ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ “ದೊಡ್ಡಬಳ್ಳಾಪುರ ಸ್ಯಾರಿ ಸಂತೆ” ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ.
ಇಂದಿನಿಂದ ಫೆ.22ರವರೆಗೆ “ದೊಡ್ಡಬಳ್ಳಾಪುರ ಸ್ಯಾರಿ ಸಂತೆ ಇರಲಿದೆ. ಮೊದಲ ದಿನವೇ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಭಗತ್ ಸಿಂಗ್ ಕ್ರೀಡಾಂಗಣದಕ್ಕೆ ತಂಡೋಪತಂಡವಾಗಿ ಜನ ಆಗಮಿಸುತ್ತಿದ್ದಾರೆ… ಇನ್ನೇನು ಕೆಲವೇ ನಿಮಿಷಗಳಲ್ಲಿ ಉದ್ಘಾಟನೆ ನೆರವೇರಲಿದೆ…
ಕಾರ್ಯಕ್ರಮದಲ್ಲಿ ಒಟ್ಟು 54 ಸೀರೆ ಮಳಿಗೆಗಳನ್ನು ಇರಿಸಲಾಗಿದೆ. ತರೇಹವಾರಿ ಸೀರೆಗಳ ಪ್ರದರ್ಶನ ಹಾಗೂ ಮಾರಾಟ ಭರ್ಜರಿಯಾಗಿ ನಡೆಯುತ್ತಿದೆ… ತಮಗೆ ಇಷ್ಟವಾದ ಸೀರೆಗಳನ್ನು ಕೊಂಡುಕೊಳ್ಳಲು ಜನ ಮುಗಿಬಿದ್ದಿದ್ದಾರೆ…
ದೊಡ್ಡಬಳ್ಳಾಪುರದಲ್ಲಿ ನೇಕಾರಿಕೆ, ಗುಡಿ ಕೈಗಾರಿಕೆ ನಮ್ಮೆಯ ಕುಲಕಸುಬುಗಳಾಗಿವೆ. ದೊಡ್ಡಬಳ್ಳಾಪುರಕ್ಕೆ ಮ್ಯಾಂಚೆಸ್ಟರ್ ಆಫ್ ಇಂಡಿಯಾ ಬಿರುದು ಬಂದಿದೆ.. ದೊಡ್ಡಬಳ್ಳಾಪುರ ಸೀರೆಗಳ ವೈಶಿಷ್ಟ್ಯಗಳ ಬಗ್ಗೆ ಪರಿಚಯ ಮಾಡುವ ಉದ್ದೇಶದಿಂದ ಕಾರ್ಯಕ್ರಮ ಆಯೋಜನೆ.
ಉತ್ತಮ ಸೀರೆಗಳಿಗೆ ಬಹುಮಾನ ವಿತರಣೆ ಮಾಡಲಾಗುವುದು. ಉದ್ಘಾಟನಾ ಕಾರ್ಯಕ್ರಮಕ್ಕೆ ‘ಬಿಗ್ ಬಾಸ್ ಕನ್ನಡ ಸೀಸನ್ 12’ ರಿಯಾಲಿಟಿ ಶೋ ವಿನ್ನರ್ ಗಿಲ್ಲಿ ನಟ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ.
ಸೀರೆ ಸಂತೆ ಕಾರ್ಯಕ್ರಮದಲ್ಲಿ ಯಾವುದೇ ಶುಲ್ಕ ಇರುವುದಿಲ್ಲ. ಮಳಿಗೆಗಳಲ್ಲಿ ದೊಡ್ಡಬಳ್ಳಾಪುರದಲ್ಲೇ ನೇಯ್ದಿರುವ ಸೀರೆಗಳನ್ನು ಮಾತ್ರ ಪ್ರದರ್ಶನಕ್ಕೆ ಇಡಲು ಅವಕಾಶ ಕಲ್ಪಿಸಲಾಗಿದೆ. ಮಳಿಗೆಗಳನ್ನು ಇಡಲು ಹಾಗೂ ಕಾರ್ಯಕ್ರಮಕ್ಕೆ ಆಗಮಿಸುವವರಿಗೆ ಯಾವುದೇ ಶುಲ್ಕ ಇರುವುದಿಲ್ಲ.
