ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು ಹೀಗಿವೆ;
• ರಾಜ್ಯದಲ್ಲಿ ಅನರ್ಹ ಬಿಪಿಎಲ್ ಕಾರ್ಡ್ ಗಳನ್ನು ರದ್ದುಪಡಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಆದರೆ ಅರ್ಹ ಬಿಪಿಎಲ್ ಕಾರ್ಡುದಾರರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಅರ್ಹರು ಯಾರಾದರೂ ಬಿಟ್ಟು ಹೋಗಿದ್ದರೆ ಅವರಿಗೆ ಬಿಪಿಎಲ್ ಕಾರ್ಡ್ ನೀಡಲು ತಕ್ಷಣವೇ ಕ್ರಮ ಕೈಗೊಳ್ಳಬೇಕು.
• ಈಗಾಗಲೇ ಗುರುತಿಸಲಾಗಿರುವ ಅನರ್ಹ ಬಿಪಿಎಲ್ ಪಡಿತರ ಚೀಟಿದಾರರ ಪೈಕಿ 3,65,614 ಪಡಿತರ ಚೀಟಿಗಳನ್ನು ರದ್ದು/ವರ್ಗ ಬದಲಾವಣೆ ಮಾಡಲಾಗಿದೆ.
• ಅನ್ನಭಾಗ್ಯ ಯೋಜನೆಯಡಿ ಅಕ್ಕಿಯ ಜೊತೆಗೆ ಪೌಷ್ಟಿಕ ಧಾನ್ಯ, ಅಗತ್ಯ ಆಹಾರ ಸಾಮಾಗ್ರಿಗಳನ್ನು ಒಳಗೊಂಡ ಕಿಟ್ ಒದಗಿಸುವ ಕುರಿತು ಪರಿಶೀಲನೆ ನಡೆಸಲಾಗುವುದು. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಪ್ರಸ್ತಾವನೆ ಸಲ್ಲಿಸಬೇಕು.
• ಪರಿಶಿಷ್ಟ ಜಾತಿ ಮತ್ತು ಪಂಗಡದ ಸಮುದಾಯದವರಿಗೆ ಹೊಸ ನ್ಯಾಯ ಬೆಲೆ ಅಂಗಡಿಗಳನ್ನು ಆದ್ಯತೆ ಮೇಲೆ ನೀಡಲು ಕ್ರಮ ಕೈಗೊಳ್ಳಬೇಕು.
• ಆಹಾರ ಧಾನ್ಯಗಳನ್ನು ಸರಬರಾಜು ಮಾಡುತ್ತಿರುವ ವಾಹನಗಳಿಗೆ ಜಿಪಿಎಸ್ ಟ್ರಾಕರ್‌ಗಳನ್ನು ಅಳವಡಿಸಬೇಕು. ರಾಜ್ಯದಲ್ಲಿರುವ ಎಲ್ಲಾ ಗೋದಾಮುಗಳಲ್ಲಿ ಸಿಸಿಟಿವಿ ಅಳವಡಿಸಲು ಕ್ರಮ ಕೈಗೊಳ್ಳಬೇಕು.
• ಕನಿಷ್ಠ ಬೆಂಬಲ ಯೋಜನೆಯಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಹಾಗೂ ಸ್ವಸಹಾಯ ಸಂಘಗಳ ಸಹಯೋಗದೊಂದಿಗೆ ಆಹಾರಧಾನ್ಯಗಳ ಖರೀದಿ ಪ್ರಕ್ರಿಯೆ ನಡೆಸಬೇಕು. ಇದೇ ಪ್ರಥಮ ಬಾರಿಗೆ 0.29 ಲಕ್ಷ ಮೆಟ್ರಿಕ್ ಟನ್ ಕಿರು ಸಿರಿಧಾನ್ಯಗಳನ್ನು ಖರೀದಿಸಲಾಗುತ್ತಿದೆ.
• ಆಹಾರ ಮತ್ತು ನಾಗರಿಕ ಸರಬರಾಜು ನಿಗಮದಲ್ಲಿ ಖಾಲಿಯಿರುವ ಅಗತ್ಯ ಸಿಬ್ಬಂದಿಗಳ ನೇಮಕಾತಿಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು.
ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…
ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…
ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಎಲೆಕ್ಷನ್: ಗೆದ್ದ ಅಭ್ಯರ್ಥಿ ಪಡೆದ ಮತ ಎಷ್ಟು ಗೊತ್ತಾ...? ವಾರ್ಡ್ ನಂ.: 1 ಹೆಸರು: ಶ್ವೇತಾ…
ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಮತದಾನ ಡಿ.21ರಂದು ನಡೆದಿತ್ತು. ಇಂದು (ಡಿ.24)ರಂದು ಮತ ಎಣಿಕೆ ನಡೆದಿದ್ದು, ಬಿಜೆಪಿ 14, ಕಾಂಗ್ರೆಸ್…
ಮರ್ಯಾದಾ ಹತ್ಯೆ........ ಕ್ಷಮಿಸಿ ಬಿಡು ಮಾನ್ಯ ಎಂಬ ಹುಬ್ಬಳ್ಳಿ ಹತ್ತಿರದ ನನ್ನ ಗರ್ಭಿಣಿ ತಂಗಿಯೇ..... ನಮ್ಮದೇ ದೇಶದ, ನಮ್ಮದೇ…
ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…