ಆಹಾರ ಭದ್ರತಾ ಕಾಯ್ದೆಯನ್ನು ಜಾರಿಗೆ ತಂದ ಮೊದಲ ರಾಜ್ಯ ಕರ್ನಾಟಕ- ಆಹಾರ ಸಚಿವ ಕೆ.ಎಚ್ ಮುನಿಯಪ್ಪ

ತಿನ್ನುವ ಹಕ್ಕಿದೆ, ಬಿಸಾಡುವ ಹಕ್ಕಿಲ್ಲ…….ಅಕ್ಟೋಬರ್-16 ಅನ್ನದ ಋಣ ತೀರಿಸುವ ಒಂದು ಸುವರ್ಣಾವಕಾಶ…..ಪ್ರತಿ ವರ್ಷ ಅಕ್ಟೋಬರ್ 16 ರಂದು ವಿಶ್ವದಾದ್ಯಂತ “ವಿಶ್ವ ಆಹಾರ ದಿನ”ವನ್ನು ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ ಎಂದು ಆಹಾರ ಸಚಿವ ಕೆ.ಎಚ್ ಮುನಿಯಪ್ಪ ಹೇಳಿದರು.

1979ರಲ್ಲಿ ಸಂಯುಕ್ತ ರಾಷ್ಟ್ರಗಳ ಆಹಾರ ಮತ್ತು ಕೃಷಿ ಸಂಸ್ಥೆ (FAO) ಪ್ರಾರಂಭವಾಯಿತು. ಈ ಸಂಸ್ಥೆಯ 1945ರ ಅಕ್ಟೋಬರ್-16ರಂದು ಸಂಸ್ಥೆ ಸ್ಥಾಪಿತವಾದ ದಿನದ ಸವಿನೆನಪಿಗಾಗಿ ವಿಶ್ವ ಆಹಾರ ದಿನಾಚರಣೆಯನ್ನು ಆಚರಿಸಲಾಗುತ್ತಿದೆ ಎಂದರು.

ವಿಶ್ವ ಆಹಾರ ದಿನಾಚರಣೆಯ ಪ್ರಮುಖ ಉದ್ದೇಶ
ಎಲ್ಲಾರಿಗೂ ಆಹಾರದ ಹಕ್ಕು, ಹಸಿವುಮುಕ್ತ, ಪೌಷ್ಠಿಕಯುಕ್ತ ಆಹಾರ ವಿತರಣೆ, ಸುಸ್ಥಿರ ಕೃಷಿ ಅಭಿವೃದ್ಧಿ ಮತ್ತು ಆಹಾರ ಭದ್ರತೆ ಕುರಿತು ಜಾಗೃತಿ ಮೂಡಿಸುವುದು ಎಂದು ಹೇಳಿದರು.

ಹಸಿವಿನಿಂದ ಪ್ರತಿ ದಿನ‌ ವಿಶ್ವದಲ್ಲಿ 19700 ಜನ ಸಾಯುತ್ತಿದ್ದಾರೆ ಅಂದರೆ ಪ್ರತಿ 4 ಸೆಕೆಂಡಿಗೆ ಒಬ್ಬರು ಎಂದು ಎರಡು ವರ್ಷಗಳ ಹಿಂದೆ ನ್ಯೂಯಾರ್ಕ್ ನ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಸೇರಿದ್ದ 75 ದೇಶಗಳ 250 ಸಂಘಟನೆಗಳು ವರದಿ ಮಂಡಿಸಿವೆ ಎಂದು ತಿಳಿಸಿದರು.

ಭಾರತದಲ್ಲಿ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಊಟದ ಎಲೆಗಳಲ್ಲಿ ವ್ಯರ್ಥವಾಗುವ‌ ಆಹಾರ ಪ್ರಮಾಣ ಸುಮಾರು ಶೇಕಡಾ 25%.. ಭಾರತ ದೇಶದ ಕರ್ನಾಟಕಕ್ಕೆ ಸೀಮಿತವಾಗಿ ಹೇಳುವುದಾದರೆ….ಮುಖ್ಯವಾಗಿ ಮದುವೆ ಮುಂತಾದ ಸಾರ್ವಜನಿಕ ಸಮಾರಂಭಗಳಲ್ಲಿ ಆಹಾರ ಯಥೇಚ್ಛವಾಗಿ ವ್ಯರ್ಥವಾಗುವುದು ಅತಿಹೆಚ್ಚು ಆಹಾರವನ್ನು ದುರುಪಯೋಗ ಪಡಿಸಿಕೊಳ್ಳುವುದನ್ನು ಸ್ವತಃ ಅನುಭವದಿಂದ ಗಮನಿಸಿದ್ದೇನೆ ಎಂದು ಹೇಳಿದರು.

