ಇಂಡಿಯನ್ ಆಯಿಲ್ ಸ್ಕೈ ಟ್ಯಾಂಕಿಂಗ್ ನಲ್ಲಿ ಬೆಂಕಿ ಅನಾಹುತ: ಅಣುಕು ಪ್ರದರ್ಶನ

 

ದೇವನಹಳ್ಳಿ ವ್ಯಾಪ್ತಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಹತ್ತಿರವಿರುವ ಇಂಡಿಯನ್ ಆಯಿಲ್ ಸ್ಕೈ ಟ್ಯಾಂಕಿಂಗ್ ಪ್ರೈವೇಟ್ ಲಿಮಿಟೆಡ್‌ನ ಅನಿಲ ಸಂಗ್ರಹಾಗಾರದಲ್ಲಿ ಅನಿಲವನ್ನು ಪೈಪ್ ಲೈನ್ ಮೂಲಕ ವರ್ಗಾವಣೆ ಮಾಡುವ ಸಂದರ್ಭದಲ್ಲಿ ಅನಿಲವು ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡು ಇಡೀ ಪ್ರದೇಶವೇ ಹೊಗೆಯಿಂದ ತುಂಬಿಹೋಯಿತು! ತಕ್ಷಣವೇ ಸಂಬಂಧಿಸಿದ ಕಾರ್ಮಿಕರು ಸಂವಹನ ಕೇಂದ್ರಕ್ಕೆ ಕರೆ ಮಾಡಿ ಪರಿಸ್ಥಿತಿಯನ್ನು ವಿವರಿಸಿದರು.

ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ, ವೈದ್ಯಾಧಿಕಾರಿಗಳು, ಅನಿಲ ಸೋರಿಕೆ ತಪಾಸಣಾ ಸಿಬ್ಬಂದಿಯನ್ನು ಕೂಡಲೇ ಸ್ಥಳಕ್ಕೆ ಬರುವಂತೆ ತಿಳಿಸಿದರು. ಎಲ್ಲಾ ಪ್ರಮುಖ ರಸ್ತೆಗಳನ್ನು ಬಂದ್‌ ಮಾಡಿ ವಾಹನಗಳ ಮತ್ತು ಜನರ ಓಡಾಟವನ್ನು ನಿರ್ಬಂಧಿಸಿ ಅಪಾಯದ ಮುನ್ನೆಚ್ಚರಿಕೆಯ ಕ್ರಮವಾಗಿ ಸೈರನ್ ಮೊಳಗಿಸಲಾಯಿತು.

ಸುತ್ತಮುತ್ತಲಿನ ಜನರಿಗೆ ಅಲ್ಲಿ ಏನಾಗುತ್ತಿದೆ ಎಂಬುದರ ಬಗ್ಗೆ ಅರಿವಿರಲಿಲ್ಲ. ತಕ್ಷಣ ಅಗ್ನಿಶಾಮಕ ಸಿಬ್ಬಂದಿಯು ಸ್ಥಳಕ್ಕೆ ಆಗಮಿಸಿ ಪೈಪುಗಳ ಮೂಲಕ ರಭಸವಾಗಿ ನೀರನ್ನು ಹರಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದು ಹೆಚ್ಚಿನ ಯಾವುದೇ ಅವಘಡಗಳು ಸಂಭವಿಸದಂತೆ ಸನ್ನಿವೇಶವನ್ನು ತಹಬಂದಿಗೆ ತಂದರು, ಈ ಅವಘಡದಲ್ಲಿ ಇಬ್ಬರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು , ವೈದ್ಯಕೀಯ ಸಿಬ್ಬಂದಿ ಅವರಿಗೆ ಪ್ರಥಮ ಚಿಕಿತ್ಸೆಯನ್ನು ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿರುವುದಿಲ್ಲ.

ಇದು ನೈಜ ಘಟನೆಯಲ್ಲ ಬದಲಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿಗಳಾದ ಎನ್ ಶಿವಶಂಕರ್ ಅವರ ಅಧ್ಯಕ್ಷತೆ ಮತ್ತು ಮಾರ್ಗದರ್ಶನದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ವತಿಯಿಂದ ನಡೆದ ಅಣಕು ಪ್ರದರ್ಶನವಾಗಿತ್ತು.

