ಇಂದಿನಿಂದ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01 ಆರಂಭ: ಪರೀಕ್ಷೆಗೆ ಬಂದ ವಿದ್ಯಾರ್ಥಿಗಳಿಗೆ ಗುಲಾಬಿ ನೀಡಿ ಸ್ವಾಗತಿಸಿದ ಬಿಇಒ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು  ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ 01:45 ಗಂಟೆಯ ವರೆಗೆ ನಡೆಯಲಿದ್ದು ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ.

ಎಸ್.ಎಸ್.ಎಲ್.ಸಿ ಪರೀಕ್ಷೆ-01 ಕ್ಕೆ ನಿಗದಿಪಡಿಸಿರುವ ಪರೀಕ್ಷಾ ಕೇಂದ್ರಗಳು ದೇವನಹಳ್ಳಿ ತಾಲ್ಲೂಕಿನಲ್ಲಿ 13, ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 14, ಹೊಸಕೋಟೆ ತಾಲ್ಲೂಕಿನಲ್ಲಿ 12, ನೆಲಮಂಗಲ ತಾಲ್ಲೂಕಿನಲ್ಲಿ 13 ಸೇರಿ ಒಟ್ಟು 52 ಪರೀಕ್ಷಾ ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲಾಗುತ್ತಿದೆ.

ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಕ್ಕೆ ನೋಂದಣಿ ವಿವರ ನೋಡುವುದಾದರೆ ಗಂಡು ಮಕ್ಕಳ ಸಂಖ್ಯೆ 7070, ಹೆಣ್ಣು ಮಕ್ಕಳ ಸಂಖ್ಯೆ 7244 ಸೇರಿ ಒಟ್ಟು 14,314 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆಯಲಿದ್ದಾರೆ.

ಅದರಲ್ಲಿ  ಮೊದಲ(ಪ್ರಥಮ) ಬಾರಿ ಪರೀಕ್ಷೆ  ಬರೆಯುವವರ ಸಂಖ್ಯೆ 13,418, ಪುನರಾವರ್ತಿತ ಅಭ್ಯರ್ಥಿಗಳು 896 ಮಂದಿ ಪರೀಕ್ಷೆಗೆ ಹಾಜರಾಗಲಿದ್ದಾರೆ.

ಪರೀಕ್ಷೆಗಳು ಪಾರದರ್ಶಕತೆ ಹಾಗೂ ಸುವ್ಯವಸ್ಥಿತವಾಗಿ ನಡೆಸುವ ನಿಟ್ಟಿನಲ್ಲಿ ಕರ್ನಾಟಕ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯಿಂದ ಮತ್ತು ಜಿಲ್ಲಾಡಳಿತದಿಂದ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಜಿಲ್ಲೆಯ ನಾಲ್ಕು ತಾಲ್ಲೂಕಿನ 52 ಪರೀಕ್ಷಾ ಕೇಂದ್ರಗಳ ಕೊಠಡಿಗಳಲ್ಲಿ ಸಿಸಿ ಟಿವಿ ಕ್ಯಾಮೆರಾಗಳನ್ನು ಅಳವಡಿಸಿ, ವೆಬ್ ಕಾಸ್ಟಿಂಗ್ ವ್ಯವಸ್ಥೆಯನ್ನು ಮಾಡಲಾಗಿದೆ. ಪರೀಕ್ಷಾ ಕೇಂದ್ರ ಸುತ್ತ 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಅದರಂತೆ ಇಂದಿನ ಪರೀಕ್ಷೆ ಎದುರಿಸಲು ವಿದ್ಯಾರ್ಥಿಗಳು ನಿಗದಿ ಪರೀಕ್ಷೆ ಕೇಂದ್ರಗಳಿಗೆ ಆಗಮಿಸಿ ನೋಂದಣಿ ಸಂಖ್ಯೆ, ಪರೀಕ್ಷಾ ಕೊಠಡಿ ಹುಡುಕುತ್ತಿರುವ ದೃಶ್ಯ ಕಂಡುಬಂತು.‌

ಜೊತೆಗೆ ಬಿಇಒ ಅವರು ಪರೀಕ್ಷೆಗೆ ಬಂದ ವಿದ್ಯಾರ್ಥಿಗಳಿಗೆ ಗುಲಾಬಿ ನೀಡಿ ಸ್ವಾಗತಿಸಿದರು. ದೊಡ್ಡಬಳ್ಳಾಪುರದ  ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ ಗುಲಾಬಿ ನೀಡಿ ಸ್ವಾಗತ ಕೋರಿದರು. ನಿರ್ಭೀತಿಯಿಂದ ಪರೀಕ್ಷೆ ಬರೆಯುವಂತೆ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