ರೈತರು ಬಿತ್ತನೆ ಮಾಡಿ, ಅದು ಬೆಳೆದು ಫಸಲಾಗಿ ಕಟಾವು ಮಾಡಿ, ಸಂಗ್ರಹಿಸಿ ಸಾಗಾಣಿಕೆ ಮಾಡಿ, ಮಾರಾಟ ಮಾಡಿ ಅದು ಮನೆ ಮನೆಗೆ ಸೇರಿ ಆಹಾರವಾಗಿ ನಮ್ಮ ಎಲೆ ಅಥವಾ ತಟ್ಟೆಗೆ ಸೇರುವ ವೇಳೆಗೆ ಸಾಕಷ್ಟು ಸಹಜವಾಗಿ ಮತ್ತು ಅನಿವಾರ್ಯವಾಗಿ ನಷ್ಟವಾಗಿರುತ್ತದೆ. ಮತ್ತೆ ಆಹಾರವನ್ನು ನಾವು ಬಡಿಸಿಕೊಂಡು ತಟ್ಟೆಯಲ್ಲಿ ಶೇಕಡಾ 25% ವ್ಯರ್ಥ ಮಾಡಿದರೆ ಒಟ್ಟು ಆಹಾರ ಬೆಳೆಗಳ ದುರುಪಯೋಗ ಎಷ್ಟಾಗಬಹುದು ಊಹಿಸಿ ಎಂದು ತಿಳಿಸಿದರು.

ನಮ್ಮ ಸರ್ಕಾರ ಪಂಚ ಗ್ಯಾರಂಟಿ ಯೋಜನೆಯ ಮೂಲಕ ಸಮ ಸಮಾಜ ನಿರ್ಮಾಣದ ಆಶಯ ಹೊಂದಿದೆ. 1 ಲಕ್ಷ ಕೋಟಿಗೂ ಹೆಚ್ಚು ಅನುದಾನವನ್ನು ಕಳೆದ ಎರಡೂವರೆ ವರ್ಷಗಳಿಂದ ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನಕ್ಕೆ ವ್ಯಯ ಮಾಡಲಾಗಿದೆ ಎಂದು ಹೇಳಿದರು.

ಆಹಾರ ಭದ್ರತಾ ಕಾಯ್ದೆಯನ್ನು ಜಾರಿಗೆ ತಂದ ಮೊದಲ ರಾಜ್ಯ ಕರ್ನಾಟಕ:-

ಭಾರತ ಸರ್ಕಾರ 2013ರಲ್ಲಿ ಜಾರಿಗೆ ತಂದ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯನ್ನು ಮೊಟ್ಟಮೊದಲು ಜಾರಿಗೆ ತಂದ ರಾಜ್ಯ ಕರ್ನಾಟಕ. ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ಧರಾಮಯ್ಯರವರು ಮೊದಲ ಅವಧಿ ಮತ್ತು ಎರಡನೇ ಅವಧಿಯಲ್ಲಿ ಅನ್ನಭಾಗ್ಯ ಯೋಜನೆಗೆ ಅತ್ಯಂತ ಪ್ರಾಮುಖ್ಯತೆ ಕೊಡುವ ಮೂಲಕ ಕರ್ನಾಟಕ ರಾಜ್ಯ ಹಸಿವುಮುಕ್ತ ಕರ್ನಾಟಕವಾಗಿಸಿರುವುದು ನಮ್ಮ ಸರ್ಕಾರದ ಹೆಮ್ಮೆಯ ವಿಷಯವಾಗಿದೆ ಎಂದು ಹೇಳಿದರು.

ಅನ್ನಭಾಗ್ಯ ಯೋಜನೆಯಡಿ ರಾಜ್ಯದಲ್ಲಿ 10,60,800 ಅಂತ್ಯೋದಯ ಅನ್ನಯೋಜನೆ ಮತ್ತು 1,26,00,959 ಆದ್ಯತಾ ಪಡಿತರ ಚೀಟಿಗಳು ಒಟ್ಟು 4,48,29,135 ಫಲಾನುಭವಿಗಳಿಗೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ಮತ್ತು ರಾಜ್ಯ ಸರ್ಕಾರದ ಹೆಚ್ಚುವರಿ 5 ಕೆ.ಜಿ. ಸೇರಿ ಒಟ್ಟು 10 ಕೆ.ಜಿ. ಅಕ್ಕಿ ಪ್ರತಿ ಸದಸ್ಯರಿಗೆ ಉಚಿತವಾಗಿ ವಿತರಿಸುವ ಮೂಲಕ ಹಸಿದ ಹೊಟ್ಟೆಗೆ ಅನ್ನ ನೀಡುವ ಮಹತ್ವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದರು.

