ತಾಲೂಕು ಮಟ್ಟದಲ್ಲಿ 2023-24ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಮಾ.25ರಿಂದ ಏಪ್ರಿಲ್ 6ರವರೆಗೆ ನಡೆಯಲಿದ್ದು, ಈ ಪರೀಕ್ಷೆಯನ್ನ ಶಿಕ್ಷಣ ಇಲಾಖೆ ಮಾರ್ಗದರ್ಶನದಂತೆ ಪಾರದರ್ಶಕವಾಗಿ ನಡೆಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಸೈಯದಾ ಅನೀಸ್ ತಿಳಿಸಿದ್ದಾರೆ.
ನೋಂದಾಯಿತ ಅಂಕಿಅಂಶ
ತಾಲ್ಲೂಕಿನಲ್ಲಿ 17 ಸರ್ಕಾರಿ ಪ್ರೌಢಶಾಲೆಗಳು, 4 ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಪ್ರೌಢಶಾಲೆಗಳು, 12 ಅನುದಾನಿತ ಪ್ರೌಢಶಾಲೆಗಳು, 30 ಅನುದಾನರಹಿತ ಪ್ರೌಢಶಾಲೆಗಳು ಸೇರಿದಂತೆ ಒಟ್ಟು 63 ಪ್ರೌಢಶಾಲೆಗಳಿದ್ದು, ಪ್ರೌಢಶಾಲೆಗಳಿಂದ ಬಾಲಕರು 1986, ಬಾಲಕಿಯರು 1977 ಒಟ್ಟು 3963 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ.
ವೆಬ್ ಕಾಸ್ಟಿಂಗ್:
ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಮುಖ್ಯ ಅಧೀಕ್ಷಕರು, ಪ್ರಶ್ನೆ ಪತ್ರಿಕೆ ಕಸ್ಟೋಡಿಯನ್, ಕೊಠಡಿ ಮೇಲ್ವಿಚಾರಕರನ್ನು ನೇಮಿಸಲಾಗಿದೆ. ಮೊಬೈಲ್ ಸ್ವಾಧೀನಾಧಿಕಾರಿ ನೇಮಕ, ಸಿಸಿಟಿವಿ ಅಳವಡಿಕೆ, ಪರೀಕ್ಷಾ ಕೇಂದ್ರಗಳಲ್ಲಿನ ಚಟುವಟಿಕೆ ವೀಕ್ಷಣೆ ಮಾಡಲು ಜಿಲ್ಲಾ ವೀಕ್ಷಣಾ ಕೊಠಡಿ ಸ್ಥಾಪನೆ ಮಾಡಲಾಗಿದೆ.
ಮೂಲಭೂತ ಸೌಕರ್ಯ:
ಪರೀಕ್ಷಾ ಕೇಂದ್ರಗಳ 100 ಮೀ. ಅಂತರದಲ್ಲಿ ನಿಷೇಧಾಜ್ಞೆ ಜಾರಿ ಮತ್ತು ಪರೀಕ್ಷಾ ಕೇಂದ್ರಗಳ ಸುತ್ತಲಿನ ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆ ಆದೇಶ ಮಾಡಲಾಗಿದೆ. ಕ್ಷೇತ್ರ ಶಿಕ್ಷಣಾಧಿಕಾರಿಗಳ ತಂಡ ಪ್ರತಿ ಪರೀಕ್ಷಾ ಕೇಂದ್ರಕ್ಕೂ ಅನಿರೀಕ್ಷಿತ ಭೇಟಿ. ಪ್ರತಿ ಕೇಂದ್ರಕ್ಕೆ ವೈದ್ಯಕೀಯ ಸಿಬ್ಬಂದಿಯನ್ನು ನೇಮಿಸಲಾಗಿದೆ, ವಿದ್ಯಾರ್ಥಿಗಳು ಪರೀಕ್ಷೆಗಳನ್ನು ಬರೆಯಲು ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳನ್ನ ಅಳವಡಿಸಿಲಾಗಿದೆ.