Ramesh Babu

Journalist

Recent Posts

ಗ್ರಾಮಗಳಲ್ಲಿ ಕುಡಿಯುವ ನೀರಿನ ಕೊರತೆಯಾಗದಂತೆ ಕ್ರಮ – ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐಟಿ ಮತ್ತು ಬಿಟಿ ಸಚಿವ ಪ್ರಿಯಾಂಕ್ ಖರ್ಗೆ

ಬೇಸಿಗೆ ಅವಧಿಯಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜಿನಲ್ಲಿ ಯಾವ ಲೋಪಗಳು ಉಂಟಾಗದಂತೆ ಮುಂಜಾಗರೂಕತಾ ಕ್ರಮ ಕೈಗೊಳ್ಳುವ ಸಲುವಾಗಿ ರಾಜ್ಯದ ಎಲ್ಲ…

7 hours ago

14 ರಿಂದ 15 ವರ್ಷದೊಳಗಿನ ಹೆಣ್ಣು ಮಕ್ಕಳಿಗೆ ತಪ್ಪದೇ ಎಚ್.ಪಿ.ವಿ ಲಸಿಕೆ ಹಾಕಿಸಿ- ಡಿಸಿ ಅನುರಾಧ

ಗರ್ಭಕಂಠ ಕ್ಯಾನ್ಸರ್ ಬಾರದಂತೆ ತಡೆಯುವಲ್ಲಿ ಹ್ಯೂಮನ್ ಪ್ಯಾಪಿಲೋಮ ವೈರಸ್ (ಎಚ್.ಪಿ.ವಿ) ಲಸಿಕೆಯು ಅತ್ಯಂತ ಪರಿಣಾಮಕಾರಿಯಾಗಿದ್ದು 14 ರಿಂದ 15 ವರ್ಷದೊಳಗಿನ…

7 hours ago

ಕೃಷಿ ಹೊಂಡದಲ್ಲಿ ಈಜಲು ಹೋಗಿ 34 ವರ್ಷದ ವ್ಯಕ್ತಿ ಸಾವು

ಕೃಷಿ ಹೊಂಡದಲ್ಲಿ ಈಜಲು ಹೋಗಿ 34ವರ್ಷದ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಲಿಂಗಾಪುರ ಗ್ರಾಮದಲ್ಲಿ ಇಂದು…

7 hours ago

ನಾಳೆ (ಏ.9ಕ್ಕೆ) ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ

ಮಾ.9ರ ಗುರುವಾರ ಮಧ್ಯಾಹ್ನ 3.00 ಗಂಟೆಗೆ 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ…

11 hours ago

ಕರ್ನಾಟಕ ವಿರೋಧಿ ‘ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರಾಜ್ಯ ಬಿಟ್ಟು ತೊಲಗಲಿ’- ಕರ್ನಾಟಕ ರಕ್ಷಣಾ ವೇದಿಕೆ‌ ಜಿಲ್ಲಾಧ್ಯಕ್ಷ ಪುರುಷೋತ್ತಮಗೌಡ ಆಗ್ರಹ

ಹಿಂದಿ ಸಾಮ್ರಾಜ್ಯಶಾಹಿಗಳ ಪರವಾಗಿ ವರ್ತಿಸುತ್ತ ಕರ್ನಾಟಕ ವಿರೋಧಿ ಧೋರಣೆ ತಳೆದಿರುವ ರಾಜ್ಯಪಾಲ  ಥಾವರ್ ಚಂದ್ ಗೆಹ್ಲೋಟ್ ಅವರನ್ನು ಕೇಂದ್ರ ಸರ್ಕಾರ…

12 hours ago

ಮಾನಸಿಕ ಗುಣಮಟ್ಟ ಪರೀಕ್ಷಿಸಿಕೊಳ್ಳುವ ಆತ್ಮಾವಲೋಕನ ನಡೆಯಲಿ…

ಭಾವ ಬಯಲಿನ‌ ಅಕ್ಕ......... ಹಸಿವಾದಡೆ ಊರೊಳಗೆ ಭಿಕ್ಷಾನ್ನಗಳುಂಟು. ತೃಷೆಯಾದಡೆ ಕೆರೆ ಹಳ್ಳ ಬಾವಿಗಳುಂಟು. ಅಂಗಶೀತಕ್ಕೆ ಬೀಸಾಟ ಅರಿವೆಗಳುಂಟು. ಶಯನಕ್ಕೆ ಹಾಳು…

18 hours ago