೆತ ಮೂರು ಎಕರೆ ಭೂಮಿಯನ್ನು ಪಾಲು ಮಾಡುವಂತೆ ಕುಮಾರ ತಾಯಿಯ ಮೇಲೆ ನಿರಂತರವಾಗಿ ಒತ್ತಾಯಿಸುತ್ತಿದ್ದ ಎನ್ನಲಾಗಿದೆ. ಅಣ್ಣ-ತಮ್ಮಂದಿರಿಗೆ ಪಾಲು ಮಾಡಿ, ನನ್ನ ಪಾಲು ನನಗೆ ನೀಡಬೇಕು ಎಂದು ಕುಮಾರ ಆಗ್ರಹಿಸಿದ್ದಾನೆ. ಆದರೆ, ನಾನು ಬದುಕಿರುವವರೆಗೆ ಆಸ್ತಿ ಪಾಲು ಮಾಡುವುದಿಲ್ಲ ಎಂದು ಚಂದವ್ವ ಹಠ ಹಿಡಿದಿದ್ದಾಳೆ.
ಇದೇ ಕಾರಣದಿಂದ ಕೋಪಗೊಂಡ ಕುಮಾರ ಮದ್ಯ ಸೇವಿಸಿ, ನಶೆಯಲ್ಲಿದ್ದ ವೇಳೆ ಮಲಗಿದ್ದ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಕೊಲೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾನೆ.
ಈ ಕುರಿತು ಮುದಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯ ಪತ್ತೆಗೆ ಪೊಲೀಸರು ಜಾಲ ಬೀಸಿದ್ದಾರೆ.
ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…
ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…
ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…
ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…
ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…
2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…