ಇಂದಿನಿಂದ ಕನಸವಾಡಿಯಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಸ್ಥಳಕ್ಕೆ ಡಿಸಿ, ಎಸಿ, ತಹಶೀಲ್ದಾರ್ ಭೇಟಿ, ಪರಿಶೀಲನೆ: ಕೆಲವೇ ಹೊತ್ತಲ್ಲಿ ಸಮ್ಮೇಳನ ಉದ್ಘಾಟನೆ

ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿ ಕನಸವಾಡಿಯ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಇಂದಿನಿಂದ (ಏ.12 ಮತ್ತು 13) ಭಾನುವಾರದವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ 26ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಈಗಾಗಲೇ ಸಕಲ‌ ಸಿದ್ಧತೆ ನಡೆಸಲಾಗಿದೆ.

ಇನ್ನೇನು ಕೆಲವೇ ಗಂಟೆಗಳಲ್ಲಿ ಗೊ.ರು.ಚನ್ನಬಸಪ್ಪ ಅವರಿಂದ 26ನೇ ಕನ್ನಡ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮ ಉದ್ಘಾಟನೆ ಆಗಲಿದೆ. ಈ ಹಿನ್ನೆಲೆ ಸ್ಥಳಕ್ಕೆ ಜಿಲ್ಲಾಧಿಕಾರಿ ಎ.ಬಿ.ಬಸವರಾಜು, ದೊಡ್ಡಬಳ್ಳಾಪುರ‌ ಉಪವಿಭಾಗಾಧಿಕಾರಿ ದುರ್ಗಾಶ್ರೀ, ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಈ ಬಾರಿ ಸಮ್ಮೇಳನದ ವೇದಿಕೆಗೆ ಹಿರಿಯ ಕ್ರೀಡಾಪಟು ದಿ.ಜಿ.ಗೋಪಿನಾಥ್ ಅವರ ಹೆಸರನ್ನು ಮತ್ತು ಮಹಾದ್ವಾರಕ್ಕೆ ಮುತ್ಸದ್ಧಿ ರಾಜ ಕಾರಣಿ ದಿವಂಗತ ಸಿ.ಡಿ,ಸತ್ಯನಾರಾಯಣ ಗೌಡರ ಹೆಸರನ್ನು ಇಡಲಾಗಿದೆ. ಹಿರಿಯ ಛಾಯಾಗ್ರಾಹಕ, ಸಾಕ್ಷ್ಯಚಿತ್ರ ಕಲಾವಿದ ಟಿ. ಕೆಂಪಣ್ಣಸಮ್ಮೇಳನದ ಸರ್ವಾಧ್ಯಕ್ಷರಾಗಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಡೋಜ ಡಾ.ಮಹೇಶ್ ಜೋಶಿ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪ, ಸಂಸದ ಡಾ.ಕೆ.ಸುಧಾಕರ್, ಶಾಸಕ ಧೀರಜ್ ಮುನಿರಾಜ್ ಗಣ್ಯರು ಭಾಗವಹಿಸಲಿದ್ದಾರೆ ಎಂದು ಬೆಂ.ಗ್ರಾ ಜಿಲ್ಲಾ ಕಸಾಪ ಅಧ್ಯಕ್ಷ ಬಿ.ಎನ್.ಕೃಷ್ಣಪ್ಪ ತಿಳಿಸಿದ್ದಾರೆ.

ಸಮ್ಮೇಳನದಲ್ಲಿ ವಿಚಾರಗೋಷ್ಠಿ, ಕವಿಗೋಷ್ಠಿ ನಡೆಯಲಿವೆ. 50ಕ್ಕೂ ಹೆಚ್ಚಿನ ಸಾಧಕ ಗಣ್ಯರಿಗೆ ಪುರಸ್ಕಾರ ನೀಡಲಾಗುತ್ತಿದೆ. ವಿವಿಧ ಇಲಾಖೆಗಳಿಂದ ವಸ್ತುಪ್ರದರ್ಶನ ಮಳಿಗೆಗಳನ್ನು ತೆರೆಯಲು ಜಿಲ್ಲಾಡಳಿತ ಯೋಜಿಸಿದೆ. ಎರಡೂ ದಿನಗಳ ಕಾಲ ಪುಸ್ತಕ ಪ್ರದರ್ಶನ ಮತ್ತು ಮಾರಾಟ ವ್ಯವಸ್ಥೆ ಇರಲಿದೆ ಎಂದು ತಿಳಿಸಿದರು.

ಸಮ್ಮೇಳನದಲ್ಲಿ ಮೊದಲ ದಿನ ಧ್ವಜಾರೋಹಣ, ಸಮ್ಮೇಳನಾಧ್ಯಕ್ಷರ ಮೆರವಣಿಗೆ, ಉದ್ಘಾಟನಾ ಕಾರ್ಯಕ್ರಮ, ಕನ್ನಡದ ಅರಿವು ಮತ್ತು ಅಭಿಯಾನ ಕುರಿತ ವಿಚಾರಗೋಷ್ಠಿ ತ.ನ.ಪ್ರಭು ದೇವ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಚಿಂತಕ ಕೆ.ರಾಜಕುಮಾರ್‌ವಿಚಾರ ಮಂಡನೆ ಮಾಡಲಿದ್ದಾರೆ. ಯುವ ಕವಿಗೋಷ್ಠಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದರು.

ಆತಂಕಗಳು ಕುರಿತ ವಿಚಾರಗೋಷ್ಠಿಯು ವಿಮರ್ಶಕ ಪ್ರೊ.ಎಂ.ಜಿ.ಚಂದ್ರಶೇಖರಯ್ಯ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ಸಾವಯವ ಕೃಷಿ ತಜ್ಞ ತಜ್ಞ ಡಾ.ಶಿವನಾಪುರ ರಮೇಶ್, ಜಗನ್ನಾಥ್‌ ಪ್ರಕಾಶ್ ವಿಷಯ ಮಂಡನೆ ಮಾಡುವರು. ಬಳಿಕ ಸಮ್ಮೇಳನಾಧ್ಯಕ್ಷರೊಂದಿಗೆ ಸಂವಾದ, ಬಹಿರಂಗ ಅಧಿವೇಶನ, ಸನ್ಮಾ ಹಾಗೂ ಸಮಾರೋಪ ಆಯೋಜನೆಗೊಂಡಿವೆ ವಿವರಿಸಿದರು.

ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಅವರಿಂದ ರಾಷ್ಟ್ರಧ್ವಜಾರೋಹಣ ನಡೆದಿದೆ.

ಉಪವಿಭಾಗಾಧಿಕಾರಿ, ತಹಶೀಲ್ದಾರ್, ಜಿಲ್ಲಾ ಕಸಾಪ ಅಧ್ಯಕ್ಷ, ಕಾರ್ಯದರ್ಶಿ, ಸೇವಾದಳ ಜಿಲ್ಲಾಧ್ಯಕ್ಷ, ತಾ.ಕಸಾಪ, ಹೋಬಳಿ ಕಸಾಪ ಅಧ್ಯಕ್ಷರು ಸೇರಿದಂತೆ ಇತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *