ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯು ಇಂದಿನಿಂದ (ಮಾ.1)ಆರಂಭಗೊಂಡಿದ್ದು, ನಿಗದಿತ ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಆಗಮಿಸಿ, ಸೂಚನಾ ಫಲದತ್ತ ಕಣ್ಣಾಡಿಸಿ ತಮ್ಮ ನೋಂದಣಿ ಸಂಖ್ಯೆ ಇರುವ ಕೊಠಡಿಯನ್ನು ಖಾತರಿಪಡಿಸಿಕೊಂಡು ಪರೀಕ್ಷೆ ಬರೆಯಲು ಪ್ರಾರಂಭಿಸಿದ್ದಾರೆ.
ಜಿಲ್ಲೆಯಲ್ಲಿ ಈ ಬಾರಿ 11341 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಇದರಲ್ಲಿ 10757 ಹೊಸ ವಿದ್ಯಾರ್ಥಿಗಳು, 183 ಖಾಸಗಿ ವಿದ್ಯಾರ್ಥಿಗಳು, 401 ಪುನರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ.
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 3, ದೇವನಹಳ್ಳಿ ತಾಲ್ಲೂಕಿನಲ್ಲಿ 3, ಹೊಸಕೋಟೆ ತಾಲ್ಲೂಕಿನಲ್ಲಿ 5 ಮತ್ತು ನೆಲಮಂಗಲ ತಾಲ್ಲೂಕಿನಲ್ಲಿ 6. ಒಟ್ಟು 17 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಗಿದೆ.
ಜಿಲ್ಲೆಯ ಎಲ್ಲಾ ಪರೀಕ್ಷಾ ಕೇಂದ್ರಗಳ ಕೊಠಡಿಗಳಲ್ಲಿ ಸಿಸಿ ಟಿವಿ ಕ್ಯಾಮೆರಾಗಳನ್ನು ಅಳವಡಿಸಿ ವೆಬ್ ಕಾಸ್ಟಿಂಗ್ ವ್ಯವಸ್ಥೆಯನ್ನು ಮಾಡಲಾಗಿದೆ.
ದೊಡ್ಡಬಳ್ಳಾಪುರದ ಸರ್ಕಾರಿ ಪದವಿಪೂರ್ವ ಕಾಲೇಜು, ಶ್ರೀ ಕೊಂಗಾಡಿಯಪ್ಪ ಪದವಿಪೂರ್ವ ಕಾಲೇಜು, ಶ್ರೀ ದೇವರಾಜ ಅರಸು ಪದವಿಪೂರ್ವ ಕಾಲೇಜುಗಳಲ್ಲಿ ಪರೀಕ್ಷೆ ನಿಗದಿ ಮಾಡಲಾಗಿದೆ. ತಮಗೆ ನಿಗದಿ ಮಾಡಿದ ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಸಮಯಕ್ಕೆ ಸರಿಯಾಗಿ ಆಗಮಿಸಿ ತಮಗೆ ನೀಡಿರುವ ಪರೀಕ್ಷಾ ಕೊಠಡಿಗಳನ್ನು ಖಾತರಿಪಡಿಸಿಕೊಂಡು ಪರೀಕ್ಷೆ ಬರೆಯಲು ಪ್ರಾರಂಭಿಸಿದ್ದಾರೆ.
ಕಾನೂನು ವ್ಯವಸ್ಥೆ :- ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ಅಕ್ರಮಗಳನ್ನು ತಡೆಯಲು ಬಿಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜಾಗೃತ ದಳ ವ್ಯವಸ್ಥೆ ಜೊತೆಗೆ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ಸುತ್ತಳತೆಯಲ್ಲಿ ನಿಷೇಧಾಜ್ಞೆ, ಪೊಲೀಸ್ ಭದ್ರತಾ ವ್ಯವಸ್ಥೆ, ಜೆರಾಕ್ಸ್ ಅಂಗಡಿಗಳು ಹಾಗೂ ಕಂಪ್ಯೂಟರ್ ಸೆಂಟರ್‍ಗಳನ್ನು ಮುಚ್ಚಿಸುವುದು ಸೇರಿದಂತೆ ವಿವಿಧ ಕ್ರಮಗಳನ್ನು ಕೈಗೊಂಡಿದೆ.
ಪರೀಕ್ಷಾ ದಿನಗಳು
ಮಾ.1 ಕನ್ನಡ, ಅರೇಬಿಕ್
ಮಾ.3 ಗಣಿತ, ಶಿಕ್ಷಣಶಾಸ್ತ್ರ, ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
ಮಾ.4 ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್.
ಮಾ.5 ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
ಮಾ.7 ಇತಿಹಾಸ, ಭೌತಶಾಸ್ತ್ರ
ಮಾ.10 ಐಚ್ಫಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ ಗೃಹವಿಜ್ಞಾನ.
ಮಾ.12 ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲಗಣಿತ
ಮಾ.13 ಅರ್ಥಶಾಸ್ತ್ರ
ಮಾ.15 ಇಂಗ್ಲೀಷ್
ಮಾ.17 ಭೂಗೋಳಶಾಸ್ತ್ರ
ಮಾ.18 ಜೀವಶಾಸ್ತ್ರ, ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕವಿಜ್ಞಾನ.
ಮಾ.19 ಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್ ನೆಸ್
ಮಾ.20. ಹಿಂದಿ
ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…
ಪೆನ್ ಡ್ರೈವ್....... ನಾಚಿಕೆಯಿಂದ ತಲೆತಗ್ಗಿಸಿ ನಾನೂ ಈ ವಿಷಯವನ್ನೇ ಕುರಿತು ಬರೆಯುವ ಅನಿವಾರ್ಯ ಸೃಷ್ಟಿಯಾಗಿರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತಾ...... ಬರಗಾಲ -…
"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…
ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…
ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…