ರಾಜ್ಯದಲ್ಲಿರುವ ಮಹಿಳೆಯರ ಆರ್ಥಿಕ ಸಬಲೀಕರಣದ ಉದ್ದೇಶದಿಂದ, ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ರೂ.2000 ರೂಪಾಯಿಗಳನ್ನು ನೀಡುವ ಗೃಹಲಕ್ಷ್ಮಿ ಯೋಜನೆಯನ್ನು ಕರ್ನಾಟಕ ಸರ್ಕಾರ ಜಾರಿಗೆ ತಂದಿದೆ. ಈಗಾಗಲೇ ಯೋಜನೆಯಡಿ ನೋಂದಣಿಯಾಗಿರುವ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆ ಮಾಡುವ ನಿಟ್ಟಿನಲ್ಲಿ 2023ರ ಆಗಸ್ಟ್ 30 ಬುಧವಾರ ಬೆಳಿಗ್ಗೆ 11:30ಕ್ಕೆ ಮೈಸೂರಿನಲ್ಲಿ ಗೃಹಲಕ್ಷ್ಮಿ ಯೋಜನೆಯನ್ನು ಮುಖ್ಯಮಂತ್ರಿ, ಉಪ ಮುಖ್ಯ ಮಂತ್ರಿ ಹಾಗೂ ಸಚಿವರುಗಳು ಲೋಕಾರ್ಪಣೆಗೊಳಿಸಲಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ 101 ಗ್ರಾಮ ಪಂಚಾಯಿತಿ ಕೇಂದ್ರಗಳಲ್ಲಿ, ನಗರ ವ್ಯಾಪ್ತಿಯ 42 ಸ್ಥಳಗಳಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ನೋಡೆಲ್ ಅಧಿಕಾರಿಗಳನ್ನು ನೇಮಿಸಲಾಗಿದೆ.
ಕಾರ್ಯಕ್ರಮ ವೀಕ್ಷಣೆ ಮಾಡಲು ಟಿ.ವಿ/ಎಲ್.ಇ.ಡಿ ಪರದೆ ವ್ಯವಸ್ಥೆಗೊಳಿಸಲಾಗುತ್ತದೆ. ಫಲಾನುಭವಿಗಳು, ಚುನಾಯಿತ ಜನ ಪ್ರತಿನಿಧಿಗಳು, ಸ್ಥಳೀಯ ಮುಖಂಡರು ಹಾಗೂ ಸಾರ್ವಜನಿಕರು ಆಯಾ ಕ್ಷೇತ್ರ ವ್ಯಾಪ್ತಿಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಜಿಲ್ಲಾಧಿಕಾರಿ ಡಾ.ಶಿವಶಂಕರ ಎನ್ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.
ವಿಶೇಷ ಸೂಚನೆ:- ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆ ಮಾಡುವ ಸಂದೇಶ ಬರುವುದರಿಂದ ನೊಂದಾಯಿತ ಫಲಾನುಭವಿಗಳು ಬ್ಯಾಂಕ್ ಖಾತೆಯೊಂದಿಗೆ ಜೋಡಣೆ ಮಾಡಿಕೊಂಡಿರುವ ಮೊಬೈಲ್ ಫೋನ್‌ಗಳೊಂದಿಗೆ ಕಾರ್ಯಕ್ರಮಕ್ಕೆ ಹಾಜರಾಗುವುದು.
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…