ತಾಲೂಕಿನ ಪರೀಕ್ಷಾ ಕೇಂದ್ರಗಳು:
ಸರ್ಕಾರಿ ಪದವಿ ಪೂರ್ವ ಕಾಲೇಜು, ದೊಡ್ಡಬಳ್ಳಾಪುರ ನಗರ, ಶ್ರೀ ದೇವರಾಜ ಅರಸು ಪ್ರೌಢಶಾಲೆ, ಕರ್ಮಲ್ ಜ್ಯೋತಿ ಪ್ರೌಢಶಾಲೆ, ಕೊಂಗಾಡಿಯಪ್ಪ ಪ್ರೌಢಶಾಲೆ, ಅರಳು ಮಲ್ಲಿಗೆ ಬಾಗಿಲು ಸರ್ಕಾರಿ ಪ್ರೌಢಶಾಲೆ, ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆ, ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು, ಮೆಳೆಕೋಟೆ ಕ್ರಾಸ್ ನ ಎಸ್ ಜೆಸಿಆರ್ ಪ್ರೌಢಶಾಲೆ, ದೊಡ್ಡಬೆಳವಂಗಲದ ಕರ್ನಾಟಕ ಪಬ್ಲಿಕ್ ಶಾಲೆ, ಹುಲಿಕುಂಟೆ ಸರ್ಕಾರಿ ಪ್ರೌಢಶಾಲೆ, ಕನಸವಾಡಿ ಸರ್ಕಾರಿ ಪದವಿ ಪೂರ್ವ ಕಾಲೇಜು, ಚೆನ್ನವೀರನಹಳ್ಳಿ ಸರ್ಕಾರಿ ಪ್ರೌಢಶಾಲೆ, ಹೊಸಹಳ್ಳಿ ಸರ್ಕಾರಿ ಪ್ರೌಢಶಾಲೆ ಹಾಗೂ ಕಾಡನೂರು ಕೈಮರ ಶ್ರೀರಾಮ ಪ್ರೌಢಶಾಲೆಯಲ್ಲಿ ಪರೀಕ್ಷೆ ನಡೆಯಲಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ತಿಳಿಸಿದ್ದಾರೆ.
ಪರೀಕ್ಷಾ ವೇಳಾಪಟ್ಟಿ
* 25-ಮಾರ್ಚ್- ಮೊದಲ ಭಾಷೆ: ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಇಂಗ್ಲಿಷ್ (NCERT), ಸಂಸ್ಕೃತ.
* 27-ಮಾರ್ಚ್- ಸಮಾಜ ವಿಜ್ಞಾನ
* 30-ಮಾರ್ಚ್- ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ, ಕರ್ನಾಟಕ ಸಂಗೀತ/ಹಿಂದೂಸ್ತಾನಿ ಸಂಗೀತ
* 2-ಏಪ್ರಿಲ್- ಗಣಿತ/*ಸಮಾಜಶಾಸ್ತ್ರ
* 3-ಏಪ್ರಿಲ್- ಎಲೆಕ್ಟ್ರಿಕಲ್ ಇಂಜಿನಿಯರಿಂಗ್ IV ನ ಅಂಶಗಳು, ಮೆಕ್ಯಾನಿಕಲ್ ಇಂಜಿನಿಯರಿಂಗ್ ಅಂಶಗಳು-2, ಮೆಕ್ಯಾನಿಕಲ್ ಇಂಜಿನಿಯರಿಂಗ್ ಅಂಶಗಳು – IV, ಎಂಜಿನಿಯರಿಂಗ್ ಗ್ರಾಫಿಕ್ಸ್-2, ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ ಅಂಶಗಳು-IV, ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಅಂಶಗಳು, ANSI ‘C’ ನಲ್ಲಿ ಪ್ರೋಗ್ರಾಮಿಂಗ್, ಕಂಪ್ಯೂಟರ್ ವಿಜ್ಞಾನ, ಅರ್ಥಶಾಸ್ತ್ರ
* 4-ಏಪ್ರಿಲ್- ತೃತೀಯ ಭಾಷೆ: ಹಿಂದಿ, ಕನ್ನಡ, ಇಂಗ್ಲಿಷ್, ಪರ್ಷಿಯನ್, ಅರೇಬಿಕ್, ತುಳು, ಉರ್ದು, ಸಂಸ್ಕೃತ, ಕೊಂಕಣಿ, NSQF ವಿಷಯಗಳು
* 6-ಏಪ್ರಿಲ್- ದ್ವಿತೀಯ ಭಾಷೆ: ಇಂಗ್ಲಿಷ್, ಕನ್ನಡ
ಇಂದಿನಿಂದ ಆರಂಭವಾದ ಎಸ್.ಎಸ್.ಎಲ್.ಸಿ ಪರೀಕ್ಷೆ ಎದುರಿಸುತ್ತಿರುವ ನನ್ನೆಲ್ಲಾ ಆತ್ಮೀಯ ವಿದ್ಯಾರ್ಥಿಗಳು ಭಯ, ಆತಂಕ ಬಿಟ್ಟು ಧೈರ್ಯ ಹಾಗೂ ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಿರಿ, ಯಶಸ್ಸು ನಿಮ್ಮದಾಗಲಿ…
ಆಲ್_ದಿ_ಬೆಸ್ಟ್💐 ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ನವರು ವಿದ್ಯಾರ್ಥಿಗಳಿಗೆ ಶುಭಕೋರಿದ್ದಾರೆ.
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…
ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರ ಕೋಲಾರ ಇವರ ಸಹಯೋಗದಲ್ಲಿ ರೇಮಂಡ್ ಕಂಪನಿ ಸಮೂಹದ ಸಿಲ್ವರ್ ಸ್ಪಾರ್ಕ್…