ಆ.31ರ ಭಾನುವಾರದಂದು ತಾಲೂಕಿನ ಹಲವು ಗ್ರಾಮಗಳಲ್ಲಿ ವಿದ್ಯುತ್ ಪೂರೈಕೆ ಸ್ಥಗಿತ

ದೊಡ್ಡಬಳ್ಳಾಪುರ ನಗರ ಸೇರಿದಂತೆ ತಾಲ್ಲೂಕಿನ ಹಲವೆಡೆ ಆಗಸ್ಟ್​ 31 ರಂದು ಭಾನುವಾರ ವಿದ್ಯುತ್​ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪುರ ಬೆಸ್ಕಾಂ ಅಭಿಯಂತರರು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಆಗಸ್ಟ್​ 31 ರಂದು 220/66/11ಕೆವಿ ಕೆಐಎಡಿಬಿ ಹಾಗು 66/11ಕೆವಿ ಅಪೆರಲ್ ಪಾರ್ಕ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ಈ ಉಪಕೇಂದ್ರದಲ್ಲಿರುವ ಎಲ್ಲಾ ವಿದ್ಯುತ್ ಮಾರ್ಗಗಳಲ್ಲಿ ಬೆಳಿಗ್ಗೆ 10:00 ಗಂಟೆ ಇಂದ ಸಂಜೆ 6:00 ಗಂಟೆವರೆಗೆ ವಿದ್ಯುತ್ ವ್ಯತ್ಯಯವಿರುತ್ತದೆ. ಆದ್ದರಿಂದ ಗ್ರಾಹಕರು ಸಹಕರಿಸ ಬೇಕಾಗಿ ಕೋರಲಾಗಿದೆ.

ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು:

ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ಗ್ರಾಮಗಳು, ಕೆಐಎಡಿಬಿ, ಅಪೆರಲ್ ಪಾರ್ಕ್ ಹಂತ 1, 2 & 3, ಕೆಎಸ್‌ಎಸ್‌ಐಡಿಸಿ ಕೈಗಾರಿಕ ಪ್ರದೇಶಗಳು, ಮಜರಾಹೊಸಹಳ್ಳಿ ಗ್ರಾಮ ಪಂಚಹಾಯಿತಿಯ ಗ್ರಾಮಗಳು, ದೊಡ್ಡತುಮಕೂರು ಗ್ರಾಮ ಪಂಚಾಯಿತಿಯ ಗ್ರಾಮಗಳು, ಅರಳುಮಲ್ಲಿಗೆ ಗ್ರಾಮ ಪಂಚಾಯಿತಿಯ ಗ್ರಾಮಗಳು, ದೊಡ್ಡಬಳ್ಳಾಪುರ ನಗರದ ಭುವನೇಶ್ವರಿನಗರ, ತೇರಿನ ಬೀದಿ ಸರ್ಕಲ್, ಸಂಜಯನಗರ, ವೀರಭದ್ರನಪಾಳ್ಯ, ಚೈತನ್ಯನಗರ, ವಿದ್ಯಾನಗರ, ಕನಕದಾಸ ರಸ್ತೆ, ಕುಚ್ಚಪ್ಪನಪೇಟೆ, ಕೊಂಗಾಡಿಯಪ್ಪ ಮುಖ್ಯರಸ್ತೆ, ರಂಗಪ್ಪ ಸರ್ಕಲ್, ಗಾಂಧಿನಗರ, ತೂಬಗೆರೆ ಪೇಟೆ, ಬ್ರಾಹ್ಮಣರ ಬೀದಿ, ಖಾಸಬಾಗ್, ಶ್ರೀನಗರ, ಚಂದ್ರಶೇಖರಪುರ, ರೈಲ್ವೆ ನಿಲ್ದಾಣ, ಅರೇಹಳ್ಳಿ ಗುಡ್ಡದಹಳ್ಳಿ, ಮೂತ್ತೂರು, ಸಿದ್ದೇನಾಯಕನಹಳ್ಳಿ, ಹಾಗು ಸುತ್ತಮುತ್ತಲಿನ ಪ್ರದೇಶಗಳು.

Ramesh Babu

Journalist

Recent Posts

ಮಾರ್ಖಂಡೇಯ ಜಲಾಶಯದ ನೀರು ಪೋಲು ತಡೆಗೆ ಚಲುವರಾಯಸ್ವಾಮಿ ಖಡಕ್ ಸೂಚನೆ

ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್‌. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…

7 hours ago

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

12 hours ago

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

15 hours ago

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

17 hours ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

1 day ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

1 day ago