ಇಂದಿನಿಂದ ಘಾಟಿ ಸುಬ್ರಹ್ಮಣ್ಯ ದನಗಳ ಜಾತ್ರೆ ಪ್ರಾರಂಭ:  ಎಎಸ್ಪಿ ವೆಂಕಟೇಶ್ ಪ್ರಸನ್ನ ಭೇಟಿ, ಪರಿಶೀಲನೆ

ಇಂದಿನಿಂದ ಇತಿಹಾಸ ಪ್ರಸಿದ್ಧ ಘಾಟಿ ಸುಬ್ರಹ್ಮಣ್ಯ ದನಗಳ ಜಾತ್ರೆ ಪ್ರಾರಂಭವಾಗಿದೆ. ಈ ಹಿನ್ನೆಲೆ ಈಗಾಗಲೇ ರೈತರಿಂದ ಪೂರ್ವ ಸಿದ್ಧತೆ ನಡೆಸಿಕೊಳ್ಳಲಾಗಿದೆ.  ಹೋರಿಗಳ ಮಾರಾಟ ಮತ್ತು ಪ್ರದರ್ಶನಕ್ಕೆ ದಿಬ್ಬ, ಶೆಡ್, ಪೆಂಡಾಲ್ ಗಳ ನಿರ್ಮಾಣ ಕಾರ್ಯ ನಡೆದಿದ್ದು, ಹೋರಿಗಳನ್ನು ತಂದು ಮಾರಾಟ ಹಾಗೂ ಪ್ರದರ್ಶನಕ್ಕೆ ಇರಿಸಲಾಗಿದೆ….

ಮುಂಗಾರಿನಲ್ಲಿ ಮಳೆ ಆಶ್ರಯದಲ್ಲಿ ಬೆಳೆಯಲಾಗುವ ಬೆಳೆಗಳ ಕೊಯ್ಲು ಮುಕ್ತಾಯವಾದ ನಂತರ ಪ್ರಥಮ ಬಾರಿಗೆ ನಡೆಯುವ ಘಾಟಿ ಸುಬ್ರಹ್ಮಣ್ಯ ಜಾತ್ರೆಯಲ್ಲಿ ಕೃಷಿ ಕೆಲಸಕ್ಕೆ ಬೇಕಾಗುವ ಹೋರಿಗಳನ್ನು ಖರೀದಿಸಲು ರಾಜ್ಯದ ಬಳ್ಳಾರಿ, ದಾವಣಗೆರೆ, ರಾಯಚೂರು, ಬೀದರ್ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಮಾತ್ರವಲ್ಲದೆ ಹೊರ ರಾಜ್ಯದ ತಮಿಳುನಾಡಿನ ಸೇಲಂ, ಹೊಸೂರು, ಆಂಧ್ರಪ್ರದೇಶದ ಹಿಂದೂಪುರ, ಅನಂತಪುರ, ಮಹಾರಾಷ್ಟ್ರದ ಕೊಲ್ಲಾಪುರ, ಸಾಂಗ್ಲಿ ಸೇರಿದಂತೆ ವಿವಿಧ ಕಡೆಗಳಿಂದಲು ರೈತರು ಬರುತ್ತಿದ್ದಾರೆ…

ಜಾತ್ರೆಯಲ್ಲಿ ಅಮೃತ್ ಮಹಲ್, ಹಳ್ಳಿಕಾರ್ ಸೇರಿದಂತೆ ಸ್ಥಳೀಯ ನಾಟಿ ಹೋರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟಕ್ಕೆ ಬರುತ್ತವೆ. ಹೀಗಾಗಿಯೇ ಹೆಚ್ಚಿನ ಸಂಖ್ಯೆಯಲ್ಲಿ ಹೊರ ಜಿಲ್ಲೆ, ಹೊರ ರಾಜ್ಯದ ರೈತರು ಕೃಷಿ ಕೆಲಸಗಳಿಗೆ ಹೋರಿಗಳ ಖರೀದಿಗೆ ಬರುತ್ತಿದ್ದಾರೆ.

ಈ ಬಾರಿಯ ಘಾಟಿ ಜಾತ್ರೆಯಲ್ಲಿ ಜಾನುವಾರುಗಳಿಗೆ ಹಾಗೂ ಬರುವಂತಹ ಭಕ್ತಾದಿಗಳ ವಾಹನಗಳಿಗೆ ಸುಂಕ ಇರುವುದಿಲ್ಲ. ರೈತರಿಗೆ ಮತ್ತು ರಾಸುಗಳಿಗೆ ಕುಡಿಯುವ ನೀರಿನ ವ್ಯವಸ್ಥೆ, ರಾಸುಗಳಿಗೆ ರೋಗಗಳು ಹರಡದಂತೆ ಪಶು ವೈದ್ಯರ ವ್ಯವಸ್ಥೆ ಕಲ್ಪಿಸಲಾಗಿದೆ. ರಾಸುಗಳ ಜಾತ್ರೆಗೆ ಆಗಮಿಸುವ ರೈತರಿಗೆ ತಿಂಡಿ ಮತ್ತು ಊಟದ ವ್ಯವಸ್ಥೆಯನ್ನು ದೇವಾಲಯದ ವತಿಯಿಂದ ಕಲ್ಪಿಸಲಾಗಿರುತ್ತದೆ…

ಇಂದಿನಿಂದ ಘಾಟಿ ಸುಬ್ರಹ್ಮಣ್ಯ ದನಗಳ ಜಾತ್ರೆ ವಿಶೇಷ ಹಿನ್ನೆಲೆ ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಎಸ್ಪಿ ವೆಂಕಟೇಶ್ ಪ್ರಸನ್ನ, ಡಿವೈಎಸ್ಪಿ ಪಾಂಡುರಂಗ, ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಸಾಧಿಕ್ ಪಾಷಾ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಯಾವುದೇ ಅಹಿತಕರ ಘಟನೆಗಳು, ಅಪಘಾತ ತಡೆಗಟ್ಟಲು, ವಾಹನಗಳ ಸುಗಮ ಸಂಚಾರ, ಅಪರಾಧ ಕೃತ್ಯಗಳು ನಡೆಯದಂತೆ ತಡೆಯಲು ಬೇಕಾಗುವ ಕ್ರಮಗಳನ್ನು ಕೈಗೊಳ್ಳಲಾಯಿತು…ಹಾಗೂ ಇತರೆ ಕ್ರಮಗಳನ್ನು ಕೈಗೊಳ್ಳಲಾಯಿತು…

Ramesh Babu

Journalist

Recent Posts

ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಿ- ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಸಲಹೆ

ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…

2 hours ago

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

12 hours ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

1 day ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

1 day ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

1 day ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

1 day ago