ಇಂದಿನಿಂದ ಮತದಾರರಿಗೆ ಇವಿಎಂ, ವಿವಿ ಪ್ಯಾಟ್ ಕುರಿತು ಪ್ರಾತ್ಯಕ್ಷಿಕೆ: ಉಪವಿಭಾಗಾಧಿಕಾರಿ ತೇಜಸ್ ಕುಮಾರ್ ಮಾಹಿತಿ

ಇನ್ನೇನು ಕೆಲವೇ ದಿನಗಳಲ್ಲಿ ಸಾರ್ವತ್ರಿಕ ಚುನಾವಣೆ ಘೋಷಣೆ ಆಗಲಿದ್ದು, ಈ ಹಿನ್ನೆಲೆ ಚುನಾವಣಾಧಿಕಾರಿಗಳು ಚುನಾವಣೆಗೆ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 276 ಮತಗಟ್ಟೆಗಳಲ್ಲಿ ಇಂದಿನಿಂದ ಅತ್ಯಾಧುನಿಕ ತಂತ್ರಜ್ಞಾನದ ಎಂ-3 ಶ್ರೇಣಿಯ ಇವಿಎಂ ಮತಯಂತ್ರ‌ ಹಾಗೂ ವಿವಿ ಪ್ಯಾಟ್ ಕುರಿತು ಪ್ರಾತ್ಯಕ್ಷಿಕೆ ಆರಂಭ.

ಕಳೆದ ಭಾನುವಾರ ಇವಿಎಂ ಹಾಗೂ ವಿವಿ ಪ್ಯಾಟ್ ಗಳ ಮೊದಲ ಹಂತದ ತಪಾಸಣೆ ಮಾಡಿಸಿದ್ದು, ಜಿಲ್ಲಾಧಿಕಾರಿ ಕಚೇರಿಯ ಸ್ಟ್ರಾಂಗ್ ರೂಂನಲ್ಲಿ ಇರಿಸಲಾಗಿದೆ. 15 ಇವಿಎಂ ಯಂತ್ರಗಳನ್ನು ತರಬೇತಿ ಹಾಗೂ ಜಾಗೃತಿ ಮೂಡಿಸಲು ನೀಡಲಾಗಿದೆ ಎಂದು ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ತೇಜಸ್ ಕುಮಾರ್ ತಿಳಿಸಿದರು.

ವಿಧಾನಸಭೆ ಕ್ಷೇತ್ರದ ಪ್ರತಿ ಮತಗಟ್ಟೆಯಲ್ಲಿ ಮತದಾರರಿಗೆ ಇವಿಎಂ ಯಂತ್ರಗಳ ಪ್ರಾತ್ಯಕ್ಷಿಕೆ ನೀಡಲು ಪಿಡಿಒ, ಆರ್ ಐ, ವಿಎ ಹಾಗೂ ಗ್ರಾಮ ಸೇವಕರನ್ನು ಒಳಗೊಂಡ ತಂಡ ರಚಿಸಿದ್ದು, ಇಂದಿನಿಂದ ಪ್ರಾತ್ಯಕ್ಷಿಕೆ ನೀಡಲಾಗುತ್ತಿದೆ. ಜನರಲ್ಲಿ ಅರಿವು ಮೂಡಿಸಿ ಹೆಚ್ಚಿನ ಮತದಾನಕ್ಕೆ ಶ್ರಮಿಸಲಾಗುವುದು ಎಂದು ಹೇಳಿದರು.

ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಪ್ರಾತ್ಯಕ್ಷಿಕೆಗಾಗಿ ಇವಿಎಂ ಕಿಯೋಸ್ಕ್ ಇಡಲಾಗಿದ್ದು, ಇಲ್ಲಿಯೂ ಮತದಾರರಿಗೆ ನೂತನ ಮತಯಂತ್ರಗಳ ಕಾರ್ಯವೈಖರಿ ಕುರಿತು ಅರಿವು ಮೂಡಿಸಲಾಗುವುದು. ಕ್ಷೇತ್ರದ 276 ಮತಗಟ್ಟೆಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ಖಾತ್ರಿಪಡಿಸಿಕೊಳ್ಳಲಾಗಿದೆ ಎಂದು ತಹಶಿಲ್ದಾರ್ ಮೋಹನ್ ಕುಮಾರಿ ತಿಳಿಸಿದರು.

Ramesh Babu

Journalist

Recent Posts

ಎಸ್ ಐ ಆರ್…..

ನಾವು ಅಕ್ರಮ ವಲಸಿಗರಲ್ಲ, ವಂಚಕರಲ್ಲ, ಈ ಮಣ್ಣಿನ ಮೂಲ ನಿವಾಸಿಗಳು. ದಯವಿಟ್ಟು ನಮ್ಮ ಅಸ್ತಿತ್ವವನ್ನು, ಸ್ವಾಭಿಮಾನವನ್ನು ಪ್ರಶ್ನಿಸಬೇಡಿ. ನಾವು ಭಾರತೀಯರು......…

5 hours ago

ಮಾರ್ಖಂಡೇಯ ಜಲಾಶಯದ ನೀರು ಪೋಲು ತಡೆಗೆ ಚಲುವರಾಯಸ್ವಾಮಿ ಖಡಕ್ ಸೂಚನೆ

ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್‌. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…

16 hours ago

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

20 hours ago

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

23 hours ago

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

1 day ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

2 days ago