*ಅನ್ನ ಸುವಿಧಾ* :-

2024-25ನೇ ಸಾಲಿನ ಆಯವ್ಯಯ ಘೋಷಣೆಯಂತೆ ಅನ್ನಸುವಿಧಾ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ. 75 ವರ್ಷ ಮೇಲ್ಪಟ್ಟ ಫಲಾನುಭವಿಗಳಿಗೆ ಪಡಿತರ ವಿತರಣೆಯನ್ನು ಮನೆಯ ಬಾಗಿಲಿಗೆ ತಲುಪಿಸಲಾಗುತ್ತಿದೆ ಎಂದು ಹೇಳಿದರು.

*ಇಂದಿರಾ ಪೌಷ್ಠಿಕ ಆಹಾರ ಕಿಟ್:*

ಅಕ್ಕಿಗೆ ಪರ್ಯಾಯವಾಗಿ ಧಾನ್ಯಗಳು, ಕಾಳುಗಳು, ಎಣ್ಣೆ, ಸಕ್ಕರೆ ಹಾಗೂ ಪೋಷಕಾಂಶಯುತ ವಸ್ತುಗಳನ್ನು ಒಳಗೊಂಡ ವಿಶೇಷ ಕಿಟ್.ಈ ಯೋಜನೆಯು ಬಡ ಕುಟುಂಬಗಳ ಪೋಷಣಾ ಸ್ಥಿತಿಯನ್ನು ಸುಧಾರಿಸಲು ಮತ್ತು ಆರೋಗ್ಯಕರ ಸಮಾಜ ನಿರ್ಮಾಣದತ್ತ ಸರ್ಕಾರದ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ ಎಂದು ತಿಳಿಸಿದರು.

ರಾಷ್ಟ್ರಪಿತ ಮಹಾತ್ಮ ಗಾಂಧಿಜಿಯವರು ಆಹಾರವು ದೇವರ ಅನುಗ್ರಹ ಅದನ್ನು ವ್ಯರ್ಥ ಮಾಡುವುದು ಪಾಪ ಎಂದು ಹೇಳಿ ಆಹಾರ ವ್ಯರ್ಥ ಮಾಡುವುದನ್ನು ವಿರೋಧಿಸಿದರು. ಅನ್ನವನ್ನು ಗೌರವದಿಂದ ಸೇವಿಸಬೇಕು, ಏಕೆಂದರೆ ಅದು ರೈತರ ಶ್ರಮದ ಫಲ ಮತ್ತು ಪ್ರಕೃತಿ ವರ. ಈ ಮಾತು ಆಹಾರದ ನ್ಯಾಯಸಮ್ಮತ ಹಂಚಿಕೆ ಮತ್ತು ಸಮಾನತೆಯ ತತ್ವವನ್ನು ಸಾರುತ್ತದೆ ಎಂದರು.

ಭಾರತದಲ್ಲಿ 25% ವ್ಯರ್ಥ ಎಂದರೆ ಸುಮಾರು 35 ಕೋಟಿ ಜನಸಂಖ್ಯೆಯ ಆಹಾರವನ್ನು ನಾವು ಕಬಳಿಸಿದಂತೆ ಆಗುತ್ತದೆ ಮತ್ತು ಆಹಾರ ಬೆಳೆಯಲು ಉಪಯೋಗಿಸಿದ ದೇಶದ ಪ್ರಾಕೃತಿಕ ಸಂಪನ್ಮೂಲಗಳನ್ನು ದುರುಪಯೋಗ ಪಡಿಸಿಕೊಂಡು ವ್ಯವಸಾಯದ ಮೇಲೆ ಅನಾವಶ್ಯಕವಾಗಿ ಒತ್ತಡ ಹೇರಿದಂತೆ ಹಾಗೂ ನಮ್ಮ ರೈತರ ಶ್ರಮಕ್ಕೆ ಅಗೌರವ ತೋರಿಸಿದಂತೆ ಆಗುತ್ತದೆ ಎಂದು ಹೇಳಿದರು.

ಕೇಂದ್ರ ಮತ್ತು ರಾಜ್ಯದಲ್ಲಿ ಕಾಂಗ್ರೆಸ್‌ ನೇತೃತ್ವದ ಸರ್ಕಾರಗಳು ಸಾಮಾಜಿಕ ನ್ಯಾಯ ಪರವಾದ ಯೋಜನೆಗಳನ್ನು ಜಾರಿಗೆ ತಂದಿರುತ್ತದೆ. ಬಡವರ ಹಸಿವನ್ನು ನೀಗಿಸುವ ಹಿನ್ನೆಲೆಯಲ್ಲಿ ಆಹಾರ ಭದ್ರತಾ ಕಾಯ್ದೆ ಮತ್ತು ಅನ್ನಭಾಗ್ಯ ಯೋಜನೆಗಳನ್ನು ಜಾರಿಗೆ ತಂದಿರುವುದನ್ನು ತಾವೆಲ್ಲರು ಅರ್ಥ ಮಾಡಿಕೊಳ್ಳಬೇಕು ಎಂದರು.

Leave a Reply

Your email address will not be published. Required fields are marked *

error: Content is protected !!