ಮೂರು ದಿನ ವಿವಿಧ ಕಲಾ ತಂಡಗಳಿಂದ ನಗೆ ಕಾರ್ಯಕ್ರಮ, ನೃತ್ಯ ಕಾರ್ಯಕ್ರಮ, ರಸ ಮಂಜರಿ, ಮಕ್ಕಳ ಫ್ಯಾಷನ್ ಶೋ ಕಾರ್ಯಕ್ರಮ ಸೇರಿದಂತೆ ಇತರೆ ಮನರಂಜನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿರುತ್ತದೆ.
ಗಿಲ್ಲಿ ನಟ, ಪ್ರಾಣೇಶ್, ರಘು ದೀಕ್ಷಿತ್, ಕಾಮಿಡಿ ಕಿಲಾಡಿಗಳು ಶೋ ನ ಕಲಾವಿದರು ಸೇರಿದಂತೆ ಇತರರು ಮನರಂಜನೆ ಕಾರ್ಯಕ್ರಮಗಳನ್ನು ನಡೆಸಿಕೊಡಲಿದ್ದಾರೆ..
ಸ್ಟಿಂಗ್ ಆಪರೇಷನ್ ಮಾಡಿಸುವುದಕ್ಕೆ ಮುಖ್ಯಮಂತ್ರಿಗಳಿಗೆ ತಲೆ ಕೆಟ್ಟಿದೆಯೇ? ಪದೇಪದೇ ಈ ವಿಚಾರದಲ್ಲಿ ಮುಖ್ಯಮಂತ್ರಿಗಳನ್ನು ಎಳೆದು ತರುವ ಎಚ್.ಡಿ. ಕುಮಾರಸ್ವಾಮಿ ಅವರಿಗೆ…
ದೊಡ್ಡಬಳ್ಳಾಪುರ: ಯಲಹಂಕ ಸಮೀಪದ ರಾಜಾನುಕುಂಟೆ ರೈಲ್ವೆ ನಿಲ್ದಾಣದ ಬಳಿ ರೈಲ್ವೆ ಹಳಿಗಳ ಮೇಲೆ ನಿಲ್ಲಿಸಿದ್ದ ಎರಡು ರೈಲು ಬೋಗಿಗಳಿಗೆ ಬೆಂಕಿ…
ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ತೆಗೆಯುವ ದಂಧೆ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸುಮಾರು 35 ಟ್ರ್ಯಾಕ್ಟರ್ಗಳು…
ನಮ್ಮ ತೆರಿಗೆ ನಮ್ಮ ಹಕ್ಕು, ಈ ವಿಷಯದಲ್ಲಿ ರಾಜಕೀಯ ಮೀರಿ ವೈಜ್ಞಾನಿಕ ಸಮತೋಲನ ಸಾಧಿಸಬೇಕಾದುದು ಇಂದಿನ ತುರ್ತು ಅಗತ್ಯವಾಗಿದೆ..... ಕೇಂದ್ರದ…
ದೇವನಹಳ್ಳಿ: ನಿಧಾನವಾಗಿ ಸಾಗುತ್ತಿದ್ದ ಲಾರಿಗೆ ಹಿಂಬದಿಯಿಂದ ವೇಗವಾಗಿ ಬಂದ ರೇಂಜ್ ರೋವರ್ ಕಾರು ಡಿಕ್ಕಿ ಹೊಡೆದ ಪರಿಣಾಮ ಮೊಳಕಾಲ್ಮೂರು ಕ್ಷೇತ್ರದ…
ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳ ವಿವಿಧ ವೇದಿಕೆಗಳಲ್ಲಿ ಹರಿದಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಡಿಯೋಗೆ ನನ್ನ ಹೆಸರನ್ನು ಜೋಡಿಸಿ ಅಪಪ್ರಚಾರ…