ಈ ಅಣುಕು ಪ್ರದರ್ಶನದಿಂದ ಜನ ಸಾಮಾನ್ಯರು ಆತಂಕ ಪಡುವ ಅವಶ್ಯಕತೆ ಇರುವುದಿಲ್ಲ. ಮೇಲಿನ ಘಟನೆಯು ಪ್ರತಿ ಆರು ತಿಂಗಳಿಗೊಮ್ಮೆ ಎಲ್ಲಾ ಕಾರ್ಖಾನೆ ಮತ್ತು ಎಲ್.ಪಿ.ಜಿ ಪ್ಲಾಂಟ್ ಗಳಲ್ಲಿ ಎಂದಿನಂತೆ ನಡೆಸುವ ತುರ್ತು ಸ್ಪಂದನ ಕಾರ್ಯದ (ERP) ಅಣುಕು ಪ್ರದರ್ಶನದ ಒಂದು ಭಾಗವಷ್ಟೇ ಆಗಿತ್ತು.

ಇಂತಹ ಅವಘಡಗಳು ಸಂಭವಿಸಿದಾಗ ಸಿಬ್ಬಂದಿಯು ಜಾಗೃತರಾಗಿರಲು ಸನ್ನದ್ಧರಾಗಿರುವಂತೆ ಮಾಡಲು ನಡೆಸುವ ಅಣುಕು ಪ್ರದರ್ಶನ ಕಸರತ್ತಿನಲ್ಲಿ ನಿಜವಾಗಿಯು ನಡೆಯುವ ನೈಜ ಘಟನೆಯಂತೆಯೇ ಸಂದರ್ಭವನ್ನು ಮರು ಸೃಷ್ಟಿಸಲಾಗುತ್ತದೆ. ಸಿಬ್ಬಂದಿ ಮತ್ತು ಸುತ್ತಮುತ್ತಲಿನ ಜನರು ಅವಘಡಗಳು ಸಂಭವಿಸಬಹುದಾದಂತಹ ಸಂದರ್ಭದಲ್ಲಿ, ಸುರಕ್ಷಿತ ಕ್ರಮಗಳನ್ನು ಪಾಲಿಸಿ ಸೂಕ್ತ ರಕ್ಷಣೆ ಪಡೆದುಕೊಳ್ಳುವ ಉದ್ದೇಶದಿಂದ ಜನರಿಗೆ ಜಾಗೃತಿ ಮೂಡಿಸಲು ಹಮ್ಮಿಕೊಳ್ಳಲಾಗುತ್ತದೆ.

ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ವತಿಯಿಂದ ಜಿಲ್ಲಾ ವಿಪತ್ತು ಪರಿಣಿತರಾದ ಎ. ಬಸವರಾಜು, ಕಾರ್ಖಾನೆಗಳ ಮತ್ತು ಬಾಯ್ಲರ್‌ಗಳ ಇಲಾಖೆಯ ಜಂಟಿ ನಿರ್ದೇಶಕರಾದ ನವನೀತ್ ಮೋಹನ್ ಮತ್ತು ಉಪ ನಿರ್ದೇಶಕರಾದ ಎಂ ಎ ಸೋಮಶೇಖರ್ ಈ ಅಣುಕು ಪ್ರದರ್ಶನ ಕಾರ್ಯಕ್ರಮದ ವೀಕ್ಷಕರಾಗಿ ಭಾಗವಹಿಸಿ, ಅಣುಕು ಪ್ರದರ್ಶನ ನಡೆಸುವ ಬಗ್ಗೆ ಹಾಗೂ ಸಿಬ್ಬಂದಿ ಸುರಕ್ಷತೆಯ ಕುರಿತು ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು.

ದೇವನಹಳ್ಳಿ ತಾಲ್ಲೂಕು ಆಗ್ನಿ ಶಾಮಕ ಮತ್ತು ತುರ್ತು ಸೇವೆಗಳ ಮುಖ್ಯಸ್ಥರಾದ ನಾಗೇಶ್, ಕಾರ್ಯಾಚರಣೆ ಪ್ರಧಾನ ವ್ಯವಸ್ಥಾಪಕರಾದ ಹರಿರಾಮ್, ಸುರಕ್ಷತೆ, ಭದ್ರತೆ ಮತ್ತು ಪರಿಹಾರ ವಿಭಾಗದ ಹಿರಿಯ ಅಧಿಕಾರಿಗಳಾದ ಶ್ರೀನಿವಾಸ್, ಈ ಅಣುಕು ಪ್ರದರ್ಶನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು, ಇಂಡಿಯನ್ ಆಯಿಲ್ ಟ್ಯಾಂಕಿಂಗ್ ಸಿಇಒ, ಮತ್ತು ನಿರ್ದೇಶಕರಾದ ಟಿ ಎಸ್ ದುಪಾರೆ ಅವರ ಮೇಲ್ವಿಚಾರಣೆಯಲ್ಲಿ ಅಣುಕು ಪ್ರದರ್ಶನ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲಾಯಿತು.

Ramesh Babu

Journalist

Recent Posts

ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಿ- ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಸಲಹೆ

ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…

4 hours ago

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

14 hours ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

1 day ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

1 day ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

1 day ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

1